ಮಾ.8ರಿಂದ ಶ್ರೀ ಶರಣಬಸವೇಶ್ವರ ಜಾತ್ರೆ ಆರಂಭ


Team Udayavani, Mar 5, 2023, 3:26 PM IST

ಮಾ.8ರಿಂದ ಶ್ರೀ ಶರಣಬಸವೇಶ್ವರ ಜಾತ್ರೆ ಆರಂಭ

ಕಲಬುರಗಿ: ಈ ಭಾಗದ ದೊಡ್ಡ ಜಾತ್ರಾ ಮಹೋತ್ಸವಗಳಲ್ಲಿ ಒಂದಾಗಿರುವ ಮಹಾದಾಸೋಹಿ ಶರಣಬಸವೇಶ್ವರ 201ನೇ ಐತಿಹಾಸಿಕ ಶರಣಬಸವೇಶ್ವರ ಜಾತ್ರಾ ಮಹೋತ್ಸವ ನಗರದಲ್ಲಿ ಇದೇ ಮಾರ್ಚ್ 8ರಿಂದ ಆರಂಭವಾಗಲಿದ್ದು, ಮಾ. 12ರಂದು ಸಂಜೆ 6ಕ್ಕೆ ಮಹಾರಥೋತ್ಸವ ಜರುಗಲಿದೆ.‌

ಜಾತ್ರಾ ಮಹೋತ್ಸವ ಈ ಹಲವು ವಿಶಿಷ್ಟ ಕಾರ್ಯಗಳೊಂದಿಗೆ ಜರುಗಲಿದೆ ಎಂದು ಶ್ರೀ  ಶರಣ ಬಸವೇಶ್ವರ ಸಂಸ್ಥಾನದ ದಾಸೋಹ ಮಹಾ ಮನೆಯಲ್ಲಿ ಶ್ರೀ ಶರಣಬಸವೇಶ್ವರ ಸಂಸ್ಥಾನದ ಎಂಟನೇ ಪೀಠಾಧಿಪತಿ  ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ ಪರ್ಸನ್ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿಯವರು ಈ ಕುರಿತು ಜಂಟಿ ಸುದ್ದಿಗೋಷ್ಠಿಯಲ್ಲಿ ಜಾತ್ರಾ ಮಹೋತ್ಸವದ ಪೂರ್ಣ ವಿವರ ನೀಡಿದರು.

ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪಾಜಿ ಭಕ್ತರಿಂದ ಪಾದಪೂಜೆ ಸ್ವೀಕರಿಸಲು ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪಾದಯಾತ್ರೆ ಕೈಗೊಂಡು, ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಜಾತ್ರಾ ಮಹೋತ್ಸವ ಉದ್ಘಾಟನೆ ನೆರವೇರಲಿದೆ ಎಂದು ಹೇಳಿದರು.

ಈ ಹಿಂದಿನಂತೆ ಆಚರಣೆಗಳು ಪ್ರತಿದಿನ ಸಂಜೆ ಧಾರ್ಮಿಕ ಪ್ರವಚನಗಳಿಗೆ ಸೀಮಿತವಾಗದೆ ಸಾಂಸ್ಕೃತಿಕ ಚಟುವಟಿಕೆಗಳು ನಡೆಯುತ್ತವೆ. ಮಾರ್ಚ 11ರಂದು ಸಂಜೆ 6 ಕ್ಕೆ ಉಚ್ಚಾಯಿ ನೆರವೇರಿದರೆ ಐದನೇ ದಿನದ ಮಾರ್ಚ 12ರಂದು ಸಂಜೆ 6ಕ್ಕೆ  ರಥೋತ್ಸವದ ನಂತರ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ ಹವ್ಯಾಸಿ ಕಲಾ ಬಳಗದ  ಸದಸ್ಯರಿಂದ ಮಹಾದಾಸೋಹಿ ಶರಣಬಸವೇಶ್ವರರ ಕುರಿತು ನಾಟಕ ಪ್ರದರ್ಶನ ನಡೆಯಲಿದೆ.

ಇದೇ ಸಂದರ್ಭದಲ್ಲಿ ಜಗನ್ನಾಥ ಡಿಗ್ಗಿ ದಂಪತಿಗಳ ಸಾಮಾಜಿಕ-ಧಾರ್ಮಿಕ ಸೇವೆಯನ್ನು ಗುರುತಿಸಿ 50 ಸಾವಿರ ರೂ. ನಗದು, ಪ್ರಶಸ್ತಿಪತ್ರ, ಫಲಕ, ಶಾಲು ಒಳಗೊಂಡ “ದಾಸೋಹ ಜ್ಞಾನರತ್ನ” ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಡಾ. ಅಪ್ಪ ಹಾಗೂ ಅವ್ವಾಜಿ ವಿವರಣೆ ನೀಡಿದರು.‌

ಉದ್ಘಾಟನಾ ದಿನದಂದು ಬೆಳಗುಂಪಿಯ ಸಂಸ್ಥಾನ ಬೃಹನ್ಮಮಠದ ಶ್ರೀ ಅಭಿನವ ಪರ್ವತೇಶ್ವರ ಶಿವಾಚಾರ್ಯರು, ಮಹಾದಾಸೋಹಿ ಶರಣಬಸವೇಶ್ವರರ ಲೀಲೆಗಳು ಕುರಿತು ಧಾರ್ಮಿಕ ಪ್ರವಚನ ನೀಡಲಿದ್ದಾರೆ ಎಂದರು.

ಎರಡನೇ ದಿನ ಬಸವಕಲ್ಯಾಣದ ಶ್ರೀ ಶಿವಲಿಂಗೇಶ್ವರ ಸಂಸ್ಥಾನ ವಿರಕ್ತಮಠ ಬೀಳಗಿಯ ಶ್ರೀ ಶಿವಲಿಂಗ ಮಹಾಸ್ವಾಮಿಗಳು ಶಿವಾನುಭವ ಚಿಂತನೆ ಕುರಿತು ಮಾತನಾಡಲಿದ್ದಾರೆ. ನಂತರ ಮುಕ್ತಾಂಬಿಕಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ. ಮೂರನೇ ದಿನ ಶರಣಬಸವೇಶ್ವರ ಸಂಸ್ಥಾನಕ್ಕೆ ಮಹಾದಾಸೋಹ ಪೀಠಾಧಿಪತಿಗಳ ಕೊಡುಗೆಗಳ ಕುರಿತು ಕಟ್ಟಿಮನಿ ಸಂಸ್ಥಾನ ಹಿರೇಮಠದ ಮುಗಳನಾಗವಿಯ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯರು, ಜಗನ್ನಾಥ ಡಿಗ್ಗಿ ದಂಪತಿಗಳಿಗೆ “ದಾಸೋಹ ಜ್ಞಾನರತ್ನ” ಪ್ರಶಸ್ತಿ ಪ್ರದಾನ ಮಾಡುವರು. ನಂತರ ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ನಾಲ್ಕನೇ ದಿನ ಅಫಜಲಪುರ ತಾಲೂಕಿನ ಚಿಣಮಗೇರಾ ಮಹಾಂತಪುರದ ವೀರಮಹಾಂತ ಶಿವಾಚಾರ್ಯರು, ಮಹಾದಾಸೋಹಿ ಶರಣಬಸವೇಶ್ವರ ಮಹಿಮೆಗಳು-ಶಿವಲೀಲೆಗಳು ಕುರಿತು ಮಾತನಾಡುವರು. ನಂತರ ಶರಣಬಸವ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ಮಾಹಿತಿ ನೀಡಿದರು.

ಐದನೇ ದಿನ ಶರಣಬಸವೇಶ್ವರ ದೇವಸ್ಥಾನದಲ್ಲಿ ಶರಣಬಸವೇಶ್ವರ ರಥೋತ್ಸವ ನಡೆಯಲಿದ್ದು, ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಪಾಲ್ಗೊಳ್ಳಲಿದ್ದಾರೆ. ಒಟ್ಟಾರೆ ಮಾರ್ಚ 12 ರಿಂದ ಮೂರು ದಿನಗಳ ಕಾಲ ಪ್ರತಿದಿನ ಸಂಜೆ   ಮಹಾದಾಸೋಹಿ ಶ್ರೀ ಶರಣಬಸವೇಶ್ವರ ಮಹಾತ್ಮೆ ನಾಟಕ ಪ್ರದರ್ಶನ ನಡೆಯಲಿದ್ದು, ಆಂಧ್ರಪ್ರದೇಶದ ಶ್ರೀಶೈಲದ ಸಾರಂಗ ಮಠದ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಉದ್ಘಾಟಿಸಲಿದ್ದು, ಚೌಡಾಪುರಿ ಹಿರೇಮಠದ ಡಾ.ರಾಜಶೇಖರ ಶಿವಾಚಾರ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ವಾರಣಾಸಿ ಪುರೋಹಿತರಿಂದ ಶರಣಾರತಿ: 18ನೇ ಶತಮಾನದ ಸಂತ ಶ್ರೀ ಶರಣಬಸವೇಶ್ವರರ ಪುಣ್ಯತಿಥಿ ಅಂಗವಾಗಿ ಮಾರ್ಚ್ 12ರಂದು ರಥೋತ್ಸವ ಜರುಗಲಿದ್ದು, ನಂತರ ಇದೇ ಮೊದಲ ಬಾರಿಗೆ ಉತ್ತರ ಪ್ರದೇಶದ ವಾರಣಾಸಿಯ 12 ಪುರೋಹಿತರ ತಂಡವು ಗಂಗಾ ಆರತಿಯ ಮಾದರಿಯಲ್ಲಿ ಶರಣಾರತಿ ನೆರವೇರಿಸಲಿದ್ದಾರೆ. ಶರಣಾರತಿಯು ಕಣ್ಮನ ಸೆಳೆಯುವ ದೃಶ್ಯವಾಗಿದ್ದು, ವಿಶೇಷವಾಗಿ ನಿರ್ಮಿಸಿದ ಪೀಠದ ಮೇಲೆ ವಾರಣಾಸಿಯ ಪುರೋಹಿತರು ಆರತಿ ದೃಶ್ಯ ಜನರಿಗೆ ವೀಕ್ಷಿಸಲು ಅನುಕೂಲ ಮಾಡಿಕೊಡಲಾಗುತ್ತಿದೆ. ಇದು 201ನೇ ಶರಣಬಸವೇಶ್ವರ ಜಾತ್ರೆಯ ವೈಶಿಷ್ಟ್ಯಗಳಲ್ಲಿ ಒಂದಾಗಿದೆ ಎಂದು ಡಾ.ಶರಣಬಸವಪ್ಪ ಅಪ್ಪಾಜಿ ಹಾಗೂ ದಾಕ್ಷಾಯಿಣಿ ಅವ್ವಾಜಿ ಹೇಳಿದರು.

ಟಾಪ್ ನ್ಯೂಸ್

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

1(1)

Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.