ವಿದ್ಯಾರ್ಥಿನಿ ಸಾವು; ಗರಗಪಳ್ಳಿಯಲ್ಲಿ ಪ್ರತಿಭಟನೆ
ಪ್ರಕರಣ ಸಿಒಡಿ ತನಿಖೆಗೆ ಒಪ್ಪಿಸಲು ಆಗ್ರಹ! ಕಾಲೇಜು ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ಆಕ್ರೋಶ
Team Udayavani, Mar 7, 2021, 5:00 PM IST
ಚಿಂಚೋಳಿ: ಕಲಬುರಗಿ ನಗರದ ಚಂದ್ರಕಾಂತ ಪಾಟೀಲ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಲ್ಲಿಕಾ ಹಣಮಂತರಾಯ ಹುಲಿ (17) ವಸತಿ ನಿಲಯದ ಮೇಲಿಂದ ಬಿದ್ದು ಮೃತಪಟ್ಟ ಘಟನೆಯನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿ ಗರಗಪಳ್ಳಿ ಗ್ರಾಮಸ್ಥರು ಚಿಂಚೋಳಿ-ತಾಂಡೂರ ರಾಜ್ಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು.
ಕಳೆದ ಮಾರ್ಚ್ 4ರಂದು ವಿದ್ಯಾರ್ಥಿನಿ ವಸತಿ ನಿಲಯದ ಕಟ್ಟಡದ ಮೇಲಿಂದ ಬಿದ್ದಿದ್ದಳು. ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಹೆದ್ರಾಬಾದ್‌ಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮಾ.5ರಂದು ಮೃತಪಟ್ಟಿದ್ದಾಳೆ ಎಂದು ತಿಳಿಸಲಾಗಿದೆ. ಆದರೆ ವಸತಿ ನಿಲಯದ ಸುತ್ತಲೂ ಐದು ಅಡಿ ಎತ್ತರದ ಗೋಡೆಯಿದೆ. ಅಲ್ಲದೇ ಕಬ್ಬಿಣದ ಸಲಾಖೆಯನ್ನು ಅಳವಡಿಸ ಲಾಗಿದೆ. ಹೀಗಿದ್ದಾಗ ಮೇಲಿನಿಂದ ಬೀಳಲು ಹೇಗೆ ಸಾಧ್ಯ ಎಂದು ಮೃತಪಟ್ಟ ಯುವತಿ ತಂದೆ ಹಣಮಂತರಾಯ ಹುಲಿ ಪ್ರಶ್ನಿಸಿದರು.
ಚಂದ್ರಕಾಂತ ಪಾಟೀಲ ಕಾಲೇಜಿನ ವಸತಿ ನಿಲಯದ ಆಡಳಿತ ಮಂಡಳಿ ನಿರ್ಲಕ್ಷÂತನದಿಂದ ಈ ಘಟನೆ ನಡೆದಿದೆ. ವಸತಿ ನಿಲಯದಲ್ಲಿ ಯಾವುದೇ ಭಾಗದ ಕೋಣೆಗಳಲ್ಲಿಯೂ ಸಿಸಿ ಕ್ಯಾಮೆರಾ ಅಳವಡಿಸಿಲ್ಲ. ಕಟ್ಟಡದ ಮೇಲಿಂದ ಬಿದ್ದಳ್ಳೋ, ಇಲ್ಲವೇ ಮೇಲಿಂದ ನೂಕಲಾಗಿ ದೆಯೇ ಎನ್ನುವ ಕುರಿತು ಶಂಕೆಯಿದೆ. ಪ್ರಕರಣ ಕಲಬುರಗಿ ಎಂ.ಬಿ. ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸೂಕ್ತ ತನಿಖೆಯಾಗಲು ಪ್ರಕರಣವನ್ನು ಸಿಒಡಿಗೆ ಒಪ್ಪಿಸಬೇಕೆಂದು ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಗೌತಮ ಪಾಟೀಲ, ಗೌರಿಶಂಕರ ಉಪ್ಪಿನ, ಸುರೇಶ ದೇಶಪಾಂಡೆ, ಸಿದ್ದಯ್ಯ ಸ್ವಾಮಿ, ಶಂಭುಲಿಂಗ ಶಿವಪುರೆ, ಉಮಾ ಪಾಟೀಲ, ಮಾರುತಿ ಗಂಜಗಿರಿ, ಚಿತ್ರಶೇಖರ ಪಾಟೀಲ, ಅಲ್ಲಮಪ್ರಭು ಹುಲಿ ಒತ್ತಾಯಿಸಿದರು.
ನಂತರ ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿಗೆ ಮನವಿ ಪತ್ರ ಸಲ್ಲಿಸಿದರು. ಸಿಪಿಐ ಮಹಾಂತೇಶ ಪಾಟೀಲ, ಜಿ.ಕೆ. ಜಗದೀಶ ಸುಲೇಪೇಟ ಬಂದೋಬಸ್ತ್ ಮಾಡಿದ್ದರು. ನಾಲ್ಕು ತಾಸುಗಳ ಕಾಲ ಪ್ರತಿಭಟನೆ ನಡೆದಿದ್ದರಿಂದ ತೆಲಂಗಾಣ, ತಾಂಡೂರ, ಚಿಂಚೋಳಿ ನಗರ ಪ್ರದೇಶಕ್ಕೆ ಹೋಗುವ ಪ್ರಯಾಣಿಕರು ಪರದಾಡುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.