ಶಹಾಬಾದ: ವ್ಯಾಪಾರ-ವಹಿವಾಟು ಸುಗಮ
Team Udayavani, Nov 10, 2019, 11:58 AM IST
ಶಹಾಬಾದ: ಐತಿಹಾಸಿಕ ಅಯೋಧ್ಯೆ ತೀರ್ಪು ಹಿನ್ನೆಲೆಯಲ್ಲಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿತ್ತು. ಆದರೆ, ನಗರದಲ್ಲಿ ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ನಮಗೆ ಯಾವುದೇ ಸಂಬಂಧವಿಲ್ಲದಂತೆ ವ್ಯಾಪಾರ, ವಹಿವಾಟಿನಲ್ಲಿ ತಲ್ಲೀನರಾಗಿದ್ದರು.
ಪೊಲೀಸ್ ಇಲಾಖೆ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಿದ್ದರು. ಅಯೋಧ್ಯದ ತೀಪು ಹೊರಬಿಳುವ ಹಿನ್ನೆಲೆಯಲ್ಲಿ ಬೆಳಿಗ್ಗೆ 7ಗಂಟೆಗೆ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಎಲ್ಲ ಅಧಿಕಾರಿಗಳು, ಸಿಬ್ಬಂದಿಗಳು ನಗರದ ಮುಖ್ಯ ಭಾಗಗಳಲ್ಲಿ ಪಥಸಂಚಲನ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶ ನೀಡಿದರು.
ಅಲ್ಲದೇ ಆಟೋದಲ್ಲಿ ಧ್ವನಿವರ್ಧಕ ಮೂಲಕ ಸಾರ್ವಜನಿಕರಿಗೆ ನ.9ರಿಂದ 11ವರೆಗೆ ಸಿಆರ್‌ಪಿಸಿ ಕಲಂ 144 ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಯಿತು. ಈ ಅವಧಿಯಲ್ಲಿ ಪಟಾಕಿ, ಸಿಡಿಮದ್ದು ಉಪಯೋಗ, ಮಾರಾಟ ಹಾಗೂ ಸಾಗಾಟ, ಮೆರವಣಿಗೆ, ಬೈಕ್ ರ್ಯಾಲಿ, ವಾಹನಗಳಲ್ಲಿ ಧ್ವನಿ ವರ್ಧಕ ಬಳಕೆ, ಗುಂಪು ಸೇರುವುದು ನಿಷೇಧಿಸಲಾಗಿದೆ.
ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ವಿದ್ಯಾರ್ಥಿಗಳು ಎಂದಿನಂತೆ ಶಾಲೆಗೆ ಬಂದು ಮರಳಿ ಮನೆಗೆ ತೆರಳಿದರು. ಕಾನೂನು, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಗರದ ಪ್ರಮುಖ ವೃತ್ತಗಳಲ್ಲಿ, ರಸ್ತೆಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.