ಶಿವಾಜಿ ಮಹಾರಾಜರ ತತ್ವಾದರ್ಶ ಪಾಲಿಸಿ
Team Udayavani, Feb 20, 2018, 11:01 AM IST
ಜೇವರ್ಗಿ: ಇಂದಿನ ಯುವಪೀಳಿಗೆ ಛತ್ರಪತಿ ಶಿವಾಜಿ ಮಹಾರಾಜರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಪಂ ಆರೋಗ್ಯ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕ್ಕಿ ಚನ್ನಮಲ್ಲಯ್ಯ ಹಿರೇಮಠ ಹೇಳಿದರು.
ಪಟ್ಟಣದ ಮಿನಿವಿಧಾನಸೌಧದಲ್ಲಿ ಸೋಮವಾರ ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಿವಾಜಿ ಮಹಾರಾಜರು ದೇಶಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಮರಾಠ ಸಮಾಜದ ಬಾಂಧವರು ಶಿಕ್ಷಣ ಪಡೆಯುವುದರ ಮೂಲಕ ಶೈಕ್ಷಣಿಕ, ರಾಜಕೀಯ ಸ್ಥಾನಮಾನ ಗಳಿಸಬೇಕು ಎಂದು ಹೇಳಿದರು.
ಇದಕ್ಕೂ ಮುನ್ನ ಪಟ್ಟಣದ ಹಳೆ ತಹಶೀಲ್ದಾರ ಕಚೇರಿಯಿಂದ ಮಿನಿ ವಿಧಾನಸೌಧದವರೆಗೆ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರದ ಅದ್ಧೂರಿ ಮೆರವಣಿಗೆ ನಡೆಸಲಾಯಿತು. ಯಶವಂತ್ರಾಯ ಮಾಲಿಪಾಟೀಲ ಉಪನ್ಯಾಸ ನೀಡಿದರು.
ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಅಬ್ದುಲ್ ರಜಾಕ್ ಮನಿಯಾರ್, ತಾಪಂ ಇಒ ಪ್ರಭು ಮಾನೆ, ತಹಶೀಲ್ದಾರ ಬಸಲಿಂಗಪ್ಪ
ನಾಯ್ಕೋಡಿ, ಸಮಾಜದ ಮುಖಂಡರಾದ ಮಹಾದೇವಪ್ಪ ಇಜೇರಿ, ಸುಧೀಂದ್ರ ಇಜೇರಿ, ವೆಂಕೋಬರಾವ ವಾಗಣಗೇರಿ, ಗಣೇಶ ಮಹೇಂದ್ರಕರ್, ಈಶ್ವರ ಸೂರ್ಯವಂಶಿ ಮೋರಟಗಿ, ನರೇಶ ಚಂದುಕರ್, ಮಾನೋಜಿ ಯಲಗೋಡ, ಸಚೀನ ಸಾವಜಿ, ಸಂತೋಷ ಸಾವುಜಿ, ಮೈಲಾರಿ ಬಣಮಿ ಇದ್ದರು. ತಹಶೀಲ್ದಾರ ಬಸಲಿಂಗಪ್ಪ ನಾಯ್ಕೋಡಿ ಸ್ವಾಗತಿಸಿದರು. ಶಿಕ್ಷಕ ಅಮೃತ ಮಾಲಿಪಾಟೀಲ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.