ಗುಣಮಟ್ಟದ ಬೀಜ ಖರೀದಿಸಿ: ಬಾಲರಾಜ
Team Udayavani, Jun 15, 2020, 6:08 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಹಾಬಾದ: ಸರ್ಕಾರ ರೈತರಿಗಾಗಿ ರಿಯಾಯತಿ ದರದಲ್ಲಿ ಬಿತ್ತನೆ ಬೀಜ ಪೂರೈಸುತ್ತಿದೆ. ನಗರದ ನಾನಾ ಅಂಗಡಿಗಳಲ್ಲಿ ಕಳಪೆ ಬೀಜ ಖರೀದಿಸದೇ ಸರ್ಕಾರದಿಂದ ನಿಗದಿಪಡಿಸಿರುವ ಸಬ್ಸಿಡಿ ರೂಪದಲ್ಲಿ ರೈತ ಸಂಪರ್ಕ ಕೇಂದ್ರದಲ್ಲಿ ಖರೀದಿಸಬೇಕು ಎಂದು ಸೇಡಂ ಉಪ ಕೃಷಿ ನಿರ್ದೇಶಕ ಬಾಲರಾಜ ರಂಗರಾವ್ ಹೇಳಿದರು.
ರೈತ ಸಂಪರ್ಕ ಕೇಂದ್ರದ ವತಿಯಿಂದ ಭಂಕೂರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಆಯೋಜಿಸಿದ್ದ ಮುಂಗಾರು ಹಂಗಾಮಿನ ಬೀಜ ವಿತರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ತಲೆಮಾರಿನಿಂದ ಕೃಷಿಯನ್ನೇ ಜೀವನದ ಆಧಾರವಾಗಿಸಿಕೊಂಡು ಬದುಕುತ್ತಿರುವ ರೈತರಿಗೆ, ಆಧುನಿಕ ಕೃಷಿ ಬಗ್ಗೆ ಮಾಹಿತಿ ತಿಳಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಬೇಕಾಗಿದೆ. ದೇಶದ ಬೆನ್ನೆಲುಬಾದ ರೈತ ಹಳೆ ಕಾಲದ ಕೃಷಿ ಪದ್ಧತಿ ಹಾಗೂ ಅವೈಜ್ಞಾನಿಕ ಪದ್ಧತಿ ಅನುಸರಿಸುತ್ತಿರುವುದರಿಂದ ಸರಿಯಾದ ಬೆಳೆಯ ನಿರ್ವಹಣೆಯಾಗದೇ ಇಳುವರಿ ಕುಂಠಿತವಾಗಿ ತೊಂದರೆಗೆ ಈಡಾಗುತ್ತಿದ್ದಾರೆ. ಆದ್ದರಿಂದ ಕೃಷಿ ಇಲಾಖೆ ಇಂತಹ ಜಾಥಾ ಮೂಲಕ, ಸಂಚಾರಿ ವಾಹನದ ಮೂಲಕ ಮಾಹಿತಿ ನೀಡುವುದರ ಜತೆಗೆ ಗ್ರಾಮಕ್ಕೆ ಭೇಟಿ ನೀಡಿ ಅವರಿಗೆ ಸಮಯ ಕೊಟ್ಟು ಸರಿಯಾದ ಮಾಹಿತಿ ನೀಡಿದರೆ ದೇಶದ ಅನ್ನದಾತನ ಬದುಕು ಹಸನಾಗುತ್ತದೆ ಎಂದು ಹೇಳಿದರು.
ಚಿತ್ತಾಪುರ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ ಮಾನಕರ, ರೈತ ಸಂಪರ್ಕ ಕೇಂದ್ರದ ಅಧಿಕಾರಿ ಕಾಶಿನಾಥ ದಂಡೋತಿ, ಸಹಾಯಕ ಕೃಷಿ ಅಧಿಕಾರಿ ಶಶಿಕಾಂತ ಭರಣಿ, ರವೀಂದ್ರಕುಮಾರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.