ವಿದ್ಯಾರ್ಥಿ ಆತ್ಮಹತ್ಯೆಗೆ ಕ್ಯಾಂಪಸ್‌ ನಡವಳಿಕೆ ಕಾರಣ


Team Udayavani, Apr 11, 2017, 3:47 PM IST

gul1.jpg

ಕಲಬುರಗಿ: ಜಿಲ್ಲೆಯ ಕಡಗಂಚಿ ಬಳಿಯ ಕೇಂದ್ರೀಯ ವಿವಿಯಲ್ಲಿ ದಲಿತ ವಿದ್ಯಾರ್ಥಿ ಆನಂದ ಶಕ್ತಿರಾಜ ಆತ್ಮಹತ್ಯೆ ಮಾಡಿಕೊಳ್ಳಲು ಕ್ಯಾಂಪಸ್‌ನಲ್ಲಿನ ಅನುಚಿತವಾದ ನಡವಳಿಕೆಗಳೇ ಕಾರಣವಾಗಿದೆ ಎಂದು ದಲಿತ ಹಕ್ಕುಗಳ ಸಮಿತಿ ಕರ್ನಾಟಕದ ರಾಜ್ಯ ಸಹ ಸಂಚಾಲಕ ಮಾರುತಿ ಮಾನ್ಪಡೆ ಹೇಳಿದರು. 

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೊಂದು ತೀರಾ ಕೆಳ ಹಂತದ ವರ್ತನೆಯಾಗಿದೆ. ಕ್ಯಾಂಪಸ್‌ನಲ್ಲಿರುವ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಹೊರ ರಾಜ್ಯದ ವಿದ್ಯಾರ್ಥಿಗಳ ಮೇಲೆ ತುಂಬಾ ಒತ್ತಡವಿದೆ. ಅಲ್ಲದೆ, ಅವರನ್ನು ತೀರಾ ಕಟುವಾಗಿ ನಡೆಸಿಕೊಳ್ಳಲಾಗುತ್ತಿದೆ.

ಇದರಿಂದ ವಿದ್ಯಾರ್ಥಿಗಳು ಖನ್ನತೆಗೆ ಒಳಗಾಗುತ್ತಾರೆ. ಇಂತಹ ವೇಳೆಯಲ್ಲಿ ಆಡಳಿತ ಮಂಡಳಿ  ಅಥವಾ ಸಂಬಂಧಿಸಿದ ವಿಭಾಗದ ಅಧ್ಯಾಪಕರು ನೆರವಿಗೆ ಬಾರದೇ ಹೋದಾಗ ಇಂತಹ ಆತ್ಮಹತ್ಯೆಗಳು ನಡೆಯುತ್ತವೆ ಎಂದರು. ಆನಂದ ಏಕಾಂಗಿಯಾಗಿದ್ದ. ಆತ ಕ್ಯಾಂಪಸ್‌ನಲ್ಲಿನ ಒತ್ತಡಗಳಿಂದಾಗಿ ತನ್ನ ಎಲ್ಲ ಗೆಳೆಯರೊಂದಿಗೆ ಚೆನ್ನಾಗಿ ನಡೆದುಕೊಳ್ಳಲು ಆಗದೆ ಸದಾ ಒಂಟಿಯಾಗಿ ಇರುತ್ತಿದ್ದ. 

ಅಲ್ಲದೆ, ಕಳೆದ ಹಲವು ದಿನಗಳಿಂದ ಮೆಸ್‌ ಖರ್ಚನ್ನು ಆಯಾ ವಿದ್ಯಾರ್ಥಿಗಳೇ ತೂಗಿಸಿಕೊಳ್ಳಬೇಕೆನ್ನುವ ನಿಯಮದಿಂದಾಗಿ ಆತ ಇನ್ನಷ್ಟು ಖನ್ನತೆಗೆ ಒಳಗಾದ. ತುಂಬಾ ಬಡವನಾಗಿದ್ದರಿಂದ ಈ ಖುರ್ಚು ನಿಭಾಯಿಸುವುದು ಕಷ್ಟವಾಗಿತ್ತು. ಅದನ್ನು ವಾರಗೀಯರ ಮುಂದೆ ಹೇಳಿಕೊಳ್ಳಬೇಕು ಎಂದರೆ ಸ್ನೇಹಪರವಾದ ವಾತಾವರಣ ಇರಲಿಲ್ಲ.

ಇದರಿಂದಾಗಿ ಆತ ಆತ್ಮಹತ್ಯೆಗೆ ಒಳಗಾಗಿರುವ ಸಾಧ್ಯತೆಗಳು ಹೆಚ್ಚಾಗಿವೆ. ಆದ್ದರಿಂದ ಈ ಕುರಿತು ರಾಜ್ಯ ಸರಕಾರ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಹೊರ ರಾಜ್ಯಗಳಿಂದ ಬಂದಿರುವ ದಲಿತ ವಿದ್ಯಾರ್ಥಿಗಳ ಶಿಷ್ಯವೇತನವನ್ನು ವಿಶ್ವ ವಿದ್ಯಾಲಯವೇ ತರಿಸಿಕೊಳ್ಳಬೇಕು. 

ಆದರೆ, ಈ ವರ್ಷದಿಂದ ಆಯಾ ರಾಜ್ಯಗಳಿಂದ ವಿದ್ಯಾರ್ಥಿಗಳೆ ತರಬೇಕು ಎಂದು ನಿಯಮ ಮಾಡಿರುವುದೂ ವಿದ್ಯಾರ್ಥಿ ಆನಂದ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಆರೋಪಿಸಿದರು. ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ಚೆಂಡೋಲಿ ಗ್ರಾಮದ ಪ್ರತಿಭಾವಂತ ಬಡ ವಿದ್ಯಾರ್ಥಿ ಆನಂದ ಶಕ್ತಿರಾಜ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬಿಬಿಎ ಓದುತ್ತಿದ್ದ. ಆತನ ತಾಯಿ ತೀರಿಕೊಂಡಿದ್ದು ತಂದೆ ಬೇರೆ ಮದುವೆಯಾಗಿ ಆ ಪತ್ನಿಯೊಂದಿಗೆ ಜೀವನ ನಡೆಸುತ್ತಿದ್ದಾನೆ.

ಹೀಗಾಗಿ ಈ ವಿದ್ಯಾರ್ಥಿ ಅನಾಥವಾಗಿದ್ದು, ಬೇರೆಯವರ ಸಹಾಯದಿಂದ ಕೇಂದ್ರೀಯ ವಿಶ್ವ ವಿದ್ಯಾಲಯದಲ್ಲಿ ಪ್ರವೇಶ ಪಡೆದಿದ್ದಾನೆ. ಆದರೆ, ದಿಢೀರ್‌ ಕೇಂದ್ರೀಯ ವಿಶ್ವವಿದ್ಯಾಲಯದ ಮುಖ್ಯಸ್ಥರು ಹೊಸ ನಿಯಮ ಜಾರಿಗೆ ತಂದು ಹೊರ ರಾಜ್ಯಗಳಿಂದ ಬಂದಿರುವ ದಲಿತ ವಿದ್ಯಾರ್ಥಿಗಳು ತಮ್ಮ ಶಿಷ್ಯವೇತನ ಮಂಜೂರಾಗಿ ಬರಲು ವಿಳಂಬವಾಗುತ್ತದೆ. ಹೀಗಾಗಿ ಊಟದ ವೆಚ್ಚ ಭರಿಸಬೇಕು ಎಂದು ಹೇಳಿದ್ದಾರೆ. 

ಇದರಿಂದಾಗಿ ವಿದ್ಯಾರ್ಥಿಗಳಿಗೆ ಏನೂ ತೋಚದಂತಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಕಳೆದ ಐದು ವರ್ಷಗಳಿಂದ ಕೇಂದ್ರೀಯ ವಿಶ್ವವಿದ್ಯಾಲಯ ಕಾರ್ಯನಿರ್ವಹಿಸುತ್ತಿದೆ. ಈ ಹಿಂದೆ ವಿಶ್ವವಿದ್ಯಾಲಯವೇ ಹೊರ ರಾಜ್ಯಗಳ ವಿದ್ಯಾರ್ಥಿಗಳ ಪ್ರವೇಶ ಪಡೆದುಕೊಂಡು ಸ್ವತ ಅವರೆ ವಿದ್ಯಾರ್ಥಿಗಳ ಶಿಷ್ಯವೇತನವನ್ನು ತರಿಸಿಕೊಳ್ಳುತ್ತಿದ್ದರು. 

ಕೇಂದ್ರೀಯ ವಿಶ್ವವಿದ್ಯಾಲಯವಾಗಿರುವುದರಿಂದ ಯಾವುದೇ ರಾಜ್ಯದ ವಿದ್ಯಾರ್ಥಿ ಪ್ರವೇಶ ಪಡೆದರೂ ಕೇಂದ್ರ ಸರಕಾರ ನೇರವಾಗಿ ಆಯಾ ರಾಜ್ಯಗಳಿಂದ ವಿದ್ಯಾರ್ಥಿಗಳ ಶಿಷ್ಯವೇತನವನ್ನು ವಿಶ್ವವಿದ್ಯಾಲಯಕ್ಕೆ ತಲುಪಿಸಬೇಕು. ಆದರೆ, ವಿದ್ಯಾರ್ಥಿಗಳೆ ಹೋಗಿ ಶಿಷ್ಯ ವೇತನ ತರುವುದಕ್ಕೆ ಆಗುತ್ತದೆಯೆ? ಈ ಹಿಂದೆ ಇರದ ಕಾನೂನು ಈಗ ತಂದಿರುವುದು ನೋಡಿದರೆ ವಿಶ್ವವಿದ್ಯಾಲಯ ಮುಖ್ಯಸ್ಥರು ದಲಿತ ವಿರೋಧಿ ನೀತಿ ಅನುಸರಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ಆರೋಪಿಸಿದರು. 

ದಲಿತರೇ ಆಗಿರುವ ಲೋಕಸಭಾ ಸದಸ್ಯ ಡಾ| ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿದ ಅವರು, ಈಗ ಲೋಕಸಭೆ ಅಧಿವೇಶನ ನಡೆಯುತ್ತಿದೆ. ಕೇಂದ್ರೀಯ ವಿವಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಕುರಿತು ಚರ್ಚೆ ಮಾಡಬೇಕು ಎಂದು ಮನವಿ ಮಾಡಿದರು. ಈ ಆತ್ಮಹತ್ಯೆ ಬಗ್ಗೆ ಸಮಗ್ರವಾದ ತನಿಖೆ ನಡೆಸಬೇಕು ಎಂದು ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಮಾನ್ಪಡೆ ತಿಳಿಸಿದರು. ಮುಖಂಡರಾದ ಶರಣಬಸಪ್ಪ ಮಮಶೆಟ್ಟಿ, ಅಶೋಕ ಮ್ಯಾಗೇರಿ ಸುದ್ದಿಗೋಷ್ಠಿಯಲ್ಲಿದ್ದರು.  

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

v

Kalaburagi; ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ; ದಿನಾಂಕ ಅಂತಿಮಗೊಳಿಸಿ ಅಧಿಸೂಚನೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

8-

Chittapur: ದಂಡೋತಿ ಸೇತುವೆ; ಕಿತ್ತು ಹೋದ ರಸ್ತೆ

7-

Sedam: ಕಾಗಿಣಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.