ಮದರಸಗಳಲ್ಲಿ ತಾಲಿಬಾನಿಗಳು ಸೃಷ್ಠಿಯಾಗುತ್ತಾರೆ, ಅಫ್ಘಾನ್ ಸ್ಥಿತಿ ನಮಗೂ ಬರಬಹುದು: ಸಿ.ಟಿ.ರವಿ
Team Udayavani, Aug 31, 2021, 1:42 PM IST
ಕಲಬುರಗಿ: ಓಲೈಕೆ ರಾಜಕಾರಣದಿಂದ ಇನ್ನಷ್ಟು ಪಾಕಿಸ್ತಾನಗಳು ಸೃಷ್ಟಿಯಾಗುತ್ತವೆ. ಮದರಸಗಳಲ್ಲಿ ತಾಲಿಬಾನಿಗಳು ಸೃಷ್ಠಿಯಾಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳು ಬಹುಸಂಖ್ಯಾತರು ಇರುವವರಗೆ ಮಾತ್ರ ಅಂಬೇಡ್ಕರ್ ಸಂವಿಧಾನ ಉಳಿಯುತ್ತದೆ. ಹಿಂದೂಗಳು ಅಲ್ಪಸಂಖ್ಯಾತರಾದರೆ ಗಾಂಧಾರ ಕಾಲದ ಸ್ಥಿತಿ ಬರುತ್ತದೆ. ಅಂಬೇಡ್ಕರ್ ಸಂವಿಧಾನ ಉಳಿಸಬೇಕೆನ್ನುವರು ಈ ಸತ್ಯವನ್ನು ಮರೆಯಬಾರದು ಎಂದರು.
ನಮ್ಮ ಮೂಲ ನಂಬಿಕೆಯಲ್ಲಿಯೇ ಸಮಭಾವವಿದೆ. ಸಮಭಾವ ಜನ ಬಹುಸಂಖ್ಯಾತರು ಇದ್ದಾಗ ಸಮಾನತೆ, ಮಹಿಳೆ ಸ್ವತಂತ್ರ ಇರುತ್ತದೆ. ಇಲ್ಲದಿದ್ದರೆ ಅಫ್ಘಾನಿಸ್ತಾನದ ಸ್ಥಿತಿ ನಮಗೂ ಬರುತ್ತದೆ ಎಂದರು.
ದೇಶ ಮೊದಲು ಎನ್ನುವ ತತ್ವದ ಮೇಲೆ ರಾಜಕಾರಣ ಮಾಡಿ. ಆದರೆ ಕಾಂಗ್ರೆಸ್ ದೇಶ ಮೊದಲು ಎಂಬ ತತ್ವ ಮರೆತಿದೆ. ದೇಶ ಭಕ್ತ ಸಂಘಟನೆ ಜೊತೆ ತಾಲಿಬಾನಿಗಳನ್ನು ಹೋಲಿಕೆ ಮಾಡುತ್ತಿದ್ದಾರ ಎಂದು ಸಿಟಿ ರವಿ ಕಿಡಿಕಾರಿದರು.
ಇದನ್ನೂ ಓದಿ:ಜಸ್ಟೀಸ್ ನಾಗರತ್ನ ಬಿ.ವಿ.ಸೇರಿ 9 ಮಂದಿ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾಗಿ ಪ್ರಮಾಣ
ಸಿದ್ದರಾಮಯ್ಯ ವಿಶ್ರಾಂತಿಗೆ ಹೋದಾಗ ಕಾಂಗ್ರೆಸ್ ಗೆಲ್ಲಬಾರದು ಸಂದೇಶ ನೀಡುತ್ತಾರೆ. ಕೆಲವೊಮ್ಮೆ ನೇರವಾಗಿ, ಕೆಲವು ಸಲ ಹಿಂಬಾಲಕರ ಮೂಲಕ ಸಂದೇಶ ನೀಡುತ್ತಾರೆ. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಯಾವ ಚುನಾವಣೆ ಗೆಲ್ಲಬಾರದು ಎಂಬ ಸಂದೇಶವಿದು. ಸಿದ್ದರಾಮಯ್ಯರ ಅಪೇಕ್ಷೆಯನ್ನು ಈ ಬಾರಿ ಜನ ಇಡೇರಿಸಲಿದ್ದಾರೆ ಎಂದರು.
ಇಪ್ಪತ್ತು ವರ್ಷದಿಂದ ಕಾಂಗ್ರೆಸ್ ಹೊಸ ನಾಯಕರ ಹುಡುಕಾಟದಲ್ಲಿದೆ. ರಾಜ್ಯದ ಅಧ್ಯಕ್ಷರಿಗೆ ತನ್ನ ತಂಡವನ್ನೇ ಕಟ್ಟಿಕೊಳ್ಳಲಾಗಿಲ್ಲ. ಆದರೂ ಕಾಂಗ್ರೆಸ್ ನವರು ಹಗಲುಗನಸು ಕಾಣುತ್ತಿದ್ದಾರೆ. ಇಲ್ಲದೇ ಇರುವ ಸಿಎಂ ಹುದ್ದೆಗೆ ನಾಲ್ಕೈದು ಜನ ಹಗಲು ಕನಸು ಕಾಣುತ್ತಿದ್ದಾರೆ ಎಂದು ಸಿ.ಟಿ.ರವಿ ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.