ದಿಗ್ಗಾಂವ ಮಠದ ಬಾವಿಯಲ್ಲಿ ಬಿದ್ದು ಶಿಕ್ಷಕಿ ಸಾವು
Team Udayavani, Mar 27, 2022, 11:29 AM IST
ಚಿತ್ತಾಪುರ: ತಾಲೂಕಿನ ದಿಗ್ಗಾಂವ ಗ್ರಾಮದ ಪಂಚಗೃಹ ಹಿರೇಮಠದ ಆವರಣದಲ್ಲಿನ ಬಾವಿಯಲ್ಲಿ ಬಿದ್ದು ಅತಿಥಿ ಶಿಕ್ಷಕಿಯೊಬ್ಬರು ಮೃತಪಟ್ಟಿದ್ದಾರೆ.
ಭೂಮಿಕಾ ಶರಣಪ್ಪ ಊಡಗಿ (26) ಮೃತಪಟ್ಟ ಮಹಿಳೆ. ದಿಗ್ಗಾಂವ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿದ್ದ ಭೂಮಿಕಾ ಅವರು, ಹಿರೇಮಠದ ಪೀಠಾಧಿಪತಿ ಸಿದ್ಧವೀರ ಶಿವಾಚಾರ್ಯರ ಆಪ್ತಸಹಾಯಕರಾಗಿ ಕೆಲಸ ಮಾಡುತ್ತಿದ್ದ ಶರಣಪ್ಪ ಊಡಗಿ ಎನ್ನುವರ ಪತ್ನಿ ಎಂದು ತಿಳಿಸಲಾಗಿದೆ.
ಶುಕ್ರವಾರ ಮಧ್ಯಾಹ್ನ ಮನೆಯಿಂದ ಹೊರಹೋದ ಭೂಮಿಕಾ ವಾಪಸ್ ಬರಲಿಲ್ಲ. ಅತ್ತ ಶಾಲೆಗೂ ಹೋಗಿರಲಿಲ್ಲ. ಈ ಬಗ್ಗೆ ಮನೆಯ ಅಕ್ಕಪಕ್ಕದವರನ್ನು ವಿಚಾರಿಸಿದಾಗ, ಮಠದ ಹತ್ತಿರ ಹೋಗಿರುವ ವಿಷಯ ತಿಳಿಯಿತು. ಮಠದ ಆವರಣದಲ್ಲಿರುವ ಬಾವಿ ಬಳಿ ಅವರ ಚಪ್ಪಲಿಗಳು ಪತ್ತೆಯಾದವು. ಅಲ್ಲದೇ ಬಾವಿಗೆ ಅಳವಡಿಸಿದ್ದ ತಂತಿ ಜಾಲಿ ಕೂಡ ತೆರೆದುಕೊಂಡಿತ್ತು. ಇದರಿಂದ ಅನುಮಾನಗೊಂಡು ಹುಡುಕಿದಾಗ ಭೂಮಿಕಾ ಅವರ ಶವ ದೊರೆಯಿತು ಎಂದು ಚಿತ್ತಾಪುರ ಪೊಲೀಸರು ಮಾಹಿತಿ ನೀಡಿದ್ದಾರೆ.
ಭೂಮಿಕಾ ಅವರ ತವರು ಮನೆಯವರು ಬರುವವರೆಗೂ ಕಾಯ್ದ ಪೊಲೀಸರು, ನಂತರ ಮರಣೋತ್ತರ ಪರೀಕ್ಷೆಗೆ ದಿಗ್ಗಾಂವನ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ತದನಂತರ ಬೀದರ್ ಜಿಲ್ಲೆಯ ಹಾರಕೂಡದಿಂದ ದಿಗ್ಗಾಂವ ಗ್ರಾಮಕ್ಕೆ ಬಂದ ಪಾಲಕರು ಮಗಳ ಶವ ಪಡೆದರು.
ಭೂಮಿಕಾ ಅವರಿಗೆ ಮದುವೆಯಾಗಿ ಆರು ವರ್ಷವಾಗಿತ್ತು. ಆದರೆ ಮಕ್ಕಳು ಆಗಿರಲಿಲ್ಲ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್’ ವ್ಯವಸ್ಥೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.