ರಾಜ್ಯದಲ್ಲಿ 5 ಲಕ್ಷ ಮನೆ ನಿರ್ಮಾಣದ ಗುರಿ: ವಿ.ಸೋಮಣ್ಣ
Team Udayavani, Feb 26, 2022, 5:05 PM IST
ಕಲಬುರಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ನಮ್ಮ ಸರ್ಕಾರದ ಅವಧಿಯಲ್ಲಿಯೇ 5 ಲಕ್ಷ ಮನೆ ನಿರ್ಮಿಸಿ ಬಡವರಿಗೆ ಹಂಚುವ ಗುರಿ ಹೊಂದಲಾಗಿದೆ ಎಂದು ರಾಜ್ಯದ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ಅವರು ತಿಳಿಸಿದರು.
ಇದಕ್ಕಾಗಿ 6600 ಕೋಟಿ ರೂ. ಒದಗಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ ಎಂದರು.
ಶನಿವಾರ ಸೇಡಂ ಪಟ್ಟಣದಲ್ಲಿ ಸೇಡಂ-ಚಿಂಚೋಳಿ ರಸ್ತೆಯಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ-ಸರ್ವರಿಗೂ ಸೂರು ಯೋಜನೆಯಡಿ 12 ಎಕರೆ ಪ್ರದೇಶದಲ್ಲಿ 48 ಕೋಟಿ ರೂ. ವೆಚ್ಚದೊಂದಿಗೆ ಜಿ+2 ಮಾದರಿಯ 750 ಮನೆಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯ ಆವರಣದಲ್ಲಿ ಆಯೋಜಿಸಿದ ಸಾರ್ವಜನಿಕ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ತಾಂತ್ರಿಕ ಕಾರಣದಿಂದ ಕಳೆದ ಹಲವಾರು ವರ್ಷಗಳಿಂದ ರಾಜ್ಯಕ್ಕೆ 18 ಲಕ್ಷ ಮನೆ, 6 ಲಕ್ಷ ನಿವೇಶನ ಮಂಜೂರಾತಿಗೆ ಬಾಕಿ ಇದ್ದವು. ನಮ್ಮ ಸರ್ಕಾರ ತಾಂತ್ರಿಕ ದೋಷವನ್ನು ಸರಿದೂಗಿಸಿದ ಪರಿಣಾಮ ಇಷ್ಟು ಸಂಖ್ಯೆಯ ಮನೆ, ನಿವೇಶನಗಳನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಂಜೂರು ಮಾಡಿದೆ. ಇದರಿಂದ ಸೂರಿಲ್ಲದವರಿಗೆ ಸೂರು ಕಲ್ಪಿಸಬೇಕೆಂಬ ರಾಜ್ಯ ಸರ್ಕಾರದ ಆಶಯಕ್ಕೆ ಹೆಚ್ಚಿನ ಶಕ್ತಿ ಬಂದಿದೆ ಎಂದರು.
ಸೇಡಂ ಪಟ್ಟಣದ ಚಿಂಚೋಳಿ ರಸ್ತೆಯಲ್ಲಿನ 750 ಮನೆಗಳ ನಿರ್ಮಾಣ ಕಾರ್ಯ ಬರುವ ಡಿಸೆಂಬರ್ ಒಳಗೆ ಮುಗಿಸಬೇಕು. ಮನೆಗಳು ಗುಣಮಟ್ಟದಿಂದ ಇರಬೇಕು. ರಸ್ತೆ, ಚರಂಡಿ, ವಿದ್ಯುತ್ ಸೇರಿದಂತೆ ಇಲ್ಲಿ ಸಮುದಾಯ ಭವನ, ಅಂಗನವಾಡಿ ಕಟ್ಟಡ ಹಾಗೂ ಅರೋಗ್ಯ ಕೇಂದ್ರ ನಿರ್ಮಿಸುವ ಮೂಲಕ ಎಲ್ಲಾ ರೀತಿಯ ಮೂಲಸೌಕರ್ಯ ಕಲ್ಪಿಸಬೇಕು ಎಂದು ಸ್ಥಳದಲ್ಲಿದ್ದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಆಯುಕ್ತ ಬಿ.ವೆಂಕಟೇಶ, ಅವರಿಗೆ ನಿರ್ದೇಶನ ನೀಡಿದರು.
ಶಾಸಕ ರಾಜಕುಮಾರ ಪಾಟೀಲ ಕೋರಿಕೆಯಂತೆ ಪಟ್ಟಣದಲ್ಲಿ ಪುರಸಭೆಯು 25 ಎಕರೆ ಜಮೀನು ನೀಡಿದರೆ ಮತ್ತೆ 2000 ಮನೆ ನಿರ್ಮಿಸಿ ಕೊಡಲಾಗುವುದು ಎಂದು ಸಚಿವ ವಿ.ಸೋಮಣ್ಣ ಅವರು ಭರವಸೆ ನೀಡಿದರು.
ಗ್ರಾಮೀಣ ಭಾಗದಲ್ಲೂ ಮನೆ ನಿರ್ಮಿಸಿ ಬಡವರಿಗೆ ನೀಡಲು ನಿರ್ಧರಿಸಿದ್ದು, ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಪಟ್ಟಿ ಕಳುಹಿಸಲು ಶೀಘ್ರವೆ ಜಿಲ್ಲಾ ಪಂಚಾಯತ್ ಸಿ.ಇ.ಓಗಳೊಂದಿಗೆ ಸಭೆ ಕರೆದು ಚರ್ಚಿಸುವೆ ಎಂದರು.
ರಾಜಕಾರಣ ಚುನಾವಣೆ ನಡೆಯುವ ಒಂದು ತಿಂಗಳಿಗೆ ಸೀಮಿತವಾಗಿರಬೇಕು. ನಿಂದಕರ ಬಗ್ಗೆ ತಲೆಕೆಡಿಸಿಕೊಳ್ಳದೆ ದೂರದೃಷ್ಠಿ ಚಿಂತನೆಯೊಂದಿಗೆ ಕ್ಷೇತ್ರದ ಜನತೆಗೆ ಜನಪರ ಕಾರ್ಯಕ್ರಮ ನೀಡುವತ್ತ ಗಮನ ಹರಿಸಿ. ಜನರ ಆಶೀರ್ವಾದ ನಿಮ್ಮ ಮೇಲಿರಲಿದೆ ಎಂದು ಶಾಸಕ ರಾಜಕುಮಾರ ಪಾಟೀಲ ಅವರಿಗೆ ಸಲಹೆ ನೀಡಿದರು.
ಇದಕ್ಕೂ ಮುನ್ನ ಶಾಸಕ ಡಾ.ರಾಜಕುಮಾರ ಪಾಟೀಲ ತೇಲ್ಕೂರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸೇಡಂ ಕ್ಷೇತ್ರಕ್ಕೆ ಈಗಾಗಲೆ 1000 ಮನೆ ಮಂಜೂರು ಮಾಡಿದಕ್ಕಾಗಿ ವಸತಿ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಅವರು ನನ್ನ ಕ್ಷೇತ್ರದಲ್ಲಿ ಸೂರಿಲ್ಲದವರು ಯಾರು ಇರಬಾರದೆಂಬ ಗುರಿ ಹೊಂದಿದ್ದು, ಪುರಸಭೆಯಿಂದ ಇನ್ನೂ 25 ಎಕರೆ ಜಮೀನು ಕೊಡತ್ತೀವಿ, ಇನ್ನೂ 2000 ಮನೆ ನಿರ್ಮಿಸಿಕೊಡಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.
ಸೇಡಂ ಕ್ಷೇತ್ರದಲ್ಲಿ 75 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವ 639 ಕೋಟಿ ರೂ. ಮೊತ್ತದ ಕಾಗಿಣಾ ಏತ ನೀರಾವರಿ ಯೋಜನೆಗೆ ಈಗಾಗಲೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಂದಿನ ತಿಂಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೇಡಂ ಪಟ್ಟಣಕ್ಕೆ ಬರಲಿದ್ದು, 150 ಕೋಟಿ ರೂ. ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದರು.
ಸೇಡಂ ಪಟ್ಟಣದ ಅಭಿವೃದ್ಧಿಗೆ 119.64 ಕೋಟಿ ರೂ. ಖರ್ಚು ಮಾಡಲಾಗಿದೆ. ಕಳೆದ 4 ವರ್ಷದಲ್ಲಿ 500 ಕೋಟಿ ರು. ಅನುದಾನ ಕ್ಷೇತ್ರಕ್ಕೆ ತರಲಾಗಿದೆ. ಕ್ಷೇತ್ರದ 100 ದೇವಸ್ಥಾನಗಳ ಅಭಿವೃದ್ಧಿಗೆ 12 ಕೋಟಿ ರೂ. ವ್ಯಯ ಮಾಡಲಾಗಿದ್ದು, ಮುಂದಿನ ವರ್ಷ ಇನ್ನೂ 6 ಕೋಟಿ ರೂ. ದೇವಸ್ಥಾನಕ್ಕೆ ನೀಡಲಾಗುವುದು. ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ 120 ಕೋಟಿ ರು. ಖರ್ಚು ಮಾಡಿ 53 ಗ್ರಾಮಗಳಿಗೆ ಕುಡಿಯುವ ನೀರಿನ ನಲ್ಲಿ ಸಂಪರ್ಕ ಒದಗಿಸಲಾಗಿದೆ. 4ನೇ ಹಂತದಲ್ಲಿ ಇನ್ನೂ 100 ಹಳ್ಳಿಗಳಿಗೆ 150 ಕೋಟಿ ರೂ. ಖರ್ಚು ಮಾಡಿ ಮನೆ ಮನೆಗೆ ಕುಡಿಯುವ ನೀರು ಒದಗಿಸಲು ಡಿ.ಪಿ.ಆರ್ ಸಿದ್ಧಪಡಿಸಿದೆ ಎಂದರು.
ಸಂಸದ ಡಾ.ಉಮೇಶ ಜಾಧವ ಅವರು ಮಾತನಾಡಿ ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಬಡವರಿಗೆ ಮನೆ ಒದಗಿಸುವ ಮಹತ್ತರ ಕಾರ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡುತ್ತಿದ್ದು, ಇದಕ್ಕಾಗಿ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದಾರೆ. ಹರ್ ಘರ್ ಜಲ್ ಯೋಜನೆಯಡಿ ಗ್ರಾಮೀಣ ಭಾಗದ ಪ್ರತಿ ಮನೆಗೆ ನೀರಿನ ನಲ್ಲಿ ಸಂಪರ್ಕ ಒದಗಿಸಲಾಗುತ್ತಿದೆ ಎಂದರು.
ಸೇಡಂನ ಶ್ರೀ ಕೊತ್ತಲ ಬಸವೇಶ್ವರ ಸಂಸ್ಥಾನ ಮಠದ ಪೂಜ್ಯ ಶ್ರೀ ಸದಾಶಿವ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಶಾಸಕ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ ಶಾಸಕ ಬಿ.ಜಿ.ಪಾಟೀಲ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸದಸ್ಯ ನಾಗರಾಜ ಎಂ.ಬಿರಾದರ, ಸೇಡಂ ಪುರಸಭೆ ಅಧ್ಯಕ್ಷೆ ಚೆನ್ನಮ್ಮ ಬಿ. ಪಾಟೀಲ, ಉಪಾಧ್ಯಕ್ಷ ಶಿವಾನಂದ ಸ್ವಾಮಿ, ಕೊಳಗೇರಿ ಅಭಿವೃದ್ಧಿ ಮಂಡಳಿಯ
ಆಯುಕ್ತ ಬಿ.ವೆಂಕಟೇಶ, ತಾಂತ್ರಿಕ ನಿರ್ದೇಶಕ ಬಿ.ಎಂ.ಕಪನಿಗೌಡ, ತಹಶೀಲ್ದಾರ ಬಸವರಾಜ ಬೆಣ್ಣೆಶಿರೂರ, ಮುಖ್ಯಾಧಿಕಾರಿ ಆರ್.ಪ್ರಹ್ಲಾದ್, ಎಇಇ ಮಲ್ಲಿಕಾರ್ಜುನ, ಇಂಜಿನೀಯರ್ ಲಕ್ಷ್ಮೀಕಾಂತ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.