ರೈತರಿಂದ ವಿದ್ಯುತ್ ಕಚೇರಿಗೆ ಮುತ್ತಿಗೆ-ಆಕ್ರೋಶ
Team Udayavani, Mar 18, 2022, 1:20 PM IST
ಅಫಜಲಪುರ: ಜಮೀನುಗಳಿಗೆ ದಿನದ ಏಳು ಗಂಟೆ ವರೆಗೆ ವಿದ್ಯುತ್ ಪೂರೈಸುವಂತೆ ಸರ್ಕಾರಕ್ಕೆ ಕೋರಿದರೂ ಆನೂರ ಗ್ರಾಮದ ಜಮೀನುಗಳುಳಿಗೆ ಕೆಲ ದಿನಗಳಿಂದ ಸರಿಯಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂದು ಗ್ರಾಮದ ರೈತರು ರೇವೂರ ವಿದ್ಯುತ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ರೈತ ಮುಖಂಡ ರೇವಣಸಿದ್ಧ ಬಳೂಂಡಗಿ, ಜಗದೀಶ ಹಿರೇಮಠ, ರೇವಣಸಿದ್ಧ ಕಲಶೆಟ್ಟಿ ಮಾತನಾಡಿ ತಾಲೂಕಿನ ಆನೂರ ಗ್ರಾಮಕ್ಕೆ ನಿರಂತರವಾಗಿ ವಿದ್ಯುತ್ ವ್ಯತ್ಯಯವಾಗುತ್ತಿದೆ. ಈ ಕುರಿತು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಅನೇಕ ಬಾರಿ ಮಾತನಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸದ್ಯ ಬೇಸಿಗೆ ಆವರಿಸಿದ್ದರಿಂದ ನೀರಾವರಿ ಮಾಡಿಕೊಂಡಿರುವ ರೈತರಿಗೆ ಆಂತಕ ಶುರುವಾಗಿದೆ. ಇಂತದ್ದರಲ್ಲಿ ಸಮರ್ಪಕ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಇದರಿಂದಾಗಿ ಬೆಳೆಗಳು ಒಣಗುವ ಹಂತಕ್ಕೆ ತಲುಪಿವೆ. ಇದೇ ರೀತಿ ಮುಂದುವರಿದರೆ ರೈತ ಮತ್ತಷ್ಟು ಸಾಲದ ಹೊರೆ ಹೊರಬೇಕಾಗುತ್ತದೆ. ಹೀಗೆ ನಿರ್ಲಕ್ಷಿಸಿದರೆ ಕುಟುಂಬದೊಂದಿಗೆ ಕಚೇರಿ ಎದುರು ಧರಣಿ ಕುಳಿತುಕೊಳ್ಳಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಪ್ರಗತಿಪರ ರೈತ ಶಿವಕುಮಾರ ಬಳೂಂಡಗಿ ಮಾತನಾಡಿ, ಜಮೀನುಗಳಿಗೆ ವಿದ್ಯುತ್ ಪೂರೈಸುವಲ್ಲಿ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ. ಇದರಿಂದ ನೀರಾವರಿ ಅವಲಂಬಿತ ಬೆಳೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದರು.
ರೇವೂರ ಜೇಸ್ಕಾಂ ಕಚೇರಿ ಎಸ್‌ಒ ದೇವಿಂದ್ರಪ್ಪ ಮಾತನಾಡಿ, ಆನೂರ ಗ್ರಾಮಕ್ಕೆ ಎರಡು ಟಿಸಿ ಮೂಲಕ ವಿದ್ಯುತ್ ಪೂರೈಸಲಾಗುತ್ತಿದೆ. ಇದರಲ್ಲಿ ಒಂದು ಟಿಸಿ ಕೆಟ್ಟಿದ್ದರಿಂದ ಈ ಸಮಸ್ಯೆಯಾಗಿದೆ. ನಾಲ್ಕೈದು ದಿನಗಳಲ್ಲಿ ಕೆಟ್ಟಿರುವ ಟಿಸಿ ಸರಿಪಡಿಸಿ ಸಮರ್ಪಕ ವಿದ್ಯುತ್ ಪೂರೈಸಲಾಗುವುದು ಎಂದು ಭರವಸೆ ನೀಡಿದರು.
ರೈತ ಮುಖಂಡರಾದ ರೇವಣಸಿದ್ಧ ಕಲಶೆಟ್ಟಿ, ಬಾಬು ಸೀತನೂರ, ಭೀಮರಾಯ ಕೆರಮಗಿ, ಹೊನ್ನಪ್ಪ ಪೂಜಾರಿ, ಗುರುದೇವ ಜೀರೊಳಿ, ಸುನೀಲ ಜೀರೊಳಿ, ಹಣಮಂತ್ರಾಯ ನವದಗಿ, ಶಿವಪುತ್ರ ಭೂಸನೂರ ಹೂವಪ್ಪ ಪೂಜಾರಿ, ಸಿದ್ದು ಕೆರಮಗಿ, ಆಕಾಶ ಹಳ್ಳಾಳ, ಯಶವಂತ ಉಮ್ಮನಗೋಳ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.