ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
ಬಿಜೆಪಿ ರಾಜ್ಯ ನಾಯಕತ್ವ ವಿರುದ್ಧ ಮತ್ತೆ ಸೆಡ್ಡು
Team Udayavani, Nov 27, 2024, 12:52 AM IST
ಕಲಬುರಗಿ: “ವಕ್ಫ್ ನೋಟಿಸ್’ ವಿರುದ್ಧ ರಾಜ್ಯದ ಐದು ಜಿಲ್ಲೆಗಳಲ್ಲಿ “ಬಿಜೆಪಿಯ ಭಿನ್ನರ ಬಣ’ ಆಯೋಜಿಸಿರುವ 2ನೇ ದಿನದ ಜನಜಾಗೃತಿ ಜಾಥಾ ಮಂಗಳ ವಾರ ಕಲಬುರಗಿಯಲ್ಲಿ ನಡೆದಿದ್ದು, “ವಕ್ಫ್ ಕಾಯ್ದೆ ಕಿತ್ತು ಹಾಕಬೇಕೆಂಬುದೇ ನಮ್ಮ ಬೇಡಿಕೆ. ನಮ್ಮ ಹೋರಾಟ ಯಾವುದೇ ಕುಟುಂಬದ ವಿರುದ್ಧವಲ್ಲ’ ಎಂದು ಹೋರಾಟದ ನೇತೃತ್ವ ವಹಿಸಿರುವ ವಿಜಯ ಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಅಲ್ಲದೆ, ಪಕ್ಷದ ಅಧ್ಯಕ್ಷ ಸೇರಿ ಏನಾದರೂ ಆಗಬೇಕು ಎಂಬ ಉದ್ದೇಶವೂ ಇಲ್ಲ. ಯಾರು ಏನು ಬೇಕಾದರೂ ಹೇಳಲಿ. ಯಾರಧ್ದೋ ಮುಲಾಜಿಗೆ ಬಿದ್ದು, “ವಕ್ಫ್ ವಿರುದ್ಧ ಹೋರಾಟಕ್ಕೆ ಹೋಗಬೇಡಿ, ಈ ಹೋರಾಟ ನಮ್ಮದಲ್ಲ’ ಎಂದು ಹೇಳುವ ನೈತಿಕತೆ ಯಾರಿಗೂ ಇಲ್ಲ.
ಯಾರೂ ಭಯ ಪಡಬೇಡಿ. ಮುಂದಿನ ದಿನಗಳಲ್ಲಿ ನಾವೇ, ಈ ತಂಡದವರೇ ಸಿಎಂ ಆಗುವುದು ಖಚಿತ’ ಎಂದೂ ಯತ್ನಾಳ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟಿಕೆಟ್ ನೀಡುವ ಅಧಿಕಾರವೂ ನಮಗೆ ಮುಂದಿನ ದಿನಗಳಲ್ಲಿ ಟಿಕೆಟ್ ನೀಡುವ ಅಧಿಕಾರವೂ ನಮಗೇ ಬರಲಿದೆ. ನಮ್ಮ ತಂಡದವರು ಸಿಎಂ ಆದ ಅನಂತರ ಪ್ರಥಮ ಸಚಿವ ಸಂಪುಟ ಸಭೆಯಲ್ಲೇ ಅನೇಕ ವರ್ಷಗಳಿಂದ ಹಿಂದೂಗಳ ಮೇಲೆ ಹಾಕಿರುವ ಎಲ್ಲ ಕೇಸ್‌ಗಳನ್ನು ಹಿಂದಕ್ಕೆ ಪಡೆಯುತ್ತೇವೆ. ಅಲ್ಲದೆ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದರು.
ಡಿ. 2ರ ಅನಂತರ ವರದಿ
ರಾಜ್ಯದ ಮಠ-ಮಂದಿರಗಳು ಹಾಗೂ ರೈತರ ಜಮೀನಿನ ದಾಖಲೆಗಳಲ್ಲಿ ವಕ್ಫ್ ಎಂದು ನಮೂದಿ ಸಿರುವುದಕ್ಕೆ ಸಂಬಂ ಧಿಸಿ ಡಿ. 3 ಇಲ್ಲವೇ 4ರಂದು ದಿಲ್ಲಿಯಲ್ಲಿ ಜಗದಾಂಬಿಕಾ ಪಾಲ್ ನೇತೃತ್ವದ ಸಂಸತ್ತಿನ ಜಂಟಿ ಸಮಿತಿಗೆ ಮಧ್ಯಾಂತರ ವರದಿ ಸಲ್ಲಿಸಲಾಗುವುದು ಎಂದು ಯತ್ನಾಳ್ ತಿಳಿಸಿದರು.
“ಸಿ.ಟಿ. ರವಿ ಅವರನ್ನೇ ಕೇಳಿ’
ನಮ್ಮ ಹೋರಾಟ ವಕ್ಫ್ ಬೋರ್ಡ್‌ನಿಂದ ಅನ್ಯಾಯಕ್ಕೊಳಗಾದ ರೈತರು, ಮಠಾಧೀಶರ ಪರವಾಗಿದೆ. ಇದು ಯಾರ ವಿರುದ್ಧವೂ ಅಲ್ಲ. ಇದನ್ನು ಸಹಿಸದವರು ಏನೇನೋ ಹೇಳುತ್ತಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಮಂಗಳವಾರ ರಾತ್ರಿ ಯಾದಗಿರಿಯಲ್ಲಿ ಹೇಳಿದರು. ಪಕ್ಷದ ವೇದಿಕೆಯಿಂದ ಹೋರಾಟ ನಡೆಸಬೇಕು ಎಂಬ ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯಿಸಿ, ರವಿ ನಿತ್ಯ ನಮ್ಮ ತಂಡದ ಜತೆ ದೂರವಾಣಿ ಮೂಲಕ ಮಾತನಾಡುತ್ತಾರೆ. ನಿಮ್ಮ ಹೋರಾಟ ಸತ್ಯದ ಪರ ಇದೆ ಎಂದು ನಮಗೆ ಹೇಳಿದ್ದರು, ಈಗೇಕೆ ಹೀಗೆ ಮಾತನಾಡಿದ್ದಾರೆ ಎಂದು ಅವರನ್ನೇ ಕೇಳಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.