![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 25, 2020, 12:38 PM IST
ಕಲಬುರಗಿ: ಜಿಲ್ಲಾದ್ಯಂತ ಗುರುವಾರ ಎಸ್ಎಸ್ಎಲ್ ಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷಾ ಕೇಂದ್ರಗಳ ಬಳಿ ಪೋಷಕರು ಸಾಮಾಜಿಕ ಅಂತರ ಮರೆತು ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂತು. ಹೀಗಾಗಿ ಪೊಲೀಸರು ಮತ್ತು ಪೋಷಕರ ನಡುವೆ ನಗರದ ನೂತನ ವಿದ್ಯಾಲಯದ ಪರೀಕ್ಷಾ ಕೇಂದ್ರದ ಬಳಿ ಮಾತಿನ ಚಕಮಕಿ ನಡೆಯಿತು.
136 ಕೇಂದ್ರಗಳಲ್ಲಿ 43,714 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಆದರೆ, ಪರೀಕ್ಷಾ ಕೇಂದ್ರಗಳಿಗೆ ಮಕ್ಕಳನ್ನು ಕರೆತಂದ ಪೋಷಕರು ಗುಂಪು-ಗುಂಪಾಗಿ ಜಮಾವಣೆಗೊಂಡಿದ್ದರು.
ಪರೀಕ್ಷಾ ಕೇಂದ್ರದಿಂದ ದೂರಹೋಗಿ ಎಂದು ಪರೀಕ್ಷಾ ಸಿಬ್ಬಂದಿ ಮತ್ತು ಪೊಲೀಸರು ಹೇಳಿದರೂ, ಪಾಲಕರು ಕೇಳುತ್ತಿಲ್ಲ. ಇದರಿಂದ ಪೋಷಕರ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ ಪಡುವಂತೆ ಆಗಿದೆ. ಈ ವೇಳೆ ನೂತನ ವಿದ್ಯಾಲಯದ ಪರೀಕ್ಷಾ ಕೇಂದ್ರದ ಬಳಿ ಕೆಲ ಪೋಷಕರು ಪೊಲೀಸ್ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕೆ ಇಳಿದ ಘಟನೆ ಸಹ ನಡೆಯಿತು.
ಪರೀಕ್ಷಾ ಕೇಂದ್ರದಿಂದ ತೆರಳುವಂತೆ ಸೂಚಿಸಿದರೂ ತೆರಳದ ಹಿನ್ನೆಲೆ ಪೋಷಕರನ್ನು ಪೊಲೀಸರು ದೂರ ತಳ್ಳಿ ಚದರಿಸಲು ಮುಂದಾದರೂ, ಆಗ ಪೊಲೀಸರು ಮತ್ತು ಪೋಷಕರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಕೇಂದ್ರದಿಂದ ದೂರ ಹೋಗಿ ಇಲ್ಲವಾದಲ್ಲಿ ನಿಮ್ಮ ವಾಹನಗಳನ್ನು ಜಪ್ತಿ ಮಾಡಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆಯನ್ನೂ ನೀಡಿದರು
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.