102 ಅಡಿ ಎತ್ತರದ ಧ್ವಜಸ್ತಂಭ ಉದ್ಘಾಟನೆ
Team Udayavani, Jan 27, 2018, 11:07 AM IST
ಜೇವರ್ಗಿ: ಕಳೆದ ನಾಲ್ಕು ವರ್ಷದಲ್ಲಿ ತಾಲೂಕಿನ ಅಭಿವೃದ್ಧಿಗೆ 1500 ಕೋಟಿ ರೂ.ಗಳ ಅನುದಾನ ತಂದು ಅಭಿವೃದ್ಧಿ ಪಡಿಸಲಾಗಿದೆ ಎಂದು ಶಾಸಕ ಡಾ| ಅಜಯಸಿಂಗ್ ಹೇಳಿದರು.
ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ತಾಲೂಕಾಡಳಿತ ವತಿಯಿಂದ ಆಯೋಜಿಸಲಾಗಿದ್ದ 69 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬೆಂಗಳೂರು, ಮಂಗಳೂರು ಹೊರತುಪಡಿಸಿ 102 ಅಡಿ ಎತ್ತರದ ಧ್ವಜಸ್ತಂಭವನ್ನು ಪಟ್ಟಣದಲ್ಲಿ ನಿರ್ಮಿಸಲಾಗಿದೆ ಎಂದರು.
ಗಣರಾಜ್ಯೋತ್ಸವದ ಶುಭ ದಿನದಂದು ಸಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವದು ಅವಶ್ಯಕ. ವಿಧ್ಯಾರ್ಥಿಗಳು ಡಾ| ಬಾಬಾಸಾಹೇಬ ಅಂಬೇಡ್ಕರ್, ಮಹಾತ್ಮಾ ಗಾಂಧಿಧೀಜಿ ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ತಹಶೀಲ್ದಾರ್ ಬಸಲಿಂಗಪ್ಪ ನಾಯ್ಕೋಡಿ 102 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯ ಹೋರಾಟಗಾರರಾದ ಶಂಕ್ರಪ್ಪ ಸಾಹು ಹುಗ್ಗಿ, ಶ್ಯಾಮರಾವ್ ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಪುರಸಭೆ ಅಧ್ಯಕ್ಷೆ ಮಲ್ಲಮ್ಮ ಮಲ್ಲಣ್ಣ ಅವುಂಟಿ, ಉಪಾಧ್ಯಕ್ಷೆ ರೇಣುಕಾ ಶರಣು ಗುತ್ತೇದಾರ, ತಾಪಂ ಅಧ್ಯಕ್ಷೆ ಚಂದಮ್ಮ ಸಂಗಣ್ಣ, ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕ್ಕಿ ಚನ್ನಮಲ್ಲಯ್ಯ ಹಿರೇಮಠ, ಜಿಪಂ ಸದಸ್ಯರಾದ ಶಾಂತಪ್ಪ ಕೂಡಲಗಿ, ರೇವಣಸಿದ್ದಪ್ಪ ಸಂಕಾಲಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಅಬ್ದುಲ್ ರಜಾಕ ಮನಿಯಾರ, ಟಿಎಚ್‌ಒ ಡಾ| ಸಿದ್ಧು ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಲಿಂಗರಾಜ ಮೂಲಿಮನಿ, ಪ್ರಭು ಮಾನೆ, ಲೋಕೋಪಯೋಗಿ ಎಇಇ ಪಲ್ಲಾ ಸತ್ಯಾಶೀಲರೆಡ್ಡಿ, ಸಿಡಿಪಿಒ ಶಿವಪ್ರಕಾಶ ಹಿರೇಮಠ ಇದ್ದರು.
ಮೊರಾರ್ಜಿ ವಸತಿ ಶಾಲೆ ಮಕ್ಕಳು ನಾಡಗೀತೆ, ರಾಷ್ಟ್ರಗೀತೆ ಹಾಡಿದರು. ತಹಶೀಲ್ದಾರ್ ಬಸಲಿಂಗಪ್ಪ ನಾಯ್ಕೋಡಿ ಸ್ವಾಗತಿಸಿದರು, ಬಿಸಿಎಂ ಅಧಿಕಾರಿ ವಿರೂಪಾಕ್ಷ ಹಿರೇಗೌಡ ನಿರೂಪಿಸಿದರು, ಡಾ| ಸಿದ್ದು ಪಾಟೀಲ ವಂದಿಸಿದರು.
ಶಾಸಕ ಡಾ| ಅಜಯಸಿಂಗ್ ಅವರು ನಟ ಯಶ್, ಸರಿಗಮಪ ಸೀಜನ್ 13 ರ ವಿಜೇತ ಸುನೀಲ ಗುಜಗೊಂಡ ಅವರನ್ನು ಸನ್ಮಾನಿಸಿದರು. ಶಾಸಕರ ಪತ್ನಿ ಶ್ವೇತಾ, ಪುತ್ರಿ ಶೈನಾಸಿಂಗ್, ಪುತ್ರ ಜಯಸಿಂಗ್, ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ ಹಾಗೂ ಮುಖಂಡರು ಇದ್ದರು.
ತಂದೆ ಧರ್ಮಸಿಂಗ್ ಸಾಧನೆ ಮೀರಿಸಿ: ಜೇವರ್ಗಿ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಸಾಧನೆ ಮೀರಿಸಿ ಪುತ್ರ ಡಾ| ಅಜಯಸಿಂಗ್ ಬೆಳೆಯಬೇಕು. ಸರಳ, ಸಜ್ಜನಿಕೆಗೆ ಹೆಸರಾದ ಅಜಯಸಿಂಗ್ ಅವರನ್ನು ನಾನು ಬಹಳ ದಿನಗಳಿಂದ ಬಲ್ಲವನಾಗಿದ್ದೇನೆ. ತಾಲೂಕಿನಲ್ಲಿ ಮಾದರಿ ಕ್ರೀಡಾಂಗಣ ಮಾಡುವುದರ ಜೊತೆಗೆ ಸಾಕಷ್ಟು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಸಂತಸದ ವಿಷಯ. ಕ್ರಿಕೆಟ್ ಹೊರತುಪಡಿಸಿ ಗ್ರಾಮೀಣ ಕ್ರೀಡೆಗಳಿಗೆ ಸರ್ಕಾರ ಪ್ರೋತ್ಸಾಹ ನೀಡಬೇಕು. ಜೇವರ್ಗಿ ಪಟ್ಟಣದಲ್ಲಿ ಮಾದರಿ ಕ್ರೀಡಾಂಗಣ ನಿರ್ಮಿಸಿ.
ರಾಕಿಂಗ್ ಸ್ಟಾರ್ ಯಶ್, ಚಲನಚಿತ್ರ ನಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.