ಸಣ್ಣ ಉದ್ಯಮ ಶುರು ಮಾಡಿ: ಪಾಟೀಲ
Team Udayavani, Feb 26, 2017, 2:52 PM IST
ಕಲಬುರಗಿ: ನಿರುದ್ಯೋಗಿಗಳು ಉದ್ಯೋಗ ಹುಡುಕುವಲ್ಲಿ ಸಾಮರ್ಥ್ಯ ವ್ಯಯ ಮಾಡುವುದಕ್ಕಿಂತ ಸಣ್ಣ ಉದ್ಯಮ ಆರಂಭಿಸಲು ಮುಂದೆ ಬರಬೇಕು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಕರೆ ನೀಡಿದರು.
ಇಲ್ಲಿನ ಕನ್ನಡ ಭವನದಲ್ಲಿ ಶನಿವಾರ ಎಂ.ಎಸ್. ಎಂ.ಇ. ಅಭಿವೃದ್ಧಿ ಸಂಸ್ಥೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಹೈದ್ರಾಬಾದ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿ, ಕೆ-ಲ್ಯಾಂಪ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಐದು ದಿನಗಳ ನ್ಯಾಷನಲ್ ವೆಂಡರ್ ಡೆವಲಪ್ ಮೆಂಟ್ ಕಾರ್ಯಕ್ರಮ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಸಣ್ಣ ಉದ್ಯಮ ಆರಂಭಿಸಲು ಸರಕಾರ ಎಲ್ಲ ರೀತಿಯಿಂದ ಸಹಕಾರ ನೀಡುತ್ತದೆ. ಇದಕ್ಕಾಗಿ ಕೈಗಾರಿಕಾ ಇಲಾಖೆ ಹಾಗೂ ಬ್ಯಾಂಕುಗಳು ಉತ್ತೇಜನ ನೀಡುತ್ತಿವೆ. ಆದ್ದರಿಂದ ಡಿಪ್ಲೋಮಾ ಮತ್ತು ಐಟಿಐ ವೃತ್ತಿ ಕೋರ್ಸು ಮುಗಿಸಿದ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗಕ್ಕಾಗಿ ಕಾಯದೆ ಸ್ವಯಂ ಉದ್ಯೋಗಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಸಣ್ಣ ಸಣ್ಣ ಉದ್ಯಮಗಳ ಅವಕಾಶ ಮತ್ತು ದಾಲ್‌ಮಿಲ್ ಸ್ಥಾಪಿಸಲು ಸಣ್ಣ ಕೈಗಾರಿಕೆಗೆ ವಹಿಸುವ ನಿಟ್ಟಿನಲ್ಲಿನ ಸಾಧ್ಯತೆಗಳನ್ನು ಮುಖ್ಯಮಂತ್ರಿಗಳ ಅವಗಾಹನೆಗೆ ತರಲು ಅನುಕೂಲವಾಗುವಂತೆ ಸಮಸ್ಯೆಗಳ ಪಟ್ಟಿ ತಯಾರಿಸಿ ನೀಡುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಅಧಿಧಿ ಕಾರಿಗಳಿಗೆ ಇದೇ ಸಂದರ್ಭದಲ್ಲಿ ಸೂಚಿಸಿದರು.
ಜಿಲ್ಲೆಯಲ್ಲಿ ಮಹಿಳಾ ಉದ್ಯಮಿಗಳಿಗೆ ಮತ್ತು ಉದ್ಯಮಕ್ಕೆ ಉತ್ತೇಜನ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ 50 ಎಕರೆ ಭೂಮಿಯನ್ನು ಜಿಲ್ಲೆಯ ಕೈಗಾರಿಕೆ ವಸಾಹತುವಿನಲ್ಲಿ ಮೀಸಲಿಡಲಾಗಿದೆ. ಇದರ ಸದ್ಬಳಕೆ ಮಾಡಿಕೊಂಡು ಹೆಚ್ಚು ಮಹಿಳೆಯರು ಉದ್ಯಮದತ್ತ ಆಸಕ್ತಿವಹಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ಉದ್ಯಮವನ್ನು ನಾವು ಬೆಳೆಸಬೇಕಿದೆ. ಇದಕ್ಕಾಗಿ ಸರಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಬಳಕೆ ಮಾಡುವಲ್ಲಿ ಯುವಜನತೆ ಹಿಂದೆ ಬೀಳಬಾರದು ಎಂದರು. ಎಂ.ಎಸ್.ಎಂ.ಇ. ಅಭಿವೃದ್ಧಿ ಸಂಸ್ಥೆ ನಿರ್ದೇಶಕ ಎಸ್.ಎನ್. ರಂಗಪ್ರಸಾದ ಮಾತನಾಡಿ, ವಿವಿಧ ಜಿಲ್ಲೆಗಳ ವೆಂಡರ್ಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಸುಮಾರು 80-90 ಮಳಿಗೆಗಳನ್ನು ಸ್ಥಾಪಿಸಲಾಗಿದೆ.
ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಇದೇ ಮೊದಲ ಬಾರಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಲಾಜಿ, ಉಪಾಧ್ಯಕ್ಷತೆ ಶೋಭಾ ಸಿರಸಗಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗಬಾನ್, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ್ ರಮೇಶ ಯಾಕಾಪುರ,
ಹೈದ್ರಾಬಾದ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಅಧ್ಯಕ್ಷ ಸೋಮಶೇಖರ ಟೇಂಗಳಿ, ಕೆ-ಲ್ಯಾಂಪ್ ಅಧ್ಯಕ್ಷೆ ಜ್ಯೋತಿ ಕಾಡಾದಿ ಇದ್ದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ ಸ್ವಾಗತಿಸಿದರು. ನ್ಯಾಷನಲ್ ವೆಂಡರ್ ಡೆವಲಪ್‌ಮೆಂಟ್ ಕಾರ್ಯಕ್ರಮ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.