ಯುವಕನ ಕೊಲೆ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Sep 25, 2018, 11:47 AM IST
ಕಲಬುರಗಿ: ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಯುವಕನ ಕೊಲೆ ನಡೆದಿರುವುದನ್ನು ಖಂಡಿಸಿ ಹಾಗೂ ಸೂಕ್ತ ಬಂದೋಬಸ್ತ್ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೋಮವಾರ ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದರು.
ಒಂದು ಹಂತದಲ್ಲಿ ವಿವಿ ಆಡಳಿತ ಭವನಕ್ಕೆ ನುಗ್ಗಿ ದಾಂಧಲೆ ಮಾಡಿದರು. ಸೋಮವಾರ ಬೆಳಗ್ಗೆಯಿಂದಲೇ ತರಗತಿ ಬಹಿಷ್ಕರಿಸಿ ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು ಕೊಲೆ ಮಾಡಿದವರು ಯಾರೇ ಆಗಿರಲಿ ಮೊದಲು ಬಂಧವಾಗಬೇಕು. ಕೊಲೆ ಇಡೀ ವಿವಿ ವಿದ್ಯಾರ್ಥಿ ವಲಯದಲ್ಲಿ ಆಂತಕ ಹಾಗೂ ಭಯದ ವಾತಾವರಣ ಮೂಡಿಸಿದೆ. ವಿವಿಗೆ ಜೀವ ಕೈಯಲ್ಲಿ ಹಿಡಿದುಕೊಂಡು ಬರುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿವಿಯೊಳಗೆ ಯಾರಾದರೂ ಸರಳವಾಗಿ ನುಗ್ಗುತ್ತಿದ್ದಾರೆ. ಬಂದೋಬಸ್ತ್ ನಾಮಕವಾಸ್ತೆ ಎನ್ನುವಂತಾಗಿದೆ. ಇರುವ ಸೆಕ್ಯೂರಿಟಿ ಗಾಡ್ಸ್‌ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಸಂಜೆಯಂತೂ ಕಿಡಗೇಡಿಗಳು ನಿರ್ಭಯವಾಗಿ ನುಗ್ಗುತ್ತಿದ್ದಾರೆ. ಯಾರಿಗೆ ಯಾರೂ ಹೇಳದಂತಾಗಿದೆ.
ಬರೀ ಕುಲಪತಿಗಳ ನಿವಾಸಕ್ಕೆ ಮಾತ್ರ ಸಿಸಿ ಕ್ಯಾಮೆರಾ ಇದ್ದರೆ ಸಾಲದು. ಇಡೀ ವಿಶ್ವವಿದ್ಯಾಲಯ ಕ್ಯಾಂಪಸ್‌ದಾದ್ಯಂತ ಸಿಸಿ ಕ್ಯಾಮೆರಾ ಅಳವಡಿಸಬೇಕು. ವಿವಿ ಸುತ್ತುಗೋಡೆ ಎತ್ತರಿಸಬೇಕು. ವಿವಿ ಹಿಂದುಗಡೆಯೂ ಪ್ರದೇಶದಲ್ಲೂ ಸುತ್ತು ಗೋಡೆ ನಿರ್ಮಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು. ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರೂ ವಿವಿ ಕುಲಪತಿಗಳು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಬಾರದೇ ಇದ್ದುದ್ದಕ್ಕೆ ಸಿಟ್ಟಿಗೆದ್ದ ವಿದ್ಯಾರ್ಥಿಗಳು ಕುಲಪತಿಗಳಿರುವ ವಿವಿ ಆಡಳಿತ ಭವನಕ್ಕೆ ನುಗ್ಗಿದರು. ಗದ್ದಲಕ್ಕೆ ಮುಂದಾದರು. ಇಷ್ಟೋತ್ತಿಗೆ ಪೊಲೀಸು ವಿದ್ಯಾರ್ಥಿಗಳನ್ನು ತಡೆದು ಮುಂದಾಗುವುದನ್ನು ತಪ್ಪಿಸಿದರು.
ಕುಲಪತಿ ಭರವಸೆ: ತದನಂತರ ಪ್ರತಿಭಟನಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ವಿವಿ ಕುಲಪತಿ ಪ್ರೊ| ಎಚ್.ಎಂ. ಮಹೇಶ್ವರಯ್ಯ, ಬಂದೋಬಸ್ತ್ ಇನ್ನಷ್ಟು ಬಲಪಡಿಸಲಾಗುವುದು. ಬಹು ಮುಖ್ಯವಾಗಿ ಸುತ್ತುಗೋಡೆ ಎತ್ತರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು. 100 ಅಡಿ ಅಂತರದಲ್ಲಿ ಕಂಬಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಲಾಗುವುದು ಎಂದು ಭರವಸೆ ನೀಡಿದರು.
ಮತ್ತೆ ಹೋರಾಟ: ಬರೀ ಭರವಸೆ ನೀಡಿದರೆ ಸಾಲದು. ವಾರ ಇಲ್ಲವೇ 10 ದಿನದೊಳಗೆ ಬೇಡಿಕೆ ಈಡೇರದಿದ್ದರೆ ಮತ್ತೆ
ಹೋರಾಟಕ್ಕೀಳಿಯುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದರು. ತದನಂತರ ಕುಲಪತಿಗಳು ಬಂದೋಬಸ್ತ್ಹೆ ಚ್ಚಳ ಹಿನ್ನೆಲೆಯಲ್ಲಿ ಸಂಬಂಧಪಟ್ಟವರೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.