ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ಪರಿಹಾರ ಕಲ್ಪಿಸಿ


Team Udayavani, Jul 29, 2018, 10:37 AM IST

gul-3.jpg

ಕಲಬುರಗಿ: ಪ್ರತಿ ಮೂರು ತಿಂಗಳಿಗೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ಕರೆದು ಅಲ್ಪಸಂಖ್ಯಾತ ಸಮುದಾಯಗಳು ಅನುಭವಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ ಎಂದು ಕರ್ನಾಟಕ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಸೀರ ಅಹ್ಮದ್‌ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.

ಶನಿವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಮತ್ತು ವಕ್ಫ್  ಬೋರ್ಡ್‌ಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಸ್ಲಿಂ, ಜೈನ್‌, ಕ್ರಿಶ್ಚಿಯನ್‌ ಸಮುದಾಯದವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸರಿಯಾಗಿ ದೊರೆಯುತ್ತಿಲ್ಲ
ಎಂಬುದು ಸಮುದಾಯದವರ ದೂರಾಗಿದೆ. ಜೈನ ಸಮುದಾಯದಲ್ಲಿ ಶ್ವೇತಾಂಬರ ಮತ್ತು ದಿಗಂಬರ ಜಾತಿಗಳಿವೆ. ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಗೊಂಡವರು ಇದ್ದಾರೆ. ಇವರೆಲ್ಲರೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಬಹಳಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ.

ಪ್ರಸ್ತುತವಿರುವ ನಿಯಮಾವಳಿಯಂತೆ ಈ ಎಲ್ಲ ಅಲ್ಪಸಂಖ್ಯಾತರಿಗೆ ನಿಗದಿತ ಅವಧಿಯೊಳಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ವಿತರಿಸಲು ತಹಶೀಲ್ದಾರ್‌ರಿಗೆ ಅಗತ್ಯ ಸೂಚನೆ ನೀಡಬೇಕು. ನಿರಾಕರಿಸಿದರೆ ಅದಕ್ಕೆ ಕಾರಣ ನೀಡಬೇಕು ಎಂದು ಹೇಳಿದರು.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಶೇ.50ರ ಆರ್ಥಿಕ ಸಹಾಯಧನದೊಂದಿಗೆ ಜಿಲ್ಲೆಯಲ್ಲಿ 20 ಶಾದಿ ಮಹಲ್‌ ನಿರ್ಮಾಣ ಕಾಮಗಾರಿ ಪ್ರಸ್ತುತ ಪ್ರಗತಿಯಲ್ಲಿವೆ. ಇದಕ್ಕಾಗಿ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ. ಮಹಲ್‌ ನಿರ್ಮಾಣ ಮತ್ತು ಅನುದಾನ ಸಮರ್ಪಕ ಬಳಕೆ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಅನುದಾನ ಪಡೆದ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಕ್ಷೇತ್ರದ ಶಾಸಕರ ಸಮಕ್ಷಮ ಸಭೆ ನಡೆಸಿ ಶಾದಿ ಮಹಲ್‌ ನಿರ್ಮಾಣದ ವಸ್ತುಸ್ಥಿತಿ ಪರಿಶೀಲನೆ ಮಾಡಬೇಕು.

ಪೂರ್ಣಗೊಂಡ ಶಾದಿ ಮಹಲ್‌ನಲ್ಲಿ ಕನಿಷ್ಠ ನಿರ್ವಹಣಾ ವೆಚ್ಚದ ದರವನ್ನೆ ಬಾಡಿಗೆ ದರವನ್ನಾಗಿ ನಿಗದಿಪಡಿಸಬೇಕು. ದರವನ್ನು ಶಾದಿ ಮಹಲ್‌ನಲ್ಲಿ ಸಾರ್ವಜನಿಕವಾಗಿ ಪ್ರಕಟಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಆರ್‌. ವೆಂಕಟೇಶ ಕುಮಾರ ಮಾತನಾಡಿ, ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ 1974ರ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ವಕ್ಫ್  ಆಸ್ತಿ ಸಾಕಷ್ಟು ಪ್ರಮಾಣದಲ್ಲಿದ್ದು, ಎಲ್ಲ ವಕ್ಫ್  ಆಸ್ತಿಗಳನ್ನು ಕಾಲಂ-11ರಲ್ಲಿ ನಮೂದಿಸಿಕೊಂಡು ಬೋರ್ಡ್‌ನ ಸುಪರ್ದಿಗೆ ಪಡೆಯಲಾಗಿದೆ. ಕೆಲವು ಕಡೆ ವಕ್ಫ್ಆ ಸ್ತಿಗಳನ್ನು ಕಬಳಿಸಿ ಉಳುಮೆ ಮಾಡುವ ಪ್ರಕರಣಗಳು ನಮ್ಮ ಮುಂದಿವೆ. ಇಂತಹ ಪ್ರಕರಣಗಳಲ್ಲಿ ಸಂಬಂಧಿಸಿದವರಿಗೆ ಈಗಾಗಲೆ ನೋಟಿಸ್‌ ನೀಡಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದರು.

ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಖನೀಜ್‌ ಫಾತಿಮಾ, ಕರ್ನಾಟಕ ಆಲ್ಪಸಂಖ್ಯಾತ ಆಯೋಗದ ಕಾರ್ಯದರ್ಶಿ ಅನೀಸ್‌ ಸಿರಾಜ್‌, ಸದಸ್ಯರಾದ ಡಾ| ಆರ್‌.ಅಬ್ದುಲ್‌ ಹಮೀದ್‌, ರಫೀ ಬಂಡಾರಿ, ಮಹಮೂದ ಪಟೇಲ್‌, ಆದಿಲ್‌ ಸುಲೇಮಾನ ಸೇಠ್…, ಕೆ. ಮಹೇಂದ್ರ ಜೈನ್‌, ಬಲಜೀತ್‌ ಸಿಂಗ್‌, ಡಾ| ಮೆಟಿಲ್ಡಾ ಡಿಸೋಜಾ ಮುಂತಾದವರಿದ್ದರು. ಇದಕ್ಕೂ ಮುನ್ನ ಆಯೋಗದ ಅಧ್ಯಕ್ಷರು ಹಾಗರಗಾದಲ್ಲಿ
ನಿರ್ಮಿಸಲಾಗುತ್ತಿರುವ ಶಾದಿ ಮಹಲ್‌ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.