ಶ್ರಮಿಕ ರೈಲು: ತವರಿನತ್ತ 1,436 ಬಿಹಾರಿಗಳು
Team Udayavani, May 21, 2020, 5:13 AM IST
ಕಲಬುರಗಿ: ಲಾಕ್‌ಡೌನ್‌ನಿಂದ ಕಲಬುರಗಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಿಲುಕಿಕೊಂಡಿದ್ದ ಬಿಹಾರ ರಾಜ್ಯದ 1,436 ಜನರು ಬುಧವಾರ ರಾತ್ರಿ 8 ಗಂಟೆಗೆ ಶ್ರಮಿಕ್ ಎಕ್ಸ್‌ಪ್ರೆಸ್ ರೈಲಿನಲ್ಲಿ ತಮ್ಮೂರಿನತ್ತ ಪ್ರಯಾಣ ಬೆಳೆಸಿದರು.
ಮಹಾಮಾರಿ ಕೋವಿಡ್ ನಿಯಂತ್ರಣಕ್ಕಾಗಿ ಕಳೆದೆರಡು ತಿಂಗಳಿನಿಂದ ಲಾಕ್‌ಡೌನ್ ಜಾರಿಯಿದ್ದ ಪರಿಣಾಮ ವಲಸೆ ಕಾರ್ಮಿಕರು ಸಿಲುಕಿಕೊಂಡಿದ್ದರು. ಲಾಕ್‌ಡೌನ್ ಸಡಿಲಿಕೆ ಮಾಡಿ ಆಯಾ ವಲಸೆ ಕಾರ್ಮಿಕರು ತಮ್ಮ ತವರು ರಾಜ್ಯಕ್ಕೆ ಪ್ರಯಾಣ ಬೆಳಸಲು ಸರ್ಕಾರ ಅವಕಾಶ ನೀಡಿರುವುದರಿಂದ ಬುಧವಾರ ಸಂಜೆ ಇಲ್ಲಿನ ರೈಲ್ವೆ ನಿಲ್ದಾಣದಿಂದ ಬಿಹಾರನತ್ತ ವಲಸಿಗರು ಮುಖ ಮಾಡಿದರು. ತವರಿನತ್ತ ಹೊರಟ ವಲಸಿಗರ ಮುಖದಲ್ಲಿ ಮಂದಹಾಸ ಕಂಡಿತು. ಜಿಲ್ಲಾಧಿಕಾರಿ ಶರತ್ ಬಿ., ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಅಪರ ಜಿಲ್ಲಾಧಿಕಾರಿ ಡಾ| ಶಂಕರ ವಣಿಕ್ಯಾಳ, ಡಿಸಿಪಿ ಕಿಶೋರ್ ಬಾಬು, ರೈಲು ನಿಲ್ವಾಣದ ವ್ಯವಸ್ಥಾಪಕ ಪ್ರಸಾದ ರಾವ್ ಹಾಗೂ ಅಧಿಕಾರಿಗಳು ವಲಸಿಗ ಕಾರ್ಮಿಕರನ್ನು ಬೀಳ್ಕೊಟ್ಟರು.
ಬಿಹಾರಕ್ಕೆ ಪ್ರಯಾಣ ಬೆಳೆಸಲು ಬೇರೆ ಜಿಲ್ಲೆಯಿಂದ ಬಂದವರನ್ನು ಆಯಾ ಜಿಲ್ಲೆಯಿಂದಲೇ ಸ್ಕ್ರಿನಿಂಗ್ ಮಾಡಿ ತರಲಾಗಿತ್ತು. ಜಿಲ್ಲೆಯಲ್ಲಿದ್ದ ಕಾರ್ಮಿಕರಿಗೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ಕ್ರಿನಿಂಗ್ ಮಾಡಲಾಗಿತ್ತು. ರೈಲ್ವೆ ನಿಲ್ದಾಣಕ್ಕೆ ಕಾರ್ಮಿಕರು ಸಂಜೆ 6ಗಂಟೆಗೆ ಆಗಮಿಸಿದ್ದರು. ಎಲ್ಲರ ಹೆಸರು ಮತ್ತು ವಿಳಾಸದ ಸಮೇತ ಸೇವಾ ಸಿಂಧು ಆ್ಯಪ್‌ನಲ್ಲಿ ಪ್ರಯಾಣಕ್ಕೆ ನೋಂದಣಿ ಮಾಡಿಕೊಂಡು, ರೈಲ್ವೆ ಪ್ರಯಾಣದ ವೆಚ್ಚವನ್ನು ತಲಾ ಒಬ್ಬರಿಂದ 825 ರೂ. ಪಡೆಯಲಾಯಿತು. ಕಲಬುರಗಿಯಿಂದ ಬಿಹಾರಕ್ಕೆ ಕರೆದುಕೊಂಡು ಹೋಗುತ್ತಿರುವ ಮೊದಲ ಶ್ರಮಿಕ ರೈಲು ಇದಾಗಿದೆ. ಶುಕ್ರವಾರ ಬಿಹಾರಕ್ಕೆ ತಲುಪಲಿದೆ.
ಕಲ್ಯಾಣ ಕರ್ನಾಟಕದ ಕಲಬುರಗಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಿಲುಕಿಕೊಂಡಿದ್ದ ಬಿಹಾರದ 1,436 ಜನರು ಬುಧವಾರ ತಮ್ಮೂರಿನತ್ತ ತೆರಳಿದರು. ಮೇ 21ರಂದು ಬಿಹಾರದ ವಲಸಿಗ ಕಾರ್ಮಿಕರ ಪ್ರಯಾಣಕ್ಕೆ ಕಲಬುರಗಿ ರೈಲ್ವೆ ನಿಲ್ದಾಣದಿಂದ ಮತ್ತೂಂದು ಶ್ರಮಿಕ ರೈಲು ಹೊರಡಲಿದೆ. – ಶರತ್ ಬಿ., ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.