ವಿದ್ಯಾರ್ಥಿಗಳ ಹೋರಾಟ ಯಶಸ್ವಿ: ವಾಡಿ ಇಂದಿರಾಗಾಂಧಿ ವಸತಿ ಶಾಲೆ ಸ್ಥಳಾಂತರ
Team Udayavani, Aug 18, 2022, 10:05 PM IST
ವಾಡಿ: ಕಳಪೆ ಊಟ ವಸತಿ ಸೌಲಭ್ಯದಿಂದ ಬೇಸತ್ತು ವಿದ್ಯಾರ್ಥಿಗಳು ಎಐಡಿಎಸ್‌ಒ ನೇತೃತ್ವದಲ್ಲಿ ಹೋರಾಟಕ್ಕಿಳಿದ ಬಳಿಕ ಎಚ್ಚೆತ್ತುಕೊಂಡಿರುವ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಸ್ಥರದ ಅಧಿಕಾರಿಗಳು, ಸ್ಥಳೀಯ ಇಂದಿರಾಗಾಂಧಿ ವಸತಿ ಶಾಲೆಗೆ ಭೇಟಿ ನೀಡುವ ಮೂಲಕ ಮಕ್ಕಳ ಸಮಸ್ಯೆ ಆಲಿಸಲು ಮುಂದಾಗಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆಯ ನಂತರ ಬುಧವಾರ ಸಂಜೆ ವಸತಿ ನಿಲಯಕ್ಕೆ ಹಟಾತ್ ಭೇಟಿ ನೀಡಿದ್ದ ಸಮಾಜ ಕಲ್ಯಾಣ ಇಲಾಖೆಯ ಚಿತ್ತಾಪುರ ತಾಲೂಕು ಅಧಿಕಾರಿ ಚೇತನ್ ಗುರಿಕಾರ, ನಿಲಯದ ಮಕ್ಕಳೊಂದಿಗೆ ಮಾತುಕತೆ ನಡೆಸಿ ಅಲ್ಲಿನ ಅವ್ಯವಸ್ಥೆ ಅರಿಯುವ ಪ್ರಯತ್ನ ಮಾಡಿದ್ದರು. ಶಿಕ್ಷಕರು ಮತ್ತು ಅಡುಗೆಯವರೊಂದಿಗೆ ಮಾತನಾಡಿ ಸಮಸ್ಯೆಗಳ ಬಗ್ಗೆ ತಿಳಿಸಿದುಕೊಂಡು ವರದಿ ದಾಖಲಿಸಿಕೊಂಡಿದ್ದರು.
ಗುರುವಾರ ಬೆಳಗ್ಗೆ ಇತರ ಅಧಿಕಾರಿಗಳೊಂದಿಗೆ ಇದೇ ಇಂದಿರಾಗಾಂಧಿ ವಸತಿ ನಿಲಯಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕಿ ಪಿ.ಶುಭಾ, ನಿಲಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಕಣ್ಣಾರೆ ಪರೀಕ್ಷಿಸಲು ಮುಂದಾದರು. ಮಕ್ಕಳು ವಾಸವಿರುವ ಬಾಡಿಗೆ ಶಾಲಾ ಕಟ್ಟಡವನ್ನು ಅವಲೋಕಿಸಿದರು.
ಪಾಠದ ಕೋಣೆ, ವಸತಿ ಕೋಣೆ, ಶೌಚಾಲಯ ಅವ್ಯವಸ್ಥೆ ಗಮನಿಸಿದರು. ಊಟಕ್ಕೆ ಬಳಸುವ ಆಹಾರ ಧಾನ್ಯಗಳ ಗುಣಮಟ್ಟ ನೋಡಿದರು. ಅಡುಗೆ ಸಹಾಯಕರೊಂದಿಗೆ ಚರ್ಚಿಸಿ ತರಾಟೆಗೆ ತೆಗೆದುಕೊಂಡರು. ಉಂಟಾದ ಮಕ್ಕಳ ಅನಾನುಕೂಲಕರ ಸಮಸ್ಯೆಗೆ ವಿಷಾಧ ವ್ಯಕ್ತಪಡಿಸಿದರು. ಮಕ್ಕಳಿಂದ ದೂರು ಸ್ವೀಕರಿಸಿದ ಅಧಿಕಾರಿ ಶುಭಾ, ಸೋಮವಾರವೆ ಎಲ್ಲಾ ವಿದ್ಯಾರ್ಥಿಗಳನ್ನು ವಾಡಿ ನಗರದ ಖಾಸಗಿ ಕಟ್ಟಡದಿಂದ ಸ್ಥಳಾಂತರಿಸಿ ಕರದಾಳ ಗ್ರಾಮದಲ್ಲಿನ ನೂತನ ವಸತಿ ಶಾಲೆ ಕಟ್ಟಡಕ್ಕೆ ಕರೆದೊಯ್ಯಲಾಗುವುದು ಎಂದು ಭರವಸೆ ನೀಡಿದರು.
ಅಧಿಕಾರಿಗಳ ಆಶಾದಾಯಕ ಭರವಸೆಗೆ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದರು. ಇದೇ ವೇಳೆ ಕರದಾಳ ನೂತನ ಕಟ್ಟಡವನ್ನೂ ವೀಕ್ಷಿಸಿದರು. ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಚೇತನ್ ಗುರಿಕಾರ, ಗುರುಪಾದಪ್ಪ ನೀಲಗಿ, ನಿಲಯದ ಪ್ರಾಂಶುಪಾಲರು ಹಾಗೂ ಶಿಕ್ಷಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.