ಜಂಗಲ್‌ ರೆಸಾರ್ಟ್‌ ಉದ್ಘಾಟನೆಗೆ ಬರ್ತೀನಿ ಅಂದಿದ್ರು!


Team Udayavani, Sep 8, 2022, 3:08 PM IST

4katti

ಚಿಂಚೋಳಿ: ರಾಜ್ಯದ ಅರಣ್ಯ ಮತ್ತು ಆಹಾರ ಸಚಿವ ಉಮೇಶ ಕತ್ತಿ ಅವರು ತಾಲೂಕಿಗೆ ಕಳೆದ ಜೂನ್‌ 27ರಂದು ಭೇಟಿ ನೀಡಿ, ಪೋಲಕಪಳ್ಳಿ ಗ್ರಾಮದ ಹತ್ತಿರ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಮ ಉದ್ಘಾಟಿಸಿದ್ದ ಕ್ಷಣಗಳು ಸ್ಮರಣೀಯವಾಗೇ ಉಳಿದವು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಬಳಿಕ ತಾಲೂಕಿಗೆ ಪ್ರಥಮ ಬಾರಿ ಭೇಟಿ ನೀಡಿದ್ದ ಸಚಿವ ಉಮೇಶ ಕತ್ತಿ ಅವರು “ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಮ’ ಉದ್ಘಾಟಿಸಿದ ಸಂದರ್ಭದಲ್ಲಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಅರಣ್ಯಪ್ರದೇಶ ಹೊಂದಿರುವ ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶದಲ್ಲಿ ಅರಣ್ಯ ಕಾಲೇಜು ಮಂಜೂರಿಗೊಳಿಸುತ್ತೇನೆ. ಜಂಗಲ್‌ ರೆಸಾರ್ಟ ಮಂಜೂರಿಗೊಳಿಸುತ್ತೇನೆ. ನಾನೇ ಬಂದು ಉದ್ಘಾಟಿಸುತ್ತೇನೆ ಎಂದು ಸಾರ್ವಜನಿಕರಿಗೆ ಬಹಿರಂಗವಾಗಿ ಹೇಳಿದ್ದರು.

ಆದರೆ ಮರಳಿಬಾರದ ಊರಿಗೆ ಹೋಗಿ ಅಭಿಮಾನಿಗಳಿಗೆ ನಿರಾಸೆಯುಂಟು ಮಾಡಿದರು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆ ಈ ಭಾಗದ ಜನರ ಅನೇಕ ವರ್ಷಗಳ ಆಶಯವಾಗಿದೆ. ಮುಂದಿನ ದಿನಗಳಲ್ಲಿ ದೇಶದಲ್ಲಿ 50 ರಾಜ್ಯಗಳು ಉದಯವಾಗಲಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಉದಯವಾದರೆ ನಾನಂತೂ ಮುಖ್ಯಮಂತ್ರಿ ಆಗುವುದಿಲ್ಲ. ನನ್ನ ಮಗ ಮುಖ್ಯಮಂತ್ರಿ ಆಗಬಹುದು ಎಂದು ಉದ್ಘಾಟನಾ ಸಮಾರಂಭದಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದರು.

ಅವರ ಬಯಕೆ ಈಡೇರಲಿಲ್ಲ. ಅವರ ನೆನಪು ಮಾತ್ರ ಸದಾ ಸ್ಮರಣೀಯವಾಯ್ತು. ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆಯಲ್ಲಿ ಸಿದ್ಧಸಿರಿ ಇಥೆನಾಲ್‌ ಹಾಗೂ ಪವರ್‌ ವಿಭಾಗದಿಂದ ನಡೆದ ಸಿದ್ಧಸಿರಿ ಗೋಶಾಲೆ, ಪಬ್ಲಿಕ್‌ ಶಾಲೆ, 108 ಹಾಸಿಗೆಯುಳ್ಳ ಆಸ್ಪತ್ರೆ, ಎಸ್‌.ಮಾರ್ಟ್‌, ಕೃಷಿ ಸೇವಾ ಕೇಂದ್ರ ಮತ್ತು ಇಂಧನ ಕೇಂದ್ರ, ವಿವಿಧ ಸಂಕಿರ್ಣಗಳ ಭೂಮಿ ಪೂಜೆ ಸಮಾರಂಭದಲ್ಲಿ ಭಾಗವಹಿಸಿದ್ದ ಸಚಿವ ಉಮೇಶ ಕತ್ತಿ ಅವರು ಬಸನಗೌಡ ಪಾಟೀಲ ಯತ್ನಾಳ ಅವರಿಗೆ “ಚಿಂಚೋಳಿ ಪಟ್ಟಣದಲ್ಲಿ ಸಕ್ಕರೆ ಕಾರ್ಖಾನೆ ಮತ್ತು ಇಥೆನಾಲ್‌ ಕಾರ್ಖಾನೆ ಪ್ರಾರಂಭಿಸಿದ್ದಿರಿ. ಇನ್ನು ಹಿಂದುಳಿದ ಪ್ರದೇಶ ಅಭಿವೃದ್ಧಿಗೊಳ್ಳಲಿದೆ. ನಿಮ್ಮ ಮಗನಿಗೆ ಚಿಂಚೋಳಿಯಲ್ಲಿಯೇ ಕನ್ಯೆ ನೋಡಿ ಮದುವೆ ಮಾಡಿ’ ಎಂದು ಹೇಳಿ ನೆರೆದವರನ್ನು ನಗೆಗಡಲಲ್ಲಿ ತೇಲಿಸಿದ್ದರು.

ಸಂತಾಪ: ಕೇಂದ್ರ ಸಚಿವ ಭಗವಂತ ಖೂಬಾ, ಕಲಬುರಗಿ ಸಂಸದ ಡಾ|ಉಮೇಶ ಜಾಧವ, ಶಾಸಕ ಡಾ|ಅವಿನಾಶ ಜಾಧವ, ಗೌತಮ ಪಾಟೀಲ, ಬಾಬುರಾವ್‌ ಪಾಟೀಲ, ರಮೇಶ ಯಾಕಾಪುರ, ಸುಭಾಷ ರಾಠೊಡ, ಸಂತೋಷ ಗಡಂತಿ, ಅಜೀತ್‌ ಪಾಟೀಲ, ಶರಣು ಮೋತಕಪಳ್ಳಿ, ಕೆ.ಎಂ.ಬಾರಿ ಹಾಗೂ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

10–Cosmetic-surgery

Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Jammu and Kashmir: Vehicle falls into gorge

Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು

8-

UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು

Vavar Mosque: Sabarimala pilgrims should not go to Vavar Mosque: BJP MLA

Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ

Sydney Test: Virat reminds Australian audience of sandpaper case

Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್‌ ಕೇಸ್‌ ನೆನಪು ಮಾಡಿದ ವಿರಾಟ್‌|Video

Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!

Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2(1

Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್‌

1(1

Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!

10–Cosmetic-surgery

Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Jammu and Kashmir: Vehicle falls into gorge

Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.