ದೇಶದ್ರೋಹಿ ವಿದ್ಯಾರ್ಥಿಗಳ ಬಿಡುಗಡೆಗೆ ಒತ್ತಡ ಹಾಕಿದ್ದು ಯಾರು ? ಬಹಿರಂಗವಾಗಬೇಕು: ಮುತಾಲಿಕ್
Team Udayavani, Feb 17, 2020, 2:40 PM IST
ಕಲಬುರಗಿ: ಹುಬ್ಬಳ್ಳಿಯ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಿದ್ದು ಯಾರ ಒತ್ತಡದಿಂದ ಎನ್ನುವುದು ಬಹಿರಂಗವಾಗಬೇಕೆಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ದೇಶದ್ರೋಹ ಪ್ರಕರಣ ದಾಖಲಿಸಿ, ಬಂಧಿಸಿರುವುದಾಗಿ ಎಂದು ಹುಬ್ಬಳ್ಳಿ ಪೊಲೀಸ್ ಆಯುಕ್ತ ದೀಪಕ್ ಹೇಳಿದ್ದರು. ಆದರೆ ಏಕಾಏಕಿ ಯೂ ಟರ್ನ್ ಹೊಡೆದು, ಅವರನ್ನು ಬಿಡುಗಡೆ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದರು.
ದೇಶದ್ರೋಹಿಗಳನ್ನು ಯಾವ ಕಾರಣದಿಂದ ಬಿಡುಗಡೆ ಮಾಡಿದರು? ಯಾರಿಂದ ಒತ್ತಡ ಬಂದಿದೆ ಎನ್ನುವುದನ್ನು ಬಹಿರಂಗ ಪಡಿಸಬೇಕು. ಇದರ ಹಿಂದೆ ಪೊಲೀಸರು ಅಥವಾ ರಾಜಕೀಯ ವ್ಯಕ್ತಿಗಳ ಕೈವಾಡ ಇದೆಯಾ ಅನ್ನೋದನ್ನು ಬಹಿರಂಗಗೊಳಿಸಬೇಕು. ಪೊಲೀಸ್ ಆಯುಕ್ತ ದಿಲೀಪ್ ಅವರನ್ನು ಅಮಾನತು ಮಾಡಬೇಕು. ಇಲ್ಲವಾದಲ್ಲಿ ಆಯುಕ್ತರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮೂವರು ವಿದ್ಯಾರ್ಥಿಗಳ ಬಿಡುಗಡೆ ಹಿಂದೆ ಕೆಎಲ್ಇ ಆಡಳಿತ ಮಂಡಳಿ ಒತ್ತಡ ತಂದಿರುವ ಅನುಮಾನಗಳೂ ಇವೆ. ದೇಶ ದ್ರೋಹಿಗಳನ್ಬು ಬಚಾವ್ ಮಾಡಲು ಕೆಎಲ್ಇ ಸೊಸೈಟಿ ಪ್ರಯತ್ನ ಮಾಡಿದರೆ ಅದು ತಪ್ಪು. ದೇಶದ್ರೋಹಿಗಳಿಗೆ ಬೆಂಬಲಿಸುವುದು ಹೆತ್ತ ತಾಯಿಗೆ ದ್ರೋಹ ಬಗೆದಂತೆ. ದೇಶದ್ರೋಹಿಗಳನ್ನು ಎನ್ ಕೌಂಟರ್ ಮಾಡಬೇಕು. ಅವರು ಯಾವತ್ತು ಯಾವ ಕಾಲೇಜಿನಲ್ಲಿ ಓದದಂತೆ ಬ್ಲಾಕ್ ಮಾಡಬೇಕೆಂದರು.
ಮಕ್ಕಳ ಮೇಲೆ ದೇಶದ್ರೋಹ ತಪ್ಪು: ಇದೇ ವೇಳೆಯಲ್ಲಿ ಬೀದರ್ ಶಾಹಿನ್ ಶಾಲಾ ವಿದ್ಯಾರ್ಥಿಗಳ ಮೇಲೆ ದೇಶದ್ರೋಹಿ ಪ್ರಕರಣ ದಾಖಲಿಸಿದ್ದು ಸರಿಯಲ್ಲ ಎಂದು ಮುತಾಲಿಕ್ ಹೇಳಿದರು.ಶಾಲೆಯಲ್ಲಿ ನಡೆದ ಘಟನೆ ಬಗ್ಗೆ ಮೊದಲು ಶಿಕ್ಷಣ ಇಲಾಖೆಯ ಡಿಡಿಪಿಐ ಆಡಳಿತ ಮಂಡಳಿಗೆ ನೋಟಿಸ್ ನೀಡಬೇಕಿತ್ತು. ನೋಟಿಸ್ ನೀಡಿದ ನಂತರ ಶಾಲೆಯಿಂದ ಉತ್ತರ ಪಡೆಯಬೇಕಿತ್ತು. ಆದರೆ, ನೇರವಾಗಿ ವಿದ್ಯಾರ್ಥಿಗಳು ಮತ್ತು ಪಾಲಕರ ಮೇಲೆ ದೇಶದ್ರೋಹಿ ಕೇಸ್ ಹಾಕಿರುವ ಪೊಲೀಸರು ಕ್ರಮ ತಪ್ಪು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
Kalaburagi: ವಕ್ಫ್ ರದ್ದುಗೊಳಿಸಿ ಸನಾತನ ಮಂಡಳಿ ರಚಿಸುವಂತೆ ಆಗ್ರಹಿಸಿ ಬೀದಿಗಿಳಿದ ಮಠಾಧೀಶರು
MUST WATCH
ಹೊಸ ಸೇರ್ಪಡೆ
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.