ಸಿದ್ದರಾಮೇಶ್ವರ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ
Team Udayavani, Jan 9, 2019, 10:14 AM IST
ಕಲಬುರಗಿ: ಶರಣ ಶ್ರೀ ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿಯನ್ನು ಕಲಬುರಗಿ ನಗರ ಹಾಗೂ ತಾಲೂಕು ಕೇಂದ್ರಗಳಲ್ಲಿ ಜ. 15ರಂದು ಅದ್ಧೂರಿಯಾಗಿ ಆಚರಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ನಿರ್ಧರಿಸಲಾತು.
ಜ. 15ರಂದು ಬೆಳಗ್ಗೆ 11:30ಕ್ಕೆ ನಗರದ ಡಾ| ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಪೂಜೆ ನೆರವೇರಿಸುವ ಮೂಲಕ ಜಿಲ್ಲಾ ಮಟ್ಟದ ಜಯಂತಿ ಆಚರಿಸಲಾಗುವುದು. ಶಿಷ್ಟಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಚುನಾಯಿತ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು.
ಆಳಂದ ತಾಲೂಕಿನ ಮಾಡಿಯಳ ಅಲ್ಲಂಪ್ರಭು ಪೀಠದ ಪೂಜ್ಯ ಶಿವರಾಯ ಒಡೆಯರ ಅವರಿಗೆ ಸಾನ್ನಿಧ್ಯ ವಹಿಸಲು ಹಾಗೂ ಶ್ರೀ ಶಿವಯೋಗಿ ಸಿದ್ಧರಾಮೇಶ್ವರರ ಜೀವನ ಚರಿತ್ರೆ ಕುರಿತು ನ್ಯಾಯವಾದಿ ಶಂಕರರಾವ ಜಿ.ಉಲ್ಲೂರ ಅವರಿಂದ ವಿಶೇಷ ಉಪನ್ಯಾಸ ಆಯೋಜಿಸಲು ಸಭೆ ಒಪ್ಪಿಗೆ ಸೂಚಿಸಿತು.
ಕಾರ್ಯಕ್ರಮದ ನಂತರ ಕಲಾ ತಂಡಗಳೊಂದಿಗೆ ಶ್ರೀ ಶಿವಯೋಗಿ ಸಿದ್ಧರಾಮೇಶ್ವರರ ಭಾವಚಿತ್ರದ ಭವ್ಯ ಮೆರವಣಿಗೆ ಡಾ| ಎಸ್.ಎಂ. ಪಂಡಿತ ರಂಗಮಂದಿರದಿಂದ ಜಗತ್ ವೃತ್ತ-ಗೋವಾ ಹೋಟೆಲ್-ಕುಂಬಾರ ಗಲ್ಲಿ-ಶಾಸ್ತ್ರಿ ಚೌಕ್-ಭಗತ ಸಿಂಗ್ ಚೌಕ್ ಮಾರ್ಗವಾಗಿ ಬ್ರಹ್ಮಪುರ ವಡ್ಡರಗಲ್ಲಿಯಲ್ಲಿರುವ ಶಿವದಾಸ ಮಹಾರಾಜರ ಮಠದ ವರೆಗೆ ಸಂಚರಿಸಲು ನಿರ್ಧರಿಸಿತು.
ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಹಾಗೂ ಮೆರವಣಿಗೆಯಲ್ಲಿ ಭಾಗವಹಿಸುವವರಿಗೆ ಸೂಕ್ತ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಕಾರ್ಯಕ್ರಮ ಸ್ಥಳ ಮತ್ತು ಮೆರವಣಿಗೆ ಸಂಪನ್ನಗೊಳ್ಳುವ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು.
ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಬೇಕು. ಇದಲ್ಲದೆ ಶಾಲಾ ಕಾಲೇಜುಗಳಲ್ಲಿ ಹಾಗೂ ಆಯಾ ತಾಲೂಕಿನಲ್ಲಿ ತಾಲೂಕು ಆಡಳಿತದಿಂದ ಜಯಂತಿ ಆಚರಣೆಗೆ ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಭೀಮಾಶಂಕರ ತೆಗ್ಗೆಳ್ಳಿ ಅವರು ಸೂಚಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಹಳ್ಳಿ ಅವರು ಜಯಂತಿ ಅಂಗವಾಗಿ ಇಲಾಖೆ ಕೈಗೊಂಡ ಪೂರ್ವಸಿದ್ಧತೆ ಬಗ್ಗೆ ಸಭೆಗೆ ವಿವರಿಸಿದರು.
ಡಿವೈಎಸ್‌ಪಿ. ಶಿವಲಿಂಗಪ್ಪ ಪಟ್ಟಣ, ಜಿಲ್ಲಾ ಭೋವಿ ವಡ್ಡರ ಸಮಾಜದ ಜಿಲ್ಲಾಧ್ಯಕ್ಷ ತಿಪ್ಪಣ್ಣ ಒಡೆಯರ, ಗೌರವಾಧ್ಯಕ್ಷ ರಾಮು ನಂದೂರ, ಜಿಲ್ಲಾ ಭೋವಿ ವಡ್ಡರ ಸಮಾಜ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿದ್ಧರಾಮ ದಂಡಗುಳಕರ, ಡಾ| ಟಿ. ಭಾಗ್ಯ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.