ಸುಸೂತ್ರವಾಗಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ
Team Udayavani, Mar 31, 2017, 2:57 PM IST
ಅಫಜಲಪುರ: ತಾಲೂಕಿನ ಒಂಭತ್ತು ಪರೀಕ್ಷಾ ಕೇಂದ್ರಗಳಲ್ಲಿ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸೂಸುತ್ರವಾಗಿ ನಡೆದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಿತ್ರಶೇಖರ ದೇಗಲಮಡಿ ತಿಳಿಸಿದ್ದಾರೆ. ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪರೀಕ್ಷೆಗೂ ಮೊದಲು ಸಿಸಿ ಟಿವಿ ಪರೀಕ್ಷಿಸಿ ಮಾತನಾಡಿ,
ತಾಲೂಕಿನಾದ್ಯಂತ ಒಟ್ಟು 56 ಪ್ರೌಢ ಶಾಲೆಗಳಿವೆ. ಈ ಪೈಕಿ ಸರ್ಕಾರಿ 31, ಅನುದಾನಿತ 9, ಅನುದಾನ ರಹಿತ 12, ವಸತಿಶಾಲೆ ನಾಲ್ಕು ಇವೆ. ಈ ಪೈಕಿ ಒಂಭತ್ತು ಪರೀಕ್ಷಾ ಕೇಂದ್ರಗಳನ್ನು ಮಾಡಲಾಗಿದೆ. ಬಹುತೇಕ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ ಕ್ಯಾಮರಾ ಅಳವಡಿಸಲಾಗಿದೆ.
ಪ್ರಥಮ ಭಾಷೆ ಪರೀಕ್ಷೆ: ಗುರುವಾರ ಪ್ರಥಮ ಭಾಷೆಯಾದ ಕನ್ನಡ, ಉರ್ದು, ಇಂಗ್ಲಿಷ್ ಭಾಷೆಗಳ ಪರೀಕ್ಷೆ ನಡೆಯಿತು. ತಾಲೂಕಿನ 9 ಪರೀಕ್ಷಾ ಕೇಂದ್ರಗಳಲ್ಲಿ 3225 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಈ ಪೈಕಿ ಕನ್ನಡ 2775 ವಿದ್ಯಾರ್ಥಿಗಳ ಪೈಕಿ 139 ಗೈರು ಹಾಜರಿ, ಉರ್ದು ಒಟ್ಟು 114 ಮಕ್ಕಳ ಪೈಕಿ 6 ಗೈರು ಹಾಜರಿ, ಇಂಗ್ಲಿಷ್ ಒಟ್ಟು 80 ಮಕ್ಕಳ ಪೈಕಿ 17 ಗೈರು ಹಾಜರಾಗಿದ್ದಾರೆ. ಯಾವುದೇ ಡಿಬಾರ್ ಆಗಿಲ್ಲವೆಂದು ಹೇಳಿದರು.
ತಾಲೂಕಿನಲ್ಲಿ ಕರ್ಜಗಿ ಮತ್ತು ದೇವಲಗಾಣಗಾಪುರ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಾಗಿವೆ. 9 ಜಾಗೃತ, 2 ಸಂಚಾರಿ ದಳ ನೇಮಿಸಲಾಗಿದೆ. ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಉಳಿದವರು ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆ ಮಾಡುವಂತಿಲ್ಲ. ಅಲ್ಲದೆ ಪರೀಕ್ಷಾ ಕೇಂದ್ರದ 200 ಮೀಟರ್ ಒಳಗೆ 144 ಕಲಂ ಜಾರಿ ಇದ್ದು ಝರಾಕ್ಸ್ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ ಎಂದು ಹೇಳಿದರು.
ಚಿತ್ತಾಪುರ: ತಾಲೂಕಿನಲ್ಲಿ ಒಟ್ಟು 5183 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಶರಣಪ್ಪ ಬನ್ನಿಕಟ್ಟಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ಒಟ್ಟು 16 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಒಟ್ಟು 5183 ವಿದ್ಯಾರ್ಥಿಗಳ ಪೈಕಿ 4947 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 236 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ 20ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೇ 16 ಜಾಗೃತ ತಂಡ, ನಾಲ್ಕು ವೀಕ್ಷಕರು, ಐವರು ರೂಟ್ ಅಧಿಕಾರಿಗಳನ್ನು ಪರೀಕ್ಷೆ ಕಾರ್ಯಕ್ಕೆ ನಿಯೋಜಿಸಲಾಗಿದ್ದು, ಯಾವುದೇ ಅಹೀತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಟ್ಟಣದ ಎರಡು ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಕನ್ನಡ ಸೇರಿದಂತೆ ಎಲ್ಲ ಪ್ರಥಮ ಭಾಷಾ ಪರೀಕ್ಷೆಯಲ್ಲಿ 739 ವಿದ್ಯಾರ್ಥಿಗಳ ಪೈಕಿ 707 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ 441 ವಿದ್ಯಾರ್ಥಿಗಳ ಪೈಕಿ 417 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಕನ್ನಡ 318, ಇಂಗ್ಲಿಷ 87, ಉರ್ದು ಮಾಧ್ಯಮದ 36 ವಿದ್ಯಾರ್ಥಿಗಳು ಹಾಜರಿದ್ದು, 24 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಮುಖ್ಯ ಅಧೀಕ್ಷಕ ಅಶೋಕ ಮೀಸ್ಕಿನ್ ತಿಳಿಸಿದ್ದಾರೆ.
ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ 298 ವಿದ್ಯಾರ್ಥಿಗಳ ಪೈಕಿ 290 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟು 10 ಕೋಣೆಗಳಲ್ಲಿ ಪರೀಕ್ಷೆ ನಡೆಸಿದ್ದು, 12 ಶಿಕ್ಷಕರು ಪರೀಕ್ಷೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಮುಖ್ಯ ಅಧೀಕ್ಷಕ ಸುಭಾಷ ಶಿರೂರ ತಿಳಿಸಿದ್ದಾರೆ.
ಶಹಾಬಾದ: ಹೋಬಳಿ ವಲಯದ ಐದು ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್ ಎಲ್‌ಸಿ ಪ್ರಥಮ ಭಾಷೆ ಪರೀಕ್ಷೆ ಗುರುವಾರ ಸುಗಮವಾಗಿ ನಡೆಯಿತು. ನಗರದ ಪರೀಕ್ಷಾ ಕೇಂದ್ರಗಳಾದ ಗಂಗಮ್ಮ ಶಾಲೆಯಲ್ಲಿ 260 ಹುಡುಗರು, 183 ಹುಡುಗಿಯರು ಸೇರಿದಂತೆ 443 ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಬಾಲವಿದ್ಯಾಮಂದಿರ ಶಾಲೆಯಲ್ಲಿ 166 ಹುಡುಗರು,149 ಹುಡುಗಿಯರು ಸೇರಿದಂತೆ 315 ವಿದ್ಯಾರ್ಥಿಗಳು, ಎಂಸಿಸಿ ಶಾಲೆಯಲ್ಲಿ 211ಹುಡುಗರು, 229 ಹುಡುಗಿಯರು ಸೇರಿದಂತೆ 440 ವಿದ್ಯಾರ್ಥಿಗಳು ಹಾಗೂ ಭಂಕೂರಿನ ಸರಕಾರಿ ಪ್ರೌಢಶಾಲೆಯಲ್ಲಿ 103 ಹುಡುಗರು,127 ಹುಡುಗಿಯರು ಸೇರಿದಂತೆ 230 ವಿದ್ಯಾರ್ಥಿಗಳು.
ಒಟ್ಟಾರೆಯಾಗಿ ಹೋಬಳಿ ವಲಯದಲ್ಲಿ ಸುಮಾರು 1428 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದರು. ಬೇಸಿಗೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಪರೀಕ್ಷಾ ಮೇಲ್ವಿಚಾರಕ ಮಲ್ಲಿಕಾರ್ಜುನ ಸೇಡಂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.