ಕುಂಚಾವರಂದಲ್ಲಿ ಡಿಸಿ-ರಾಜವಾಳದಲ್ಲಿ ತಹಶೀಲ್ದಾರ್‌ ವಾಸ್ತವ್ಯ

ಅರ್ಜಿ ಸ್ವೀಕಾರ ಹಾಗೂ ಅರ್ಜಿದಾರರ ಸಮಕ್ಷಮದಲ್ಲೇ ಅರ್ಜಿಗಳ ಇತ್ಯರ್ಥಕ್ಕೆ ಕ್ರಮ

Team Udayavani, Feb 20, 2021, 4:51 PM IST

Kalburgi-DC

ಜೇವರ್ಗಿ: ತಾಲೂಕಿನ ನರಿಬೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರಾಜವಾಳ ಗ್ರಾಮದಲ್ಲಿ ಫೆ. 20ರಂದು ತಹಶೀಲ್ದಾರ್‌ ಸಿದರಾಯ ಭೋಸಗಿ ಸೇರಿದಂತೆ ಕಂದಾಯ ಇಲಾಖೆ ವಿವಿಧ ಅಧಿಕಾರಿಗಳು ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆಗೆ ತೆರಳಲಿರುವ ಅಧಿಕಾರಿಗಳು ಸಂಜೆ 5 ಗಂಟೆ ವರೆಗೆ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ನಿಗದಿತ ಸಮಯಕ್ಕೆ ಸರಿಯಾಗಿ ರಾಜವಾಳ ಗ್ರಾಮಕ್ಕೆ ತೆರಳಲಿರುವ ಅಧಿ ಕಾರಿಗಳು ಅಂದು ರಾತ್ರಿ ಅದೇ ಗ್ರಾಮದಲ್ಲಿ ವಾಸ್ತವ್ಯ ಹೂಡಿ ಗ್ರಾಮಸ್ಥರ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಪ್ರತಿ ತಿಂಗಳು ಮೂರನೇ ಶನಿವಾರದಂದು ಸಂಬಂಧಪಟ್ಟ ತಹಶೀಲ್ದಾರ್‌, ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರೊಂದಿಗೆ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ.

ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ ಗ್ರಾಮಗಳಲ್ಲಿನ ಎಲ್ಲ ಪಹಣಿಗಳಲ್ಲಿನ ಲೋಪದೋಷ, ಪಹಣಿ ಕಾಲಂ ಮೂರು ಮತ್ತು ಆಕಾರಬಂದ್‌ ತಾಳೆ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಲಿದ್ದಾರೆ. ಎಲ್ಲ ಪಹಣಿಯಲ್ಲಿಯೂ ಕಾಲಂ ಮೂರು ಮತ್ತು ಕಾಲಂ 9 ತಾಳೆ ಹೊಂದುವಂತೆ ಸೂಕ್ತ ಆದೇಶ ಹೊರಡಿಸುವುದು. ಗ್ರಾಮದ ಎಲ್ಲ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀ ಲನೆ ನಡೆಸಲಿದ್ದಾರೆ. ಗ್ರಾಮದಲ್ಲಿ ಸ್ಮಶಾನ ಲಭ್ಯತೆ ಬಗ್ಗೆ ಪರಿಶೀಲನೆ ನಡೆಸುವುದು. ಲಭ್ಯತೆ ಇಲ್ಲದಿದ್ದಲ್ಲಿ ಸರ್ಕಾರದ ಆದೇಶದಂತೆ ಕ್ರಮ ಕೈಗೊಳ್ಳಲಿದ್ದಾರೆ.

ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸುವುದು. ಆಧಾರ ಕಾರ್ಡ್‌ನ ಅನುಕೂಲತೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮತ್ತು ಜಾತಿ, ಆದಾಯ ಪ್ರಮಾಣ ಪತ್ರವನ್ನು ಆನ್‌ಲೈನ್‌ ಮೂಲಕ ಸಂಬಂಧಪಟ್ಟ ನಾಡಕಚೇರಿಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸುವುದು ಸೇರಿದಂತೆ ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಇದ್ದಲ್ಲಿ ಪರಿಹಾರ, ಪ್ರವಾಹದ ಹಾನಿ ತಡೆಗಟ್ಟಲು ಸಲಹೆ ನೀಡುವುದು ಸೇರಿದಂತೆ ಇತರೆ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿಕೊಡುವ ಉದ್ದೇಶದಿಂದ ರಾಜ್ಯ ಸರ್ಕಾರ ಗ್ರಾಮ ವಾಸ್ತವ್ಯ ಹಮ್ಮಿಕೊಂಡಿದೆ ಎಂದು ತಹಶೀಲ್ದಾರ್‌ ಸಿದರಾಯ ಭೋಸಗಿ ತಿಳಿಸಿದ್ದಾರೆ.

ನಂದಗೂರದಲ್ಲಿ ಸಹಾಯಕ ಆಯುಕ್ತರ ವಾಸ್ತವ್ಯ ಜಿಲ್ಲಾ ಧಿಕಾರಿ ನಡೆ ಹಳ್ಳಿ ಕಡೆ ಎನ್ನುವ ಕಂದಾಯ ಇಲಾಖೆ ಅಧಿಕಾರಿ ಗಳ ಗ್ರಾಮ ವಾಸ್ತವ್ಯ ಫೆ. 20ರಂದು ತಾಲೂಕಿನ ಗಡಿಭಾಗದ ನಂದಗೂರ ಗ್ರಾಮದಲ್ಲಿ ಚಾಲನೆ ದೊರೆಯಲಿದೆ. ಜಿಲ್ಲಾಧಿ ಕಾರಿಗಳು ಒಂದು ಗ್ರಾಮ ಆಯ್ಕೆ ಮಾಡಿದಂತೆ ತಾಲೂಕಿನ ಗಡಿಭಾಗದ ನಂದಗೂರ ಗ್ರಾಮದಲ್ಲಿ ಸಹಾಯಕ ಆಯುಕ್ತರು ಸೇರಿದಂತೆ ಇಲಾಖೆಯ ಇನ್ನಿತರ ಅಧಿಕಾರಿಗಳು ವಾಸ್ತವ್ಯ ಮಾಡಲಿದ್ದಾರೆ.

ಕಲಬುರಗಿ ಸಹಾಯಕ ಆಯುಕ್ತ ರಾಮಚಂದ್ರ ಗಡದೆ, ತಹಶೀಲ್ದಾರ್‌ ಯಲ್ಲಪ್ಪ ಸುಬೇದಾರ, ಉಪ ತಹಶೀಲ್ದಾರ್‌ ಬಸವರಾಜ ಮಡಿವಾಳ, ಕಂದಾಯ ನಿರೀಕ್ಷಕ ಅಲ್ಲಾವೋದ್ದೀನ್‌ ಹಾಗೂ ಅಧಿಕಾರಿಗಳು ಮತ್ತು ಕಚೇರಿಯ ಸಂಬಂಧಿತ ಎಲ್‌ಎನ್‌ಡಿಗಳು ವಾಸ್ತವ್ಯ ಮಾಡಲಿದ್ದಾ ಎಂದು ಹೇಳಿದರು. ಅರ್ಜಿ ಸ್ವೀಕಾರ ಹಾಗೂ ಅರ್ಜಿದಾರರ ಸಮಕ್ಷಮದಲ್ಲೇ ಅರ್ಜಿಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿರಸ್ತೇದಾರ ರಾಕೇಶ ಶೀಲವಂತ ತಿಳಿಸಿದ್ದಾರೆ.

ಕಮಲಾಪುರ: ಕಂದಾಯ ಇಲಾಖೆಯ ಬಹುತೇಕ ಸೇವೆಗಳು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸಲು “ನಮ್ಮ ನಡೆ ಹಳ್ಳಿಕಡೆ’ ಎನ್ನುವ ಯೋಜನೆ ಹಾಕಿಕೊಂಡಿದ್ದೇವೆ. ತಿಂಗಳ ಮೂರನೆ ಶನಿವಾರ ಗ್ರಾಮಕ್ಕೆ ಭೇಟಿ ನೀಡಲಾಗುವುದು. ಬೆಳಗ್ಗೆ 10ರಿಂದ ಸಂಜೆ 5ರ ವರಗೆ ವಾಸ್ತವ್ಯ ಹೂಡಿ ಸಮಸ್ಯೆ
ಪರಿಹರಿಸಲಾಗುವುದು. ಡೊಂಗರಗಾಂವಗೆ ಫೆ.20ರಂದು ಭೇಟಿ ನೀಡಲಾಗುವುದು ಎಂದು ತಹಶೀಲ್ದಾರ್‌ ಅಂಜುಮ್‌ ತಬಸುಮ್  ತಿಳಿಸಿದ್ದಾರೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.