ಕಲಬುರಗಿ ಸಮ್ಮೇಳನ ಕನಕಪುರ ಮಾದರಿಯಲ್ಲಾಗಲಿ
Team Udayavani, Jan 14, 2019, 9:31 AM IST
ಕಲಬುರಗಿ: ವರ್ಷಾಂತ್ಯಕ್ಕೆ ಇಲ್ಲವೇ ಮುಂದಿನ ವರ್ಷದ ಆರಂಭದ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಅಖೀಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನ ವಿನೂತನ ಅದರಲ್ಲೂ ಕನಕಪುರದಲ್ಲಿ ಅತ್ಯಂತ ಯಶಸ್ವಿಯಾಗಿ ಕಂಡ ಮಾದರಿಯಲ್ಲಿ ನೆರವೇರಬೇಕೆಂದು ಹಿರಿಯ ವೈದ್ಯ ಸಾಹಿತಿ ಡಾ| ಎಸ್. ಎಸ್. ಗುಬ್ಬಿ ಹೇಳಿದರು.
ರವಿವಾರ ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ 2019ನೇ ಸಾಲಿನ ದಿನದರ್ಶಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕನ್ನಡ ನಾಡಿನ ಸೇವೆ ಮಾಡುವ ಅವಕಾಶ ಬಿಸಿಲು ನಾಡಿಗೆ ಸಿಕ್ಕಿದೆ. ಅಖೀಲ ಭಾರತ ಸಮ್ಮೇಳನಗಳಲ್ಲಿ ಪಿ.ಜಿ.ಆರ್. ಸಿಂಧ್ಯ ಹಾಗೂ ಇತರರ ಪರಿಶ್ರಮ, ಆಸಕ್ತಿಯಿಂದ ಕನಕಪುರ ಸಮ್ಮೇಳನ ಮೊದಲ ಸ್ಥಾನದಲ್ಲಿ ನಿಲ್ಲುತ್ತದೆ. ಇದೇ ಸಾಲಿನಲ್ಲಿ ಕಲಬುರಗಿ ಸಮ್ಮೇಳನವೂ ಬರಬೇಕು ಎನ್ನುವ ಆಶಯ ವ್ಯಕ್ತಪಡಿಸಿದರು.
ಕನ್ನಡ ಸಾಹಿತ್ಯಕ್ಕೆ ಕಲಬುರಗಿ ಕೊಡುಗೆ ದೊಡ್ಡದಾಗಿದೆ. ಕನ್ನಡದ ಮೊದಲ ಗ್ರಂಥ ಕವಿರಾಜಮಾರ್ಗ ನೀಡಿದ ಹಾಗೂ ಶರಣರ ವಚನಗಳ ನಾಡಾಗಿರುವ ಕಲಬುರಗಿಗೆ ಸುದೀರ್ಘ 31 ವರ್ಷಗಳ ನಂತರ ಸಮ್ಮೇಳನ ಬಂದಿದೆ. ಹೀಗಾಗಿ ಸಮ್ಮೇಳನ ಮಾದರಿಯಾಗಿ ನೆರವೇರುವಂತಾಗಲು ಈಗಲೇ ಸಿದ್ಧತೆಗಳಿಗೆ ಮುಂದಾಗಬೇಕೆಂದು ಹೇಳಿದರು.
ಮುಖ್ಯ ಅತಿಥಿಯಾಗಿದ್ದ ನಮ್ಮ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಅಧ್ಯಕ್ಷ ಶರಣಬಸಪ್ಪ ಎಂ. ಕಾಡಾದಿ ಮಾತನಾಡಿ, ಕಸಾಪ ಅಧ್ಯಕ್ಷ ಪರಿಶ್ರಮ ವಹಿಸಿ ಕಲಬುರಗಿಗೆ ಸಮ್ಮೇಳನ ತಂದಿದ್ದಾರೆ. ಹೀಗಾಗಿ ಅಭಿನಂದನೆಗೆ ಅರ್ಹರಾಗಿದ್ದಾರೆ. ಅಖೀಲ ಭಾರತ ಸಮ್ಮೇಳನ ಅಭಿಮಾನಪೂರ್ವಕವಾಗಿ ನೆರವೇರುವಂತಾಗಲು ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಹೇಳಿದರು.
ಮುಂಜಾನೆ ಎದ್ದ ತಕ್ಷಣ ಕನ್ನಡದ ಅಂಕಿಗಳು ಹಾಗೂ ಕನ್ನಡ ಸಾಹಿತ್ಯದ ಶಬ್ದಕೋಶಗಳನ್ನು ನೋಡುವುದರಿಂದ ಮನಸ್ಸಿಗೆ ಹಿತ ನೀಡುತ್ತದೆ. ಹೀಗಾಗಿ ಕನ್ನಡ ದಿನದರ್ಶಿಕೆ ಎಲ್ಲರ ಮನೆಯಲ್ಲಿ ಇರುವುದು ಅಗತ್ಯವಾಗಿದೆ ಎಂದು ಕಾಡಾದಿ ಹೇಳಿದರು.
ಜಿಲ್ಲಾ ಕಸಾಪ ಅಧ್ಯಕ್ಷ ವೀರಭದ್ರ ಸಿಂಪಿ ಅಧ್ಯಕ್ಷತೆ ವಹಿಸಿ, ಕಲಬುರಗಿಯಲ್ಲಿನ ಅಖೀಲ ಭಾರತ ಸಮ್ಮೇಳನ ಸಿದ್ಧತೆ ಹಾಗೂ ಯಶಸ್ವಿ ನಿಟ್ಟಿನಲ್ಲಿ ಪಡೆಯೊಂದನ್ನು ರಚಿಸಲು ಉದ್ದೇಶಿಸಲಾಗಿದೆ. ಗ್ರಾಮೀಣ ಭಾಗದಲ್ಲಿನ ಅಳಿಯುವ ಅಂಚಿನಲ್ಲಿರುವ ಕಲೆಗಾರಿಕೆ ಉಳಿದು ಬೆಳೆಸುವ ಉದ್ದೇಶದಿಂದ ಜತೆಗೆ ಸಮ್ಮೇಳನದಲ್ಲಿ ವಾಸ್ತವಿಕತೆ ಬಿಂಬಿಸಲು ಉದ್ದೇಶಿಸಲಾಗಿದೆ. ಸಮ್ಮೇಳನ ಕುರಿತು ಎಲ್ಲರೂ ಸಲಹೆ ನೀಡುವುದರ ಜತೆಗೆ ಸಹಕಾರ ನೀಡಬೇಕೆಂದು ವಿನಂತಿಸಿದರು. ಕಸಾಪದ ಗೌರವ ಕಾರ್ಯದರ್ಶಿಗಳಾದ ಮಡಿವಾಳಪ್ಪ ನಾಗರಹಳ್ಳಿ, ಡಾ| ವಿಜಯಕುಮಾರ ಪರೂತೆ, ಖಜಾಂಚಿ ದೌಲತರಾಯ ಪಾಟೀಲ ಮಾಹೂರ, ಪದಾಧಿಕಾರಿ ಸೂರ್ಯಕಾಂತ ಪಾಟೀಲ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.