ವಸತಿ ಶಾಲೆ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ
Team Udayavani, Aug 16, 2022, 4:30 PM IST
ವಾಡಿ: ಪಟ್ಟಣದ ಬಳಿರಾಮ ಚೌಕ್ ಹತ್ತಿರವಿರುವ ಇಂದಿರಾ ಗಾಂಧಿ ವಸತಿ ಶಾಲೆಯ ಸುಮಾರು 160ಕ್ಕೂ ಹೆಚ್ಚು ಬಾಲಕ ಮತ್ತು ಬಾಲಕಿಯರು ವಸತಿ ನಿಲಯದ ಅವ್ಯವಸ್ಥೆ ಖಂಡಿಸಿ ಸ್ವಯಂ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಹುಳು ಹುಪ್ಪಡಿ ಕಲ್ಲು ಕಸ ತುಂಬಿದ ಅಕ್ಕಿಯಿಂದ ತಯಾರಿಸಿದ ಕಳಪೆ ಊಟ ಕೊಡುತ್ತಾರೆ. ಹೊಟ್ಟೆ ತುಂಬುವುದಿಲ್ಲ ರುಚಿ ಕೇಳುವಂತಿಲ್ಲ. ಪಾಠದ ಕೋಣೆ ಮತ್ತು ವಸತಿ ಕೋಣೆಗಳಿಗೆ ಬಾಗಿಲುಗಳಿಲ್ಲ. ಶೌಚಾಲಯ ಶುಚಿಗೊಳಿಸುವವರಿಲ್ಲ. ಗೋಡೆಗಳಿಂದ ನೀರಿಳಿದು ಮಲಗಲು ಸಾಧ್ಯವಾಗುತ್ತಿಲ್ಲ. ವಿದ್ಯುತ್ ಸಮಸ್ಯೆ ಜೀವಂತವಿದೆ. ಫ್ಯಾನ್ ವ್ಯವಸ್ಥೆ ಇಲ್ಲ. ಕೆಟ್ಟ ಫ್ಯಾನ್ ಗಳನ್ನು ನಾವೇ ರಿಪೇರಿ ಮಾಡಿಸಬೇಕು. ಸೊಳ್ಳೆ ಕಾಟದಿಂದ ನಿದ್ರೆಯೂ ಇಲ್ಲ ಅಭ್ಯಾಸವೂ ಆಗುತ್ತಿಲ್ಲ. ಸಮಸ್ಯೆಗಳು ಗಮನಕ್ಕೆ ತಂದರೆ ವಾರ್ಡನ್ ಹೆದರಿಸುತ್ತಾರೆ ಎಂದು ದೂರಿದರು.
ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದನ್ನು ಕಂಡು ಸ್ಥಳೀಯರು ವಿದ್ಯಾರ್ಥಿಗಳ ಬೆನ್ನಿಗೆ ನಿಂತಿದ್ದರು. ನಾವು ಮಲಗುವ ಖಾಸಗಿ ಕಟ್ಟಡದ ವಿಶ್ರಾಂತಿ ಕೋಣೆಗಳಿಗೆ ಬಾಗಿಲಿಲ್ಲ. ಶೌಚಾಲಯಕ್ಕೂ ಬಾಗಿಲು ಅಳವಡಿಸಿಲ್ಲ. ರಾತ್ರಿ ಬೆಳಕಿನ ವ್ಯವಸ್ಥೆಯಿಲ್ಲ. ಭಯದಲ್ಲೇ ಮಲಗುತ್ತಿದ್ದೇವೆ ಎಂದು ವಿದ್ಯಾರ್ಥಿನಿಯರು ಕಷ್ಟ ಹೇಳಿಕೊಂಡರೆ, ಊಟ ಸೇರದೇ ಆರೋಗ್ಯ ಹದಗೆಡುತ್ತಿದೆ. ಮಲಗುವ ಕೋಣೆಗಳು ಸರಿಯಾಗಿಲ್ಲ. ಸ್ನಾನ ಮತ್ತು ಶೌಚಾಲಯಗಳ ನೀರು ಪಾಠದ ಕೋಣೆಗಳತ್ತ ಹರಿದು ದುರ್ವಾಸನೆ ಹಬ್ಬುತ್ತದೆ. ಇಂತಹ ಕೆಟ್ಟ ಪರಿಸ್ಥಿತಿಯಲ್ಲಿ ಅಭ್ಯಾಸ ಅಸಹ್ಯ ಎನ್ನಿಸುತ್ತಿದೆ ಎಂದು ಆರೋಪಿಸಿದರು.
ಪಿಎಸ್‌ಐ ಸಂಧಾನ: ಮಕ್ಕಳ ದಿಢೀರ್ ಪ್ರತಿಭಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪಿಎಸ್‌ಐ ಮಹಾಂತೇಶ ಜಿ.ಪಾಟೀಲ, ಸಮಸ್ಯೆ ಆಲಿಸಿದರು. ಹೋರಾಟಕ್ಕೆ ಮುಂದಾದ ವಿದ್ಯಾರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರು. ಈ ಕುರಿತು ಮೇಲಾಧಿ ಕಾರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.