ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ


Team Udayavani, Aug 25, 2018, 9:55 AM IST

gul-1.jpg

ಕಲಬುರಗಿ: ಜಿಲ್ಲೆಯಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸೆ. 2 ರಂದು ಸಂಭ್ರಮದಿಂದ ಆಚರಿಸಲು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶಿಷ್ಠಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಸರ್ವಾನುಮತದಿಂದ ನಿರ್ಧರಿಸಿತು.

ದಿನಾಚರಣೆ ಅಂಗವಾಗಿ ಸೆ. 2 ರಂದು ಬೆಳಗ್ಗೆ 9:30 ಕ್ಕೆ ನಗರದ ಸರ್ದಾರ ವಲ್ಲಭಭಾಯಿ ಪಟೇಲ್‌ ವೃತ್ತದಿಂದ ಡಾ| ಎಸ್‌.ಎಂ. ಪಂಡಿತ ರಂಗಮಂದಿರ ವರೆಗೆ ಶ್ರೀಕೃಷ್ಣನ ಭಾವಚಿತ್ರದ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ಇದರಲ್ಲಿ ಶ್ರೀಕೃಷ್ಣನ ಹಾಡುಗಳನ್ನು ಹಾಡುವ ಭಜನಾ ಮತ್ತು ಡೊಳ್ಳು ಕುಣಿತ ತಂಡಗಳ ವ್ಯವಸ್ಥೆ ಮಾಡಲು ತೀರ್ಮಾನಿಸಲಾಯಿತು.

ಅಂದು ಬೆಳಗ್ಗೆ 11 ಕ್ಕೆ ನಗರದ ಡಾ| ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ದಿನಾಚರಣೆ ಸಮಾರಂಭ ಆಯೋಜಿಸಲಾಗುವುದು. ದಿನಾಚರಣೆ ಅಂಗವಾಗಿ ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಜನಪ್ರತಿನಿಧಿ ಗಳನ್ನು ಆಹ್ವಾನಿಸಲು ಹಾಗೂ ಪ್ರೊ| ವಸಂತ ಕುಷ್ಠಗಿ ಅವರಿಂದ ಉಪನ್ಯಾಸ ಏರ್ಪಡಿಸಲು ಸಭೆ ನಿರ್ಣಯ ಕೈಗೊಂಡಿತು.

ಅರ್ಚಕರಿಂದ ಶ್ರೀಕೃಷ್ಣನ ಭಾವಚಿತ್ರ ಹಾಗೂ ಪಾದುಕೆಗಳಿಗೆ ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲು ಹಾಗೂ ದಾಸವಾಣಿ, ಭರತನಾಟ್ಯಗಳಂಥಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಹ ಸಭೆಯು ನಿರ್ಣಯ ಕೈಗೊಂಡಿತು. ಮೆರವಣಿಗೆ ಭಾಗವಹಿಸುವ ಹಾಗೂ ರಂಗಮಂದಿರದ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಸೂಕ್ತ ಪೊಲೀಸ್‌ ಬಂದೋಬಸ್ತ್ ಒದಗಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಜಿಲ್ಲಾ ಮಟ್ಟದ ಕಚೇರಿಗಳಲ್ಲಿ ಶ್ರೀಕೃಷ್ಣ ನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ದಿನಾಚರಣೆ ಆಚರಿಸಲು ಹಾಗೂ ಸಮಾರಂಭದಲ್ಲಿ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಸುತ್ತೋಲೆ ಹೊರಡಿಸಲು ಸಭೆ ತೀರ್ಮಾನಿಸಿತು. ಸಭೆಯಲ್ಲಿ ಭಾಗವಹಿಸಿದ ಯಾದವ ಸಮಾಜದ ಮುಖಂಡರು ಕಾರ್ಯಕ್ರಮದ ಯಶಸ್ವಿಗೆ ಸಲಹೆ ನೀಡಿದರು.

ಜಿಲ್ಲಾ ಯಾದವ ಸಮಾಜದ ಜಿಲ್ಲಾಧ್ಯಕ್ಷ ರವೀಂದ್ರ ಉದನೂರ, ಉಪಾಧ್ಯಕ್ಷ ಸುಭಾಷಚಂದ್ರ ರಾಜನ್‌, ಕಾರ್ಯದರ್ಶಿ ಕಲ್ಲಪ್ಪ ಯಾದವ ಸೇರಿದಂತೆ ಇನ್ನಿತರ ಸಮಾಜದ ಮುಖಂಡರು ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ಕೊಟ್ರೇಶ್‌ ಮರಬನಳ್ಳಿ ಸ್ವಾಗತಿಸಿ, ಕಾರ್ಯಕ್ರಮದ ರೂಪುರೇಷೆ ವಿವರಿಸಿದರು.

ಟಾಪ್ ನ್ಯೂಸ್

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.