ದ್ವೇಷ ರಾಜಕಾರಣ ನಿಲ್ಲಿಸದಿದ್ದರೆ ಬಿಜೆಪಿ ಸುಮ್ಮನೆ ಕೂರುದಿಲ್ಲ: ಶಿವರಾಜ ಪಾಟೀಲ್ ರದ್ದೇವಾಡಗಿ
Team Udayavani, Aug 26, 2023, 12:49 PM IST
ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ನಿರಂತರ ಅನ್ಯಾಯ ಮುಂದುವರೆದಿದ್ದು, ಅದರಲ್ಲೂ ಜಿಲ್ಲೆಯಲ್ಲಿ ನಡೆಸುತ್ತಿರುವ ದ್ವೇಷದ ರಾಜಕಾರಣ ನಿಲ್ಲಿಸದಿದ್ದಲ್ಲಿ ಬಿಜೆಪಿ ಸುಮ್ಮನೆ ಕೂಡುವುದಿಲ್ಲ ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ಎಚ್ಚರಿಸಿದರು.
ಪತ್ರಿಕಾ ಭವನದಲ್ಲಿ ಕರೆಯಲಾದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚುನಾವಣೆ ಮುಗಿದ ನಂತರ ಚಿತ್ತಾಪುರದ ಬಿಜೆಪಿ ಅಭ್ಯರ್ಥಿಯಾಗಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರ ಮೇಲೆ ಒಂದಲ್ಲೊಂದು ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ನಿರಂತರ ಕಿರುಕುಳ ಕೊಡಲಾಗುತ್ತಿದೆ. ವಿಚಾರಣೆ ನೆಪದಲ್ಲಿ ದಿನವಿಡಿ ಠಾಣೆಯಲ್ಲಿ ಕೂಡಿಸಲಾಗುತ್ತಿದೆ. ಯಾವ ಕಾರಣಕ್ಕಾಗಿ ಬಂಧಿಸಲಾಗಿದೆ ಎಂದು ಕೇಳಿದ್ದಕ್ಕೆ ಕರ್ತವ್ಯಕ್ಕೆ ಅಡ್ಡಿ ಎಂದು ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚಿತ್ತಾಪುರ ಕ್ಷೇತ್ರದ ಶಾಸಕ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ದ್ವೇಷದ ರಾಜಕಾರಣ ನೀತಿ ಅನುಸರಿಸುವ ಮುಖಾಂತರ ಆಡಳಿತ ಯಂತ್ರ ದುರುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ರದ್ದೇವಾಡಗಿ ಗಂಭೀರ ಆರೋಪ ಮಾಡಿದರು.
ಅಭದ್ರತೆ ಹಿನ್ನೆಲೆಯಲ್ಲಿ ಮಣಿಕಂಠ ರಾಠೋಡ ಅವರನ್ನು ಹತ್ತಿಕ್ಕುವ ಯತ್ನ ನಿರಂತರವಾಗ ನಡೆಯುತ್ತಿದೆ. ಒಂದು ವೇಳೆ ಅನ್ಯಾಯ, ದೌರ್ಜನ್ಯ, ದ್ವೇಷದ ರಾಜಕಾರಣ ನಿಲ್ಲಿಸದಿದ್ದರೆ ಬಿಜೆಪಿ ಪ್ರತಿಭಟನೆ ಮಾಡಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.