ತಾಲೂಕುಗಳಲ್ಲಿ ಸ್ವೀಪ್ ಕಾರ್ಯಕ್ರಮ
Team Udayavani, Apr 14, 2018, 12:26 PM IST
ಕಲಬುರಗಿ: ಜಿಲ್ಲೆಯ ಎಲ್ಲ ತಾಲೂಕು ಮಟ್ಟದಲ್ಲಿ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಪ್ರತಿ ತಾಲೂಕಿಗೆ 50 ಸಾವಿರ ರೂ. ನೀಡಲಾಗುತ್ತಿದ್ದು, ಸ್ವೀಪ್ ಕಾರ್ಯಕ್ರಮಕ್ಕೆ ಅವಶ್ಯಕವಿರುವ ಸಾಮಗ್ರಿ ಮತ್ತು ಪರಿಕರಗಳನ್ನು ಖರೀದಿಸಬೇಕೆಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹೆಪ್ಸಿಬಾರಾಣಿ ಕೋರ್ಲಪಾಟಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವೀಪ್ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿ, ತಾಲೂಕು ಮಟ್ಟದಲ್ಲಿ ಸೈಕಲ್, ಬೈಕ್ ರ್ಯಾಲಿ, ಕ್ಯಾಂಡಲ್ ಮಾರ್ಚ್ ಹಾಗೂ ಮ್ಯಾರಾಥಾನ್ ಗಳಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಎಲ್ಲ ಮತಗಟ್ಟೆಗಳಲ್ಲಿ ವಿವಿ ಪ್ಯಾಟ್ ಕುರಿತು ಮಾಹಿತಿ ನೀಡಲು ಪೋಸ್ಟರ್, ಬ್ಯಾಡ್ಜ್, ಕ್ಯಾಪ್ ಗಳ ವ್ಯವಸ್ಥೆ ಮಾಡಲಾಗಿದೆ. ಅವುಗಳನ್ನು ಎಲ್ಲ ತಾಲೂಕುಗಳಿಗೂ ವಿತರಿಸಲಾಗುವುದು.
ಉದ್ಯೋಗ ಖಾತ್ರಿ ಕೆಲಸಗಳನ್ನು ಎಲ್ಲ ಗ್ರಾಪಂಗಳಲ್ಲಿ ಪ್ರಾರಂಭಿಸಿ ಉದ್ಯೋಗ ಖಾತ್ರಿ ನಡೆಯುವ ಸ್ಥಳಗಳಲ್ಲಿ ಕೂಲಿ ಕಾರ್ಮಿಕರಿಗೆ ಮತದಾನದ ಜಾಗೃತಿ ಮೂಡಿಸಬೇಕು. ಪ್ರತಿ ವಾರ ಕನಿಷ್ಠ ಐದು ಗ್ರಾಪಂಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಹೇಳಿದರು. ಕಳೆದ ಚುನಾವಣೆಗಳಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಅಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂದು ತಿಳಿಸಿದರು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹೋಬಳಿ ಮಟ್ಟದಲ್ಲಿ ಜರುಗುವ ಸಂತೆ, ಜಾತ್ರೆಗಳಲ್ಲಿ ವಿನೂತನವಾಗಿ ಸ್ವೀಪ್ ಕಾರ್ಯಕ್ರಮ ರೂಪಿಸಬೇಕು. ಚಿತ್ತಾಪುರ, ಸೇಡಂ ತಾಲೂಕುಗಳಲ್ಲಿ ಕಾರ್ಖಾನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಕಾರ್ಖಾನೆ ಕಾರ್ಮಿಕರಿಗೆ ಕಡ್ಡಾಯವಾಗಿ ಮತದಾನ ಮಾಡಲು ಜಾಗೃತಿ ಮೂಡಿಸಬೇಕು. ಅಂಗವಿಕಲ ಮತದಾರರಿಗಾಗಿಯೇ ವಿಶೇಷವಾಗಿ ಸ್ವೀಪ್ ಕಾರ್ಯಕ್ರಮ ರೂಪಿಸಬೇಕು. ಏ. 16ರಿಂದ ಎಲ್ಲ ಮತಗಟ್ಟೆಗಳಲ್ಲಿಯೂ ವಿವಿ ಪ್ಯಾಟ್ ಮತ್ತು ಇಲೆಕ್ಟ್ರಾನಿಕ್ ಮತಯಂತ್ರದ ಬಗ್ಗೆ ಜಾಗೃತಿ ಮೂಡಿಸಲು ತರಬೇತಿ ಹಮ್ಮಿಕೊಳ್ಳಬೇಕು. ಈ ಸಂದರ್ಭದಲ್ಲಿ ಸಹಿ ಸಂಗ್ರಹ, ಮತದಾನದ ಪ್ರತಿಜ್ಞಾ ವಿಧಿ, ಪೋಸ್ಟರ್‌ಗಳ ಪ್ರದರ್ಶನ, ಯಾವುದಾದರೂ ಒಂದು ಸ್ಪರ್ಧೆ ಹಮ್ಮಿಕೊಳ್ಳಬೇಕು. ವಿವಿ ಪ್ಯಾಟ್ ತರಬೇತಿ ಕುರಿತು ಮುಂಚಿತವಾಗಿಯೇ ಗ್ರಾಮದಲ್ಲಿ ಡಂಗುರ ಹೊರಡಿಸಬೇಕು ಎಂದರು.
ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶೇ. 64ರಷ್ಟು ಮತದಾನವಾಗಿತ್ತು. ಈ ಬಾರಿ ಕನಿಷ್ಠ ಶೇ. 80ರಷ್ಟು ಮತದಾನವಾಗುವಂತೆ ಸ್ವೀಪ್ ಕಾರ್ಯಕ್ರಮದ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಬೇಕು. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹಾಡುಗಾರಿಕೆ ಸ್ಪರ್ಧೆಗಳನ್ನು ಏರ್ಪಡಿಸಬೇಕು. ಇದಕ್ಕಾಗಿ ಮೊದಲಿನ 25 ಪ್ರವೇಶಗಳನ್ನು ಪರಿಗಣಿಸಿ ಸ್ಪರ್ಧೆ ಏರ್ಪಡಿಸಬೇಕು. ಇವುಗಳಲ್ಲಿ ವಿಜೇತರಿಗೆ ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆ ಏರ್ಪಡಿಸಿ ಮಾದರಿ ಹಾಡುಗಾರರನ್ನು ಗುರುತಿಸಬೇಕು ಎಂದು ಸಲಹೆ ನೀಡಿದರು.
ಜಿಪಂ ಉಪ ಕಾರ್ಯದರ್ಶಿ ಮಹ್ಮದ್ ಯುಸೂಫ್, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಪಾಟೀಲ, ಎಲ್ಲ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.