ಜನರ ಸಮಸ್ಯೆಗಳಿಗೆ ಮನೆಬಾಗಿಲಿಗೆ ಪರಿಹಾರ
Team Udayavani, Jun 22, 2022, 2:34 PM IST
ಯಡ್ರಾಮಿ: ತಾಲೂಕಿನ ಕಾಚಾಪೂರ ಗ್ರಾಪಂ ವ್ಯಾಪ್ತಿಯ ಐನಾಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ರಾಜ್ಯ ಸರ್ಕಾರದ ವಿನೂತನ ಕಾರ್ಯಕ್ರಮದಡಿ ತಹಶೀಲ್ದಾರ್ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಿತು.
ತಹಶೀಲ್ದಾರ್ ಶಾಂತಗೌಡ ಬಿರಾದಾರ ಕಾರ್ಯಕ್ರಮವನ್ನು ಉದ್ಘಾಟಿಸಿ, ನಂತರ ಮಾತನಾಡಿದ ಅವರು, ತಾಲೂಕಾಡಳಿತ ಆಗಲಿ ಜಿಲ್ಲಾಡಳಿತವೇ ಆಗಲಿ ನೇರವಾಗಿ ಜನರ ಮನೆ ಬಾಗಿಲಿಗೆ ಬಂದು, ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಿ ಜನತೆಗೆ ಕಚೇರಿ ಅಲೆದಾಟ ತಪ್ಪಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮ ಇದಾಗಿದೆ. ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ಭಾಗವಹಿಸುವುದರಿಂದ ಯಾವುದೇ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಬಹುದಾಗಿದೆ. ಇದರ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕೆಂದರು.
ಸಭೆಯಲ್ಲಿ ಗೈರು ಹಾಜರಾದ ಇಲಾಖೆಗಳ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಮೇಲಧಿಕಾರಿಗಳ ಗಮನಕ್ಕೆ ತರುವ ಖಡಕ್ ಎಚ್ಚರಿಕೆ ನೀಡಿದರು.
ನಂತರ, ಮಕ್ಕಳ ಮತ್ತು ಮಹಿಳಾ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಗ್ರಾಮದ ಕೆಲ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ನಡೆಸಿಕೊಟ್ಟರು. ಗ್ರಾಮದಲ್ಲಿನ ಕುಡಿಯುವ ನೀರು, ಸಿಸಿ ರಸ್ತೆ, ಒಳಚರಂಡಿ, ವಿದ್ಯುತ್ ಸಮಸ್ಯೆಗಳ ಕುರಿತು ಮುಖಂಡರು ಮನವಿ ಪತ್ರ ಸಲ್ಲಿಸಿದರು. ರೈತರು ತಮ್ಮ ಜಮೀನುಗಳಿಗೆ ತೆರಳಲು ಸುಸಜ್ಜಿತ ರಸ್ತೆ ನಿರ್ಮಾಣ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು. ಇದೇ ವೇಳೆ ಗ್ರಾಮಸ್ಥರು ಗ್ರಾಮದ ಸಮಸ್ಯೆಗಳ ಆಲಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಿಡಿಒ, ತಾಲೂಕು ರೈತ ಸಂಪರ್ಕ ಕೇಂದ್ರ, ಪಶು ವೈದ್ಯರು, ತಾಪಂ ಸಿಬ್ಬಂದಿ, ಸಣ್ಣ ನೀರಾವರಿ ಇಲಾಖೆ ಅಭಿಯಂತರು, ಶಿಕ್ಷಣ ಇಲಾಖೆಯ ಸಿಆರ್‌ಪಿ, ಅಬಧಿಕಾರಿ ನಿರೀಕ್ಷಕ, ಬಿಸಿಎಂ ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.