ರಾಜ್ಯ ಸರ್ಕಾರ ವಿರುದ್ಧ ಬೀದಿಗಿಳಿದ ಬಿಜೆಪಿ
Team Udayavani, Aug 19, 2017, 11:12 AM IST
ಕಲಬುರಗಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಒಂದನೇ ಸ್ಥಾನ ಪಡೆದಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಚಿವರ ರಾಜೀನಾಮೆಗೆ ಆಗ್ರಹಿಸಿದರು. ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇಂಧನ ಸಚಿವ ಡಿ.ಕೆ ಶಿವಕುಮಾರ ಅವರ ಅಕ್ರಮ ಆಸ್ತಿ ಮೇಲೆ 79 ಕಡೆ ದಾಳಿ ನಡೆಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರನ್ನು ವಜಾಗೊಳಿಸುವುದನ್ನು ಬಿಟ್ಟು ಕೇಂದ್ರ ಸರ್ಕಾರವನ್ನು ದೂಷಿಸಿರುವುದು ನಾಚಿಗೇಡಿತನದ ಸಂಗತಿಯಾಗಿದೆ ಎಂದರು. ನೋಟು ರದ್ದತಿ ನಂತರ ಸಚಿವ ರಮೇಶ ಜಾರಕಿಹೊಳಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳಕರ, ಮುಖ್ಯಮಂತ್ರಿಗಳ ಪರಮಾಪ್ತ ಶಾಸಕ ಗೋವಿಂದರಾಜು ಅವರ ಮನೆಗಳಲ್ಲಿ ಕೋಟ್ಯಾಂತರ
ರೂ ಪತ್ತೆಯಾಗಿದೆ. ಅಲ್ಲದೇ ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಕೊಟ್ಟಿರುವ ಡೈರಿ ಪತ್ತೆಯಾಗಿರುವುದು ಸರ್ಕಾರದ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಆರೋಪಿಸಿದರು. ಬಿಜೆಪಿ ಹಿಂದಿನ ಜಿಲ್ಲಾಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ್ ಪ್ರತಿಭಟನಾ ಮೆರವಣಿಗೆ ಉದ್ದೇಶಿಸಿ, ಸಮರ್ಪಕವಾಗಿ ನಿರ್ವಹಿಸುತ್ತಿದ್ದ ಲೋಕಾಯುಕ್ತವನ್ನು ದುರ್ಬಲಗೊಳಿಸಿ ತಮಗೆ ಅನುಕೂಲಕ್ಕೆ ತಕ್ಕಂತೆ ಎಸಿಬಿ, ಸಿಐಡಿಗಳನ್ನು ರೂಪಿಸಿ ಹಗರಣಗಳಿಗೆ ಕ್ಲೀನ್‌ಚೀಟ್ ನೀಡುವುದಕ್ಕೆ ಉಪಯೋಗಿಸುತ್ತಿದ್ದಾರೆ. ಇದಕ್ಕೆ ತಕ್ಕ ಪಾಠ ಕಲಿಸಲು ಜನತೆ ತುದಿಗಾಲ ಮೇಲೆ ನಿಂತಿದ್ದಾರೆ ಎಂದರು. ರಾಜ್ಯದಲ್ಲಿ ಮರಳು ಮಾಫೀಯಾ ಹಾವಳಿ ಮಿತಿ ಮೀರಿದೆ. ನಿಷ್ಠಾವಂತ ಅಧಿಕಾರಿಗಳ ಮೇಲೆ ಹಲ್ಲೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯಲು ಮುಂದಾದ ಐಎಎಸ್ ಅಧಿಕಾರಿಗಳ ನಿಗೂಢ ಕೊಲೆಯಾಗುತ್ತದೆ. ಇದು ಆಡಳಿತದಲ್ಲಿ ಅರಾಜಕತೆ ನಿರ್ಮಾಣವಾಗಿರುವುದು ಸಾಬೀತುಪಡಿಸುತ್ತದೆ ಎಂದರು. ಮಾಜಿ ಸಚಿವ ಬಾಬುರಾವ್ ಚವ್ಹಾಣ, ಶಿವಶರಣಪ್ಪ ನಿಗ್ಗಡಗಿ, ಸುಭಾಷ ಪಾಟೀಲ ಬಿರಾದಾರ, ಲಿಂಗರಾಜ ಬಿರಾದಾರ, ಸಿದ್ಧರಾಮಪ್ಪ ಮಾಲಿ ಬಿರಾದಾರ, ಶಾಮರಾವ್ ಪ್ಯಾಟಿ, ಶರಣಪ್ಪ ತಳವಾರ, ಸಂಜೀವನ್ ಯಾಕಾಪುರ, ಪ್ರಕಾಶ ಜಮಾದಾರ, ಚಂದ್ರಶೇಖರ ಹಿರೇಮಠ, ರಾಘವೇಂದ್ರ ಕುಲಕರ್ಣಿ, ರಾಜು ವಾಡೇಕರ್, ಇಂದಿರಾ ಶಕ್ತಿ, ಮಲ್ಲಿಕಾರ್ಜುನ ಪಾಟೀಲ ಓಕಳಿ, ಸಂಗಮೇಶ ನಾಗನಹಳ್ಳಿ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.