ಎಸ್‌ಟಿಗೆ ಸೇರಿಸಲು ಪ್ರಾಮಾಣಿಕ ಪ್ರಯತ್ನ
Team Udayavani, Mar 27, 2017, 3:11 PM IST
ಜೇವರ್ಗಿ: ಕೋಲಿ ಸಮಾಜವನ್ನು ಎಸ್‌ಟಿಗೆ ಸೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಸಮಾಜದ ಬಾಂಧವರು ಸಂಘಟಿತರಾಗುವ ಮೂಲಕ ಸರ್ಕಾರದ ಸೌಲಭ್ಯ ಪಡೆದುಕೊಳ್ಳಬೇಕು. ಸಮಾಜವನ್ನು ಎಸ್‌ಟಿಗೆ ಸೇರಿಸಬೇಕು ಎನ್ನುವ ಬಹುದಿನಗಳ ಬೇಡಿಕೆಗೆ ಶೀಘ್ರದಲ್ಲಿ ಈಡೇರಲಿದೆ ಎಂದು ಲೋಕಸಭೆ ಕಾಂಗ್ರೆಸ್ ಪಕ್ಷದ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದರು.
ಪಟ್ಟಣದ ಹಳೆ ತಹಶೀಲ್ದಾರ ಕಚೇರಿ ಆವರಣದಲ್ಲಿ ರವಿವಾರ ಜಿಲ್ಲಾ ಕೋಲಿ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ವಿಭಾಗ ಮಟ್ಟದ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೋಲಿ ಸಮಾಜದ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಿ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಲು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಸಮಾಜದ ಮುಖಂಡರು ಆಂತರಿಕ ಭಿನ್ನಾಭಿಪ್ರಾಯ ಸಮಾಜದ ಹಿತದೃಷ್ಟಿಯಿಂದ ಬದಿಗಿಡಬೇಕು. ಸಮಾಜದ ಸಭೆ-ಸಮಾರಂಭಗಳಲ್ಲಿ ಪ್ರತಿಯೊಬ್ಬರೂ ಭಾಗವಹಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು.
ಈ ಭಾಗದ ಜನರ ಸಮಸ್ಯೆಗಳಿಗೆ ಹಾಗೂ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ. ಈ ಭಾಗದ ಅಭಿವೃದ್ಧಿಗೆ ತಾವು ಕೂಡ ಕಂಕಣಬದ್ಧರಾಗಿದ್ದೇವೆ. ಈ ಭಾಗದ ಎಲ್ಲ ಶಾಸಕರನ್ನು ಕರೆದುಕೊಂಡು ಹೋಗಿ ಎಚ್‌ಕೆಆರ್ ಡಿಬಿಗೆ ಸಾವಿರ ಕೋಟಿ ಅನುದಾನವನ್ನು 1500 ಕೋಟಿ ರೂ. ಗೆ ಹೆಚ್ಚಿಸಲಾಗಿದೆ.
ಇದರಿಂದ ಈ ಭಾಗದ ಅಭಿವೃದ್ಧಿಗೆ ಹಣದ ಕೊರತೆ ನೀಗಿಸಿದಂತಾಗುತ್ತದೆ ಎಂದರು. ಬೀದರ ಕೌಟಾ ಮಠದ ಬೇಲ್ದಾಳ ಶರಣರು ಹಾಗೂ ತೊನಸನಹಳ್ಳಿಯ ಮಲ್ಲಣಪ್ಪ ಮುತ್ಯಾ ಸಾನ್ನಿಧ್ಯ ಮತ್ತು ಮಾಜಿ ಸಚಿವ ಬಾಬುರಾವ ಚಿಂಚನಸೂರ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಡಾ| ಅಜಯಸಿಂಗ್ ಅಂಬಿಗರ ಚೌಡಯ್ಯನವರ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಿದರು.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಅಲ್ಲಮಪ್ರಭು ಪಾಟೀಲ, ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ, ಜಿಪಂ ಸದಸ್ಯರಾದ ಶಿವರಾಜ ಪಾಟೀಲ ರದ್ದೇವಾಡಗಿ, ದಂಡಪ್ಪಸಾಹು ಕುಳಗೇರಾ, ಶಾಂತಪ್ಪ ಕೂಡಲಗಿ, ಅವ್ವಣ್ಣ ಮ್ಯಾಕೇರಿ, ಭೀಮಣ್ಣ ಸಾಲಿ, ಕೆ. ಶಾಂತಪ್ಪ, ಚಂದ್ರಶೇಖರ ಹರನಾಳ, ಶಿವಶರಣಪ್ಪ ಕೋಬಾಳ, ಬಸವರಾಜ ಹರವಾಳ, ಬಸವರಾಜ ಬೂದಿಹಾಳ, ಶಿವಶರಣಪ್ಪ ಹೊನ್ನಾಳ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.