ತಂತ್ರಜ್ಞಾನ ಬಳಕೆ ಶಿಕ್ಷಣದ ಅವಿಭಾಜ್ಯಅಂಗ


Team Udayavani, Jan 23, 2018, 11:44 AM IST

Gul-6.jpg

ಕಲಬುರಗಿ: ಉನ್ನತ ಶಿಕ್ಷಣದಲ್ಲಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಬಳಕೆ ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ| ಚಂದ್ರಕಾಂತ ಯಾತನೂರ ಹೇಳಿದರು.

ಆಳಂದ ತಾಲೂಕು ಕಡಗಂಚಿ ಬಳಿ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡ ಎರಡು ದಿನಗಳ ಮೂಕ್‌ (ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ) ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು  ಮಾತನಾಡಿದರು. ನಾವು ಸಂಪ್ರಾದಾಯಿಕ ಶಿಕ್ಷಣ ಪದ್ಧತಿಯಿಂದ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ ಆಧಾರಿತ ಆಧುನಿಕ ಶಿಕ್ಷಣ ಪದ್ದತಿ ಕಡೆಗೆ ಹೋಗುವ ಅನಿವಾರ್ಯತೆ ಬಂದಿದೆ ಎಂದು ಹೇಳಿದರು.

ಗುಣಮಟ್ಟದ ಶಿಕ್ಷಕರ ಕೊರತೆ ನಮ್ಮನ್ನು ಕಾಡುತ್ತಿರುವ ಇಂದಿನ ಯುಗದಲ್ಲಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ ಆಧಾರಿತ ಬೃಹತ್‌ ತೆರೆದ ಅಂತರ್ಜಾಲ ಪಠ್ಯದ ಬಳಕೆಯಿಂದ ಸಾಂಪ್ರದಾಯಿಕ ಶಿಕ್ಷಣ ಪದ್ಧತಿಗೆ ಪೂರಕವಾದ ಶಿಕ್ಷಣ ನೀಡಬಹುದಾಗಿದೆ. ಈ ಹಿಂದೆ ನಾವು ಅಳವಡಿಸಿಕೊಂಡಂತಹ ದೂರ ಶಿಕ್ಷಣ ಪದ್ಧತಿಗಿಂತ ಇದು ಬಹಳ ಪ್ರಯೋಜನಕಾರಿಯಾಗಿದೆ ಎಂದು ಹೇಳಿದರು.

ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ ಕ್ಷೇತ್ರದಲ್ಲಾದ ಅಭೂತಪೂರ್ವ ಅಭಿವೃದ್ಧಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಬಳಕೆ ಕ್ರಾಂತಿ ತಂದಿದೆ. ಸಂಶೋದನೆ ಪ್ರಕಾರ ಶಿಕ್ಷಣದಲ್ಲಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ ಬಳಕೆಯಿಂದ ವಿದ್ಯಾರ್ಥಿಗಳ ಕಲಿಕೆ ಗುಣಮಟ್ಟದಲ್ಲಿ ಸಾಕಷ್ಟು ಉನ್ನತಿಯಾಗಿದೆ. ವಿಶ್ವದ ಅನೇಕ ವಿಶ್ವವಿದ್ಯಾಲಯಗಳು ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ ಆಧಾರಿತ ಬೃಹತ್‌ ತೆರೆದ ಅಂತರಜಾಲ ಪಠ್ಯ ಆಧಾರಿತ ಬೋಧನಾ ಪದ್ಧತಿ ಅಳವಡಿಸಿಕೊಂಡಿವೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅಂತರ್ಜಾಲದ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಸಹಕಾರಿಯಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿದ್ದ ನವದೆಹಲಿಯ ರಾಷ್ಟ್ರೀಯ ಶಿಕ್ಷಣ ಯೋಜನೆ ಮತ್ತು ಆಡಳಿತ ವಿಶ್ವವಿದ್ಯಾಲಯದ ಪ್ರೊ| ಕೆ. ಶ್ರೀನಿವಾಸ ಮಾತನಾಡಿ, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಬಳಕೆಯು ಬೋಧನೆ ಮತ್ತು ಕಲಿಕಾ ಗುಣಮಟ್ಟ ಹೆಚ್ಚಿಸುತ್ತದೆ. ಆದಾಗ್ಯೂ ಗುಣಮಟ್ಟದ ಶಿಕ್ಷಣ ಒದಗಿಸಲು ಅಗತ್ಯವಾದ ತಂತ್ರಜ್ಞಾನ ಬಳಕೆ ಬಗ್ಗೆ ಶಿಕ್ಷಕರಿಗೆ ಸಾಕಷ್ಟು ಕೌಶಲ್ಯಗಳಿಲ್ಲ. ಎರಡು ದಿನದ ಕಾರ್ಯಗಾರ ಫಲಿತಾಂಶ ಆಧಾರಿತವಾಗಿದೆ. ವಿಶ್ವವಿದ್ಯಾಲಯದ ಶಿಕ್ಷಕರು ಸ್ವಯಂ ವೇದಿಕೆಯಲ್ಲಿ ಮೂಲ ಆಧಾರಿತ ಬೋಧನೆ, ಕಲಿಕೆ ಮತ್ತು ಮೌಲ್ಯಮಾಪನ ಪದ್ಧತಿ ಅಳವಡಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದರು.

ವಿವಿಧ ನಿಕಾಯಗಳ ಡೀನ್‌ರು, ವಿಭಾಗಗಳ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು ಇದ್ದರು. ಕಾರ್ಯಕ್ರಮದ ಸಂಯೋಜಕ
ಡಾ| ಜಯವೆಲು ಎಸ್‌. ಸ್ವಾಗತಿಸಿದರು. ಡಾ| ವಿಜೇಂದ್ರ ಪಾಂಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!

1-qweewqe

TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ

1-ewewqe

Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

POlice

Kasaragod: ರೈಲುಗಾಡಿಗೆ ಕಲ್ಲು ತೂರಾಟ; ಪ್ರಯಾಣಿಕನಿಗೆ ಗಾಯ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

de

Malpe ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.