ಗೋ ರಕ್ಷಣೆಗೆ ಶ್ರೀರಾಮಸೇನೆ ಆಗ್ರಹ
Team Udayavani, Jul 29, 2020, 2:21 PM IST
ಕಲಬುರಗಿ: ಬಕ್ರೀದ್ ಹಬ್ಬ ನಿಮಿತ್ತ ಗೋಹತ್ಯೆ ತಡೆಯಲು ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಈಗಾಗಲೇ ಹಬ್ಬಕ್ಕೆಂದು ಸಂಗ್ರಹಿಸಲಾದ ಗೋಗಳನ್ನು ರಕ್ಷಿಸಬೇಕೆಂದು ಒತ್ತಾಯಿಸಿ ಶ್ರೀರಾಮ ಸೇನೆಯ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಬಕ್ರೀದ್ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಗೋಗಳ ಅಕ್ರಮ ಸಾಗಣೆ, ಸಂಗ್ರಹ ನಡೆಯುತ್ತಿದೆ. ಕೆಲ ಕಡೆಗಳಲ್ಲಿ ಗೋವಧೆಗಾಗಿ ಗೋಗಳನ್ನು ಸಂಗ್ರಹಿಸಿರುವುದು ಶ್ರೀರಾಮಸೇನೆ ಗಮನಕ್ಕೆ ಬಂದಿದೆ. ಆದ್ದರಿಂದ ಅವುಗಳನ್ನು ರಕ್ಷಿಸಲು ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಗೋಗಳ ರಕ್ಷಣೆಗಾಗಿ ಈಗಾಗಲೇ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳು ಶ್ಲಾಘನೀಯವಾಗಿದೆ. ಎಂಟು ತಂಡಗಳನ್ನು ರಚಿಸಿ ವಿಶೇಷ ನಿಗಾವಹಿಸಲು ಯೋಜಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಆದರೂ, ಗೋವಧೆಗಾಗಿ ಗೋವುಗಳನ್ನು ಸಂಗ್ರಹಿಸಿರುವುದು ಗಮನಕ್ಕೆ ಬಂದಿದೆ. ಅದಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳ ಸಭೆ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಂಗ್ರಹಿಸಿದ ಗೋವುಗಳ ಜಾಗ ಹಾಗೂ ಟೋಲ್ ನಾಕಾ ಮೂಲಕ ಸಾಗಿಸುತ್ತಿರುವ ಗೋವುಗಳ ರಕ್ಷಣೆಗೆ ನಾವೇ ಸ್ವತಃ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಲಕ್ಷ್ಮೀಕಾಂತ್ ಸ್ವಾದಿ, ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಮಹೇಶ ಕೆಂಭಾವಿ, ನಗರ ಅಧ್ಯಕ್ಷ ದಶರಥ, ಉಪಾಧ್ಯಕ್ಷ ಮಲ್ಲು ದೊಟಗಿ, ಮುಖಂಡರಾದ ಅರುಣ ಸುಲ್ತಾನಪುರ, ನಾಗೇಶ್ ಅಡೆ, ಮಹಾದೇವ ಮ್ಯಾಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.