ತನಾರತಿ ಉತ್ಸವ
Team Udayavani, Oct 1, 2018, 10:34 AM IST
ಸೇಡಂ: ಮನೆ, ರಸ್ತೆ, ಅಂಗಡಿ ಮುಂಗಟ್ಟುಗಳಲ್ಲಿ ಭವ್ಯ ರಂಗೋಲಿ. ಕುಂಭ-ಕಳಸ ಹೊತ್ತು ಹೆಜ್ಜೆ ಹಾಕಿದ ಹೆಂಗಳೆಯರು. ಎಲ್ಲೆಡೆಯೂ ಭಕ್ತಿಯ ಪರಾಕಾಷ್ಠೆ. ಇದು ರವಿವಾರ ಪಟ್ಟಣದಲ್ಲಿ ಕಂಡು ಬಂದ ದೃಶ್ಯ. ಇತಿಹಾಸದ ಸತ್ಪುರುಷ, ಜೀವಂತ ಸಮಾಧಿಸ್ಥ ಸಪ್ಪಣಾರ್ಯ ಶಿವಯೋಗಿಗಳ ಶತಮಾನೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಶ್ರೀ ಕೊತ್ತಲ ಬಸವೇಶ್ವರ ದೇವಾಲಯದ ಸದಾಶಿವ ಸ್ವಾಮೀಜಿ ನೇತೃತ್ವದಲ್ಲಿ ನಡೆದ ತನಾರತಿ ಉತ್ಸವ ಭವ್ಯತೆ ಮತ್ತು ದಿವ್ಯತೆಯ ಪ್ರಮುಖ ಆಕರ್ಷಣೆಯಾಗಿತ್ತು.
ಶ್ರೀ ವೀರಭದ್ರೇಶ್ವರ ದೇವಾಲಯದಿಂದ ತನಾರತಿ ಹೊತ್ತ ಸದಾಶಿವ ಸ್ವಾಮೀಜಿ ಜೊತೆ ಸಾವಿರಾರು ಭಕ್ತರು ಹೆಜ್ಜೆ ಹಾಕಿದರು. ಪೊಲೀಸ್ ಪಾಟೀಲಗಲ್ಲಿ, ಸಣ್ಣ ಅಗಸಿ, ತೆಗ್ಗಿನಗೇರಿ, ದೊಡ್ಡ ಅಗಸಿ, ಪುರಾನಾ ಬಜಾರ್, ಹಲಕರ್ಟಿಗಲ್ಲಿ ಒಳಗೊಂಡಂತೆ ಅನೇಕ ಬಡಾವಣೆಗಳಲ್ಲಿ ತನಾರತಿ ಉತ್ಸವ ಸಂಚರಿಸಿತು.
ಉತ್ಸವಕ್ಕೆ ಸ್ವಾಗತ ಕೋರಲೆಂದೇ ನೂರಾರು ಮನೆಗಳ ಎದುರು ರಂಗು ರಂಗಿನ ರಂಗೋಲಿ ಕಂಗೊಳಿಸುತ್ತಿದ್ದವು. ಪರಾರಿ, ಹಸಿರು ತೋರಣ ಗಮನಸೆಳೆಯುತ್ತಿದ್ದವು. ಎಲ್ಲೆಡೆಯೂ ಜಯಘೋಷಗಳು ಮೊಳಗಿದವು. ಕುಂಭ-ಕಳಸ ಹೊತ್ತು ನೂರಾರು ಮಹಿಳೆಯರು ಭಕ್ತಿಯ ಪರಾಕಾಷ್ಠೆ ಮೆರೆದರು. ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಸೇರಿದಂತೆ ಅನೇಕರು ತನಾರತಿ ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Commission: 60 ಪರ್ಸೆಂಟ್ ಕಮಿಷನ್: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.