ಬೆಳಕಿನೆಡೆಗೆ ಕೊಂಡೊಯ್ಯುವುದೇ ಆಧ್ಯಾತ್ಮ: ಚನ್ನಬಸವ ಶ್ರೀ
Team Udayavani, Aug 4, 2018, 11:16 AM IST
ಜೇವರ್ಗಿ: ಮನುಷ್ಯನಿಗೆ ಆವರಿಸಿರುವ ಅಜ್ಞಾನ ತೊಡೆದು ಹಾಕಿ ಜ್ಞಾನ ಬೆಳಕಿನಡೆಗೆ ಕೊಂಡೊಯ್ಯುವುದೇ ಆಧ್ಯಾತ್ಮ
ವಿದ್ಯೆ ಎಂದು ಅಥಣಿ ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ ಹೇಳಿದರು.
ತಾಲೂಕಿನ ಸೊನ್ನ ಗ್ರಾಮದ ಶಿವಾನಂದ ಶಿವಯೋಗಿ ಗ್ರಾಮೀಣ ಜನ ಕಲ್ಯಾಣ ಸಂಸ್ಥೆಯ ಗುರುಲಿಂಗಪ್ಪ ಶರಣರು ಸ್ವತಂತ್ರ ಪದವಿ ಪೂರ್ವ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಸ್ವಾಮೀಜಿ ಮಾತನಾಡಿದರು.
ವಿದ್ಯೆಗಳಲ್ಲಿಯೇ ಆಧ್ಯಾತ್ಮ ವಿದ್ಯೆ ಮೇಲು, ಧರ್ಮವಿಲ್ಲದ ವಿಜ್ಞಾನ ಕುರುಡು-ವಿಜ್ಞಾನವಿಲ್ಲದ ಧರ್ಮ ಕುಂಟು. ಎಲ್ಲರನ್ನೂ ಸಮಾನವಾಗಿ ಕಾಣುವುದೇ ನಿಜವಾದ ಸನ್ಯಾಸ, ಪರರ ಹಿತವೇ ನಿಜವಾದ ಧರ್ಮವಾಗಿದೆ ಎಂದು ಹೇಳಿದರು.
ಬೆಂಗಳೂರಿನ ಪಿಯು ಕಾಲೇಜು ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ತಿಮ್ಮಯ್ಯ ಪುರ್ಲೆ ಮಾತನಾಡಿ, ರಾಜ್ಯದಲ್ಲಿ
ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ದಕ್ಷಿಣ ಕರ್ನಾಟಕ ಭಾಗದ ಮಠ-ಮಂದಿರಗಳಿಗೆ ಅನುದಾನ ನೀಡುತ್ತಾರೆ. ಆದರೆ ಸರ್ಕಾರದ ಯಾವುದೇ ಸೌಲಭ್ಯ, ಅನುದಾನ ಪಡೆಯದೇ ಹೈದ್ರಾಬಾದ-ಕರ್ನಾಟಕ ಭಾಗದಲ್ಲಿ ಸೊನ್ನ ಮಠದ ಶಿಕ್ಷಣ ಸಂಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಸೊನ್ನ ವಿರಕ್ತ ಮಠದ ಡಾ| ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ಮತ್ತು ಕಾಲೇಜಿನ ಪ್ರಾಚಾರ್ಯ ಸದಾನಂದ ಪಾಟೀಲ
ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಡಿ.ಬಿ. ರಾಠೊಡ, ಬಾವಾ ಪಟೇಲ, ಗಿರೀಶ ರಾಠೊಡ, ಜಿ.ಎಸ್.ಪಾಟೀಲ,
ನಿಜಲಿಂಗ ದೊಡ್ಮನಿ, ಸಿ.ವಿ. ದೇಶಪಾಂಡೆ, ಗುರು ಹಿರೇಮಠ, ಅನಿಕೇತ ಗಾನೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.