ಶರಣಬಸವೇಶ್ವರ ದೇವಸ್ಥಾನಕ್ಕೆ ಭಕ್ತ ಸಾಗರ
Team Udayavani, Aug 2, 2022, 2:36 PM IST
ಕಲಬುರಗಿ: ಶ್ರಾವಣದ ಮೊದಲ ಸೋಮವಾರ ನಗರದ ಪುರದೇವತೆ ಶ್ರೀ ಶರಣಬಸವೇಶ್ವರ ದೇವಸ್ಥಾನಕ್ಕೆ ಭಕ್ತರ ದಂಡು ಎಲ್ಲಡೆಯಿಂದ ಹರಿದು ಬಂತು. ದಿನವೀಡಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು.
ಜನರು ಕಾಯಿ, ಹಣ್ಣು ಕರ್ಪೂರದ ಸಮೇತ ಪೂಜೆ ಮಾಡಿ ದೇವರ ಕೃಪೆಗೆ ಪಾತ್ರವಾದರು. ಜಿಲ್ಲೆಯ ವಿವಿಧ ಕಡೆಗಳಿಂದ ಭಕ್ತರು ಭಜನೆ ಮಾಡುತ್ತಾ ಪಾದಯಾತ್ರೆ ಮುಖೇನ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದರು. ಭಜನೆ ಮಾಡಿ ಜನರನ್ನು ಭಕ್ತ ಸಾಗರದಲ್ಲಿ ಮುಳುಗಿಸಿದರು. ನಸುಕಿನಿಂದಲೇ ಭಕ್ತರು ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.
ಕೆಲವು ಭಕ್ತರು ನೈವೇದ್ಯ ಸಮರ್ಪಸಿದರು. ಕಲಬುರಗಿ, ಯಾದಗಿರಿ, ಬೀದರ್ ಸೊಲ್ಲಾಪುರ, ಅಕ್ಕಲಕೋಟೆ, ಪುಣೆ, ಹೈದ್ರಾಬಾದ್, ತೆಲಂಗಾಣದ ಹಲವು ಜಿಲ್ಲೆಗಳಿಂದ ಭಕ್ತರು ಬಂದು ದರ್ಶನ ಪಡೆದರು. ಇದರಿಂದ ಸೋಮವಾರ ದಿನವೀಡಿ ದೇವಸ್ಥಾನದಲ್ಲಿ ಜನಜಂಗುಳಿ ಕಂಡು ಬಂತು.
ವ್ಯಾಪಾರ ವಹಿವಾಟು ಜೋರು: ಸೋಮವಾರ ದಿನವಿಡೀ ನೂರಾರು ಭಕ್ತರು ದೇವಸ್ಥಾನಕ್ಕೆ ಬಂದ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣದಲ್ಲಿರುವ ವ್ಯಾಪಾರಿಗಳು ಭರ್ಜರಿ ವ್ಯಾಪಾರ ಮಾಡಿದರು. ಅಲ್ಲದೆ, ಸುತ್ತಲಿನಲ್ಲಿರುವ ಅಂಗಡಿಗಳಲ್ಲಿ ಕಾಯಿ, ಹೂವು, ಹಣ್ಣು ಮತ್ತು ಕರ್ಪೂರದ ವ್ಯಾಪಾರ ಬಲು ಜೋರಾಗಿ ನಡೆಯಿತು. ಈ ವೇಳೆಯಲ್ಲಿ ಪೊಲೀಸರು ಬಂದೋಬಸ್ತ್ ಚೆನ್ನಾಗಿ ಮಾಡಲಾಗಿತ್ತು. ಹಲವಾರು ಕಡೆಗಳಲ್ಲಿ ಮಹಿಳಾ ಪೊಲೀಸರ ನಿಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.