Kharge ಇಂಡಿಯಾ ಒಕ್ಕೂಟಕ್ಕೆ ಅಧ್ಯಕ್ಷರಾಗಿದ್ದು ನಾಡಿನ ಹೆಮ್ಮೆ: ಶರಣ ಪ್ರಕಾಶ ಪಾಟೀಲ್
Team Udayavani, Jan 16, 2024, 3:05 PM IST
ಕಲಬುರಗಿ: ಇಂಡಿಯಾ ಒಕ್ಕೂಟದ ಅಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾಡಿ ಬಲಿಪಶು ಮಾಡಲಾಗುತ್ತಿದೆ ಎನ್ನುವ ಕೇಂದ್ರ ಸಚಿವ ಜೋಶಿ ಹೇಳಿಕೆ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಡಾ.ಶರಣ ಪ್ರಕಾಶ ಪಾಟೀಲ , ಕರ್ನಾಟಕದವರೊಬ್ಬರು ಪ್ರಧಾನಿ ಹಂತದಲ್ಲಿ ಆಯ್ಕೆಯಾಗಿರುದಕ್ಕೆ ಅಭಿಮಾನ ಪಡಬೇಕು ಎಂದು ಕಿವಿಮಾತು ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಂಡಿಯಾ ಒಕ್ಕೂಟ ಸಾಮಾನ್ಯ ಸಂಘಟನೆಯಲ್ಲ. ವಿವಿಧ ರಾಜ್ಯಗಳಲ್ಲಿನ ಪ್ರಾದೇಶಿಕ ಪಕ್ಷಗಳು ಸೇರಿ ಕೇಂದ್ರ ಸರಕಾರದ ದುರಾಡಳಿತ ಜನವಿರೋಧಿ ನೀತಿ ವಿರುದ್ದ ರಾಷ್ಟ್ರಮಟ್ಟದಲ್ಲಿ ರೂಪಿಸಿರುವ ಒಕ್ಕೂಟವಿದು. ಅದಕ್ಕೆ ತನ್ನದೇ ಆದ ಮಹತ್ವ ಇದೆ. ಒಕ್ಕೂಟದಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿರುವುದು ಕನ್ನಡಿಗರು ಹೆಮ್ಮೆ ಪಡುವ ವಿಚಾರ ಎಂದರು.
ಒಬ್ಬ ಕನ್ನಡಿಗನಾಗಿ ಪ್ರಹ್ಲಾದ್ ಜೋಷಿ ಅವರು ಹೆಮ್ಮೆ ಪಡಬೇಕಿತ್ತು. ರಾಷ್ಟ್ರಮಟ್ಟದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಗುರುತಿಸಿರುವುದಕ್ಕೆ ಹೆಮ್ಮೆ ಪಡಬೇಕಿತ್ತು. ಅದನ್ನು ಬಿಟ್ಟು ಬೇಗುದಿಯಿಂದ ಹೆದರಿಕೆ ಶುರುವಾಗಿದೆ. ಖರ್ಗೆ ಖದರ್ರಿನಿಂದ ದೇಶದಲ್ಲಿ ಹೊಸ ಬಿರುಗಾಳಿ ಎದುರಾಗಬಹುದು ಎಂದು ಭಯಭೀತರಾಗಿ ಜೋಷಿ ಅವರು ಈ ರೀತಿ ಮಾತು ಹೇಳುತ್ತಿದ್ದಾರೆ ಎಂದು ಕಿಚಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.