ತೊಗರಿ ಬೆಂಬಲ ಬೆಲೆ ಹೆಚ್ಚಿಸಲು ಸಿಂಗ್‌ಗೆ ಮನವಿ
Team Udayavani, Feb 10, 2017, 2:43 PM IST
ಕಲಬುರಗಿ: ಹೈದ್ರಾಬಾದ ಕರ್ನಾಟಕದ ವಾಣಿಜ್ಯ ಬೆಳೆ ತೊಗರಿಗೆ ಹೆಚ್ಚುವರಿ ಬೆಂಬಲ ಘೋಷಿಸುವಂತೆ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ರಾಧಾ ಮೋಹನ್ ಸಿಂಗ್ ಅವರಿಗೆ ಗುರುವಾರ ನವದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಮಾರುಕಟ್ಟೆಯಲ್ಲಿ ತೊಗರಿ ಬೆಲೆ ಬೆಂಬಲ ಬೆಲೆಗಿಂತ ಕಡಿಮೆಯಾಗಿದೆ. ಅಲ್ಲದೆ ಬೆಂಬಲ ಬೆಲೆ ಸರ್ವ ರೈತರ ನೆರವಿಗೆ ಬರುತ್ತಿಲ್ಲ. ಹೀಗಾಗಿ ತಕ್ಷಣವೇ ಹೆಚ್ಚುವರಿ ಬೆಂಬಲ ಬೆಲೆ ನೀಡಿದರೆ ರೈತರಿಗೆ ಸಹಾಯವಾಗುವುದು. ಅಲ್ಲದೆ ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸಿದಂತಾಗುತ್ತದೆ.
ಜತೆಗೆ ಖರೀದಿ ಪ್ರಕ್ರಿಯೆ ಇನ್ನಷ್ಟು ವ್ಯಾಪಕಗೊಳ್ಳಬೇಕೆಂದು ಯಡಿಯೂರಪ್ಪ ಮನವಿ ಸಲ್ಲಿಸಿ ಸಚಿವರ ಗಮನಕ್ಕೆ ತಂದರು. ಕಳೆದ ವರ್ಷ 11 ಸಾವಿರ ರೂ. ಇದ್ದ ಬೆಲೆ ಈ ವರ್ಷ 4500 ರೂ.ಗೆ ಇಳಿದಿದೆ. ಇದಕ್ಕೆ ವಿದೇಶಿ ಬೇಳೆಕಾಳುಗಳ ಮೇಲೆ ಗಣನೀಯವಾಗಿ ಆಮದು ಶುಲ್ಕ ಹಾಕದಿರುವುದು ಸೇರಿದಂತೆ ಇತರ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಲಾಯಿತು.
ಇದಕ್ಕೆ ಉತ್ತರ ನೀಡಿದ ಕೃಷಿ ಸಚಿವರು, ತೊಗರಿ ಬೆಂಬಲ ಬೆಲೆ ಹೆಚ್ಚುವರಿ ಘೋಷಣೆ ಮಾಡುವ ಸಂಬಂಧವಾಗಿ ವಿತ್ತ ಸಚಿವ ಅರುಣ ಜೈಟಿ ಅವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಭರವಸೆ ನೀಡಿದರು. ಮನವಿ ಸಲ್ಲಿಕೆ ಸಂದರ್ಭದಲ್ಲಿ ಸಂಸದರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ಜಿ.ಎಂ. ಸಿದ್ದೇಶ್ವರ, ಸುರೇಶ ಅಂಗಡಿ ಹಾಗೂ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.