ಬಸ್ ಘಟಕಕ್ಕೆ ಮುತ್ತಿಗೆ-ಆಕ್ರೋಶ
Team Udayavani, Jul 20, 2022, 11:29 AM IST
ಕಾಳಗಿ: ತಾಲೂಕಿನ ಪಸ್ತಪುರ ಗ್ರಾಮಕ್ಕೆ ಶಾಲೆ ಸಮಯಕ್ಕೆ ಸರಿಯಾಗಿ ಬಸ್ ಬಾರದೇ ಇರುವುದರಿಂದ ವಿದ್ಯಾರ್ಥಿಗಳು ಖಾಸಗಿ ವಾಹನಗಳ ಮೂಲಕ ಪಟ್ಟಣಕ್ಕೆ ಆಗಮಿಸಿ ಬಸ್ ಘಟಕಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ವಿದ್ಯಾರ್ಥಿಗಳು, ಪಸ್ತಪುರ ಗ್ರಾಮದಿಂದ ಸುಲೇಪೇಟ ಪಟ್ಟಣಕ್ಕೆ ಶಾಲೆ-ಕಾಲೇಜಿಗೆ ಸುಮಾರು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೋಗುತ್ತೇವೆ. ಶಾಲೆ ಸಮಯಕ್ಕೆ ಬಸ್ಸಿನ ಸೌಕರ್ಯ ಇಲ್ಲದಿರುವುದರಿಂದ ಪ್ರತಿದಿನ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದೆ. ವಿದ್ಯಾರ್ಥಿಗಳು ಜೀಪು, ಟೆಂಪೋ ಹಾಗೂ ಇನ್ನಿತರ ಖಾಸಗಿ ವಾಹನಗಳಲ್ಲಿ ಜೋತು ಬಿದ್ದು ಸಂಚರಿಸುತ್ತಿದ್ದೇವೆ. ಖಾಸಗಿ ವಾಹನಗಳು ಇಲ್ಲದಿದ್ದರೆ ಶಾಲೆ ಬಿಟ್ಟು ಮನೆಯಲ್ಲೇ ಕೂಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆನಂತರ ಬಸ್ ಘಟಕ ವ್ಯವಸ್ಥಾಪಕ ಯಶವಂತ ಯಾತನೂರ ಅವರಿಗೆ ಮನವಿ ಸಲ್ಲಿಸಲಾಯಿತು. ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಮೇಶ ದುತ್ತರಗಿ, ಮಾಜಿ ಗ್ರಾಪಂ ಅಧ್ಯಕ್ಷ ವೀರೇಶ ಘಂಟಿ, ವೀರೇಶ ಬಾಲಿ, ಬಸವರಾಜ ಆರ್. ಬಾಲಿ, ಅಶೋಕ ಕಂಠಿ, ಗಣಪತಿ ಹರಕಂಚಿ, ಸಂತೋಷ ನಾವದಗಿ, ವೀರೇಶ ಉಳ್ಳಾಗಡ್ಡಿ, ಜಗನ್ನಾಥ ಜಾಧವ, ಈರಪ್ಪ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
England vs Newzeland Test: ನ್ಯೂಜಿಲ್ಯಾಂಡ್ ಹಿಡಿತದಲ್ಲಿ ಹ್ಯಾಮಿಲ್ಟನ್ ಟೆಸ್ಟ್
Womens T20 Cricket: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಗೆಲುವು
Ali Trophy: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: ಮುಂಬಯಿಗೆ ಪ್ರಶಸ್ತಿ ಸಂಭ್ರಮ
Friendly Cricket: ರಾಜ್ಯಸಭಾ ತಂಡದೆದುರು ಲೋಕಸಭಾ ತಂಡಕ್ಕೆ ಜಯ
Bengaluru: ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.