![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 5, 2017, 10:50 AM IST
ಚಿಂಚೋಳಿ: ತಾಲೂಕಿನ ಗಾರಂಪಳ್ಳಿಯಲ್ಲಿ ರವಿವಾರ ರಾತ್ರಿ ಕಿಡಿಗೇಡಿಗಳು ಡಾ| ಬಿ.ಆರ್. ಅಂಬೇಡ್ಕರ ಅವರ ಭಾವಚಿತ್ರವುಳ್ಳ ಫಲಕ್ಕೆ ಅವಮಾನಿಸಿದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ.
ಘಟನೆ ಸುದ್ದಿ ಕೇಳಿದ ತಾಲೂಕು ದಲಿತ ಮುಖಂಡರಾದ ಮಾರುತಿ ಗಂಜಗಿರಾ, ಅಮರ ಲೊಡನೋರ, ಜಗದೇವ ಗೌತಮ, ಪಾಂಡುರಂಗ ಲೊಡನೋರ, ವಾಮನರಾವ ಕೊರವಿ, ಶಿವಯೋಗಿ ರುಸ್ತಂಪುರ, ಗೌತಮ ಬೊಮ್ಮನಳ್ಳಿ, ಸಂತೋಷ ಗುತ್ತೇದಾರ, ರುದ್ರಮುನಿ ರಾಮತೀರ್ಥಕರ, ಭರತ ಬುಳ್ಳ, ಸೋಮಶೇಖರ ಬೆಡಕಪಳ್ಳಿ, ಆನಂದ ಟೈಗರ್ ಸೋಮವಾರ ಬೆಳಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಕೊಳ್ಳಬೇಕು ಎಂದು ಒತ್ತಾಯಿಸಿ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.
ಕಳೆದ ವರ್ಷ ಡಿ. 24ರಂದು ಸಹ ಇದೇ ರೀತಿ ಮಾಡಲಾಗಿತ್ತು. ಆದರೆ ಇಲ್ಲಿಯವರೆಗೂ ಆ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿಲ್ಲ ಎಂದು ಅಮರಲೊಡನೋರ ಆರೋಪಿಸಿದರು.
ಚಿಂಚೋಳಿ ಸಿಪಿಐ ಇಸ್ಮಾಯಿಲ್ ಶರೀಫ್, ಪಿಎಸ್‌ಐ ಸುರೇಶಕುಮಾರ ಚವ್ಹಾಣ, ಮಿರಿಯಾಣ ಪಿಎಸ್‌ಐ ಎ.ಎಸ್. ಪಟೇಲ್ ಗ್ರಾಮಕ್ಕೆ ಭೇಟಿ ನೀಡಿ ದಲಿತ ಮುಖಂಡರ ಮನವೊಲಿಸಿದರು. ಆದರೆ ಆರೋಪಿಗಳನ್ನು ಬಂಧಿಸುವರೆಗೆ ಪ್ರತಿಭಟನೆ ಹಿಂದಕ್ಕೆ ಪಡೆಯಲ್ಲ ಎಂದು ಪಟ್ಟು ಹಿಡಿದಾಗ ಸಿಪಿಐ ಇಸ್ಮಾಯಿಲ್ ಶರೀಫ್‌ಮಾತನಾಡಿ, ಆರೋಪಿಗಳ
ಪತ್ತೆ ಹಚ್ಚಲು ಕಲಬುರಗಿಯಿಂದ ಶ್ವಾನದಳ ಕರೆಯಿಸಲಾಗಿದೆ. ಆರೋಪಿಗಳನ್ನ ಬಂಧಿಸಿ ಕಾನೂನು ಕ್ರಮ ಕೈಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮಧ್ಯಾಹ್ನ 12:00ರ ಸುಮಾರಿಗೆ ಚಿಂಚೋಳಿ-ಕಲಬುರಗಿ ರಾಜ್ಯ ಹೆದ್ದಾರಿ(ಚಿಮ್ಮಾಇದಲಾಯಿ) ಕ್ರಾಸ್‌ನಲ್ಲಿ ಎರಡು ತಾಸು ರಸ್ತೆ ತಡೆ ನಡೆಸಿದರು. ಇದರಿಂದಾಗಿ ಕಲಬುರಗಿ ಸೇಡಂ, ಹುವåನಾಬಾದಗೆ ಸಂಚರಿಸುವ ವಾಹನಗಳು ಹಾಗೂ ಪ್ರಯಾಣಿಕರು ಪರದಾಟ ಮಾಡಬೇಕಾಯಿತು.
ಪ್ರತಿಭಟನಾಕಾರರ ಮನವಿ ಸ್ವೀಕರಿಸಿದ ಗ್ರೇಡ್ -2 ತಹಶೀಲ್ದಾರ ಮಾಣಿಕರಾವ, ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಭರವಸೆ ನೀಡಿದ ನಂತರ ರಸ್ತೆ ತಡೆ ಹಿಂದಕ್ಕೆ ಪಡೆದುಕೊಳ್ಳಲಾಯಿತು.
ಘಟನೆ ಖಂಡಿಸಿ ಡಿ.5ರಂದು ಚಿಂಚೋಳಿ ಪಟ್ಟಣದ ಬಂದ್ ಕರೆ ನೀಡಲಾಗಿದೆ ಎಂದು ದಲಿತ ಮುಖಂಡ ಮಾರುತಿ ಗಂಜಗಿರಿ ತಿಳಿಸಿದ್ದಾರೆ.
ಓರ್ವ ವಶಕ್ಕೆ
ಘಟನೆಗೆ ಸಂಬಂಧಿಸಿದಂತೆ ಗಾರಂಪಳ್ಳಿಯ ಒಬ್ಬನನ್ನು ಈಗಾಗಲೇ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮಿರಯಾಣ ಪಿಎಸ್‌ಐ ಎ. ಎಸ್.ಪಟೇಲ್ ತಿಳಿಸಿದ್ದಾರೆ.
ಖಂಡನೀಯ
ಚಿಂಚೋಳಿ: ತಾಲೂಕಿನ ಗಾರಂಪಳ್ಳಿಯಲ್ಲಿಡಾ|ಬಿ.ಆರ್. ಅಂಬೇಡ್ಕರ ಅವರ ಭಾವಚಿತ್ರವುಳ್ಳ ಫಲಕ ಅವಮಾನ
ಮಾಡಿರುವುದು ಅತ್ಯಂತ ಖಂಡನೀಯವಾಗಿದೆ ಎಂದು ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಸದೀಯ ಕಾರ್ಯದರ್ಶಿ ಡಾ| ಉಮೇಶ ಜಾಧವ ತಿಳಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಘಟನೆ ಬಗ್ಗೆ ಪರಿಶೀಲಿಸಿದ್ದಾರೆ. ಈಗಾಗಲೇ ಜಿಲ್ಲಾ ಪೊಲೀಸರಿಗೆ ವಿಷಯ ತಿಳಿಸಿದ್ದು ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಕೊಳ್ಳುವಂತೆ ಸೂಚಿಸಲಾಗಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಕೆಲವು ಕಿಡಿಗೇಡಿಗಳು ಗ್ರಾಮದಲ್ಲಿ ಅಶಾಂತಿ ವಾತಾವರಣ ಉಂಟು ಮಾಡುತ್ತಿದ್ದಾರೆ ಎಂದು ತಿಳಿಸಿದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.