ಹಿರಿಯರು-ಮಕ್ಕಳ ಕಾಳಜಿ ವಹಿಸಿ
Team Udayavani, Jul 11, 2020, 9:21 AM IST
ಕಲಬುರಗಿ: ಮಹಾನಗರ ಮತ್ತು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ದಿನದಿಂದ ದಿನಕ್ಕೆ ಇನ್ಫ್ಲುಂಯೆಂಜಾ ಲೈಕ್ ಇಲ್‌ನೆಸ್ (ಐಔಐ) ಮತ್ತು ತೀವ್ರ ಉಸಿರಾಟದ ತೊಂದರೆ ಪ್ರಕರಣಗಳು ಸೇರಿದಂತೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಶರತ್ ಬಿ. ಸಭೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುಂದೆ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಚಿರ್ಚಿಸಿದರು. ಜಿಲ್ಲೆಯಲ್ಲಿ ಇದು ವರೆಗೆ ಜು.9ರ ವರೆಗೆ 1,901 ಜನರಿಗೆ ಕೋವಿಡ್ ಸೋಂಕು ಕಂಡು ಬಂದಿದ್ದು, ಇದರಲ್ಲಿ 30 ಜನ ನಿಧನ ಹೊಂದಿದ್ದಾರೆ. ಕಳೆದ 15 ದಿನಗಳಲ್ಲಿ ಹೆಚ್ಚಿನ ಕೋವಿಡ್ ಪಾಸಿಟಿವ್ ಸಂಖ್ಯೆಗಳ ಜೊತೆಗೆ ಸಾವಿನ ಸಂಖ್ಯೆಯು ಹೆಚ್ಚುತ್ತಿದೆ. ಆದ್ದರಿಂದ ರೋಗಿಗಳಿಗೆ ಮುಂದಿನ ದಿನದಲ್ಲಿ ಹೆಚ್ಚಿನ ಗುಣಮಟ್ಟದ ವೈದ್ಯಕೀಯ ವ್ಯವಸ್ಥೆ, ಹಾಸಿಗೆ ಹೆಚ್ಚಳ ಸೇರಿದಂತೆ ಆಸ್ಪತ್ರೆಗಳ ಮೂಲ ಸೌಲಭ್ಯ ಹೆಚ್ಚಿಸುವ ಸಂಬಂಧ ಸುದೀರ್ಘವಾಗಿ ಸಮಾಲೋಚನೆ ನಡೆಸಿದರು.
ಐಎಲ್‌ಐ ಹಾಗೂ ಸಾರಿ ಸಂಖ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಗಟ್ಟಲು ಜಿಲ್ಲಾಡತವು ಎಲ್ಲ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಸಾರ್ವಜನಿಕರು ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಹಾಗೂ ಶುಚಿತ್ವ ಕಾಪಾಡುವುದೇ ಕೋವಿಡ್ ತಡೆಯಲು ಸಾಧ್ಯವಾಗಲಿದೆ. ಜಿಲ್ಲೆಯ ಜನತೆ ಇದನ್ನು ತಪ್ಪದೇ ಪಾಲಿಸಬೇಕೆಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು.
ಅನಗತ್ಯ ಓಡಾಟ ಹಾಗೂ ಗುಂಪಾಗಿ ಸೇರಬಾರದು. ಆಗಾಗ ಸಾಬೂನುನಿಂದ ಕೈತೊಳೆದುಕೊಳ್ಳಬೇಕು ಮತ್ತು ಮನೆಯ ಸುತ್ತಮುತ್ತ ಪರಿಸರ ಸ್ವತ್ಛವಾಗಿಟ್ಟುಕೊಳ್ಳಬೇಕು. ಮನೆಯಲ್ಲಿ ದೀರ್ಘ ಕಾಯಿಲೆಯಿಂದ ಬಳಲುತ್ತಿರುವವರು, ಹಿರಿಯ ನಾಗರಿಕರು ಹಾಗೂ ಮಕ್ಕಳು ಇದ್ದಲ್ಲಿ ಅವರ ಆರೋಗ್ಯದ ಬಗ್ಗೆ ಕುಟುಂಬಸ್ಥರು ವಿಶೇಷ ಕಾಳಜಿ ವಹಿಸಬೇಕು. ಹೊರಗಡೆಯಿಂದ ಮನೆಗೆ ಹೋದ ನಂತರ ನೇರವಾಗಿ ರೋಗ ಪೀಡಿತರನ್ನು ಭೇಟಿಯಾಗಬಾರದು ಎಂದು ಸಲಹೆ ನೀಡದರು.
ಕ್ವಾರಂಟೈನ್ ಉಲ್ಲಂಘನೆ ಸಲ್ಲ: ಅನ್ಯ ರಾಜ್ಯದಿಂದ ಬಂದವರು ಅಥವಾ ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಒಳಗಾದವರಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್ ಕಡ್ಡಾಯವಾಗಿದ್ದು, ಯಾರಾದರೂ ಇದನ್ನು ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ ನೀಡಿದರು.
ಎಸ್‌ಪಿ ಯಡಾ ಮಾರ್ಟೀನ್ ಮಾರ್ಬನ್ಯಾಂಗ್, ಡಿಸಿಪಿ ಕಿಶೋರ ಬಾಬು, ಜಿಪಂ ಸಿಇಒ ಡಾ| ಪಿ. ರಾಜಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ನಳಿನ ಅತುಲ್, ಮಹಾನಗರ ಪಾಲಿಕೆ ಆಯುಕ್ತ ರಾಹುಲ್‌ಪಾಂಡ್ವೆ, ಡಿಎಚ್‌ಒ ಡಾ| ಎಂ.ಎ. ಜಬ್ಟಾರ್, ಅಪರ ಜಿಲ್ಲಾಧಿಕಾರಿ ಡಾ| ಶಂಕರ ವಣಿಕ್ಯಾಳ್, ಸಹಾಯಕ ಆಯುಕ್ತರಾದ ರಾಮಚಂದ್ರ ಗಡಾದೆ, ರಮೇಶ ಕೋಲಾರ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.