11ರ ದೆಹಲಿ ಚಲೋದಲ್ಲಿ ಪಾಲ್ಗೊಳ್ಳಲು ಸ್ವಾಮೀಜಿ ಕರೆ
Team Udayavani, Dec 8, 2018, 11:18 AM IST
ಆಳಂದ: ಲಿಂಗಾಯತ ಧರ್ಮದ ಸಾಂವಿಧಾನಿಕ ಮಾನ್ಯತೆಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ಡಿ. 11ರಿಂದ ಮೂರು ದಿನಗಳ ಕಾಲ ಕೂಡಲಸಂಗಮ ಪೀಠದ ಮಹಿಳಾ ಜಗದ್ಗುರು ಪೂಜ್ಯ ಮಾತೆ ಮಹಾದೇವಿ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯಲಿರುವ ಲಿಂಗಾಯತ ಮಹಾರ್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಧರ್ಮಾಭಿಮಾನಿಗಳು ಪಾಲ್ಗೊಳ್ಳಬೇಕು ಎಂದು ಉಸ್ತುರಿ, ಧುತ್ತರಗಾಂವ ಮಠದ ಶ್ರೀ ವಿಶ್ವನಾಥ ಕೋರಣೇಶ್ವರ ಮಹಾಸ್ವಾಮೀಜಿ ಕರೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮ ಮಾನ್ಯತೆಯಿಂದ ಧರ್ಮೀಯರ ಮಕ್ಕಳ ಭವಿಷ್ಯಕ್ಕಾಗಿ, ಸಮಾಜದ ಏಳ್ಗೆಗಾಗಿ ಬಸವಾದಿ ಶರಣರ ತತ್ವ ಮತ್ತು ವಚನ ಸಾಹಿತ್ಯ ಉಳಿವಿಗಾಗಿ, ಜನಾಂಗದ ಭವಿಷ್ಯತ್‌ಗಾಗಿ, ಬಸವಾದಿ ಶರಣರ ಹೋರಾಟಗಳಿಗೆ ಗೌರವ, ಘನತೆ ಸಿಗಬೇಕಾದರೆ ಲಿಂಗಾಯತ ಧರ್ಮ ಮಾನ್ಯತೆಗಾಗಿ ಹೋರಾಟ ಅನಿವಾರ್ಯ ಎಂದು ಹೇಳಿದರು.
ಧರ್ಮಕ್ಕೆ ಸಂವಿಧಾನಿಕ ಮಾನ್ಯತೆ ನೀಡುವ ಕುರಿತು ನಿವೃತ್ತ ನ್ಯಾಯಮೂರ್ತಿ ಎಚ್. ಎನ್. ನಾಗಮೋಹನದಾಸ ನೇತೃತ್ವದ ತಜ್ಞರ ಸಮಿತಿ ಹಿಂದಿನ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ ಮೇಲೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಆದರೂ ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿ ಯಾವುದೇ ಕ್ರಮಕೈಗೊಂಡಿಲ್ಲ. ಇದು ಲಿಂಗಾಯತ ಧರ್ಮೀಯರಿಗೆ ಅನ್ಯಾಯಯ ಮಾಡುತ್ತಿದೆ. ಹೀಗೆ ದಿನದೊಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸೈದ್ಧಾಂತಿಕ, ಧಾರ್ಮಿಕ, ತಾತ್ವಿಕ ನೆಲೆಗಟ್ಟಿನ ಮೇಲೆ ಪ್ರತ್ಯೇಕ ಧರ್ಮದ ಹೋರಾಟ ನಡೆಯುತ್ತಿದೆ. ಲಿಂಗಾಯತರನ್ನು ಕೇವಲ ಮತಬ್ಯಾಂಕ್ ದೃಷ್ಟಿಯಲ್ಲಿ ನೋಡುವುದು ಸರಿಯಲ್ಲ. ಲಿಂಗಾಯತರು ಒಂದು ಪಕ್ಷಕ್ಕೆ ಸೀಮಿತರಲ್ಲ. ಧರ್ಮವನ್ನು ರಾಜಕೀಯ ದಾಳವನ್ನಾಗಿ ಬಳಸಿಕೊಳ್ಳಬಾರದು ಎಂದು ಹೇಳಿದರು.
500 ವರ್ಷಗಳಷ್ಟು ಹಳೆಯ ಸಿಖ್ ಧರ್ಮಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ಸಿಕ್ಕಿರಬೇಕಾದರೆ 900 ವರ್ಷಗಳಷ್ಟು ಪುರಾತನವಾದ ಬಸವ ಧರ್ಮಕ್ಕೆ ಸ್ವತಂತ್ರ ಧರ್ಮದ ಸ್ಥಾನ ಸಿಗಬೇಕಿರುವುದು ಅತ್ಯವಶ್ಯ. ಪ್ರಸ್ತುತ ನ್ಯಾಯನೂರ್ತಿ ನಾಗಮೋಹನ ದಾಸ ಅವರನ್ನು ಒಳಗೊಂಡ ತಜ್ಞರ ವರದಿ ಕಾನೂನು ಚೌಕಟ್ಟಿನೊಳಗಿದೆ.
ಇದನ್ನು ರಾಜಕೀಯ ಮಾಡಬಾರದು. ಹಂತ, ಹಂತವಾಗಿ ನಡೆಯುವ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಧರ್ಮಾಭಿಮಾನಿಗಳು ಭಾಗವಹಿಸಬೇಕು ಎಂದು ಹೇಳಿದರು. ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಅಧ್ಯಕ್ಷ ಪಿ.ಎಸ್. ಮಹಾಗಾಂವಕರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.