ವಿಶ್ವಕ್ಕೆ ಸಮತೆ ಬೋಧಿಸಿದ ಬುದ್ಧ ನಮಗೆ ಹಿಡಿಸಲಿಲ್ಲ


Team Udayavani, Apr 19, 2017, 3:23 PM IST

gul3.jpg

ಕಲಬುರಗಿ: ಇಡೀ ಜಗತ್ತಿಗೆ ಶಾಂತಿ, ಸಮತೆ ಬೋಧಿಸಿದ ಬುದ್ಧ ನಮಗೆ ಹಿಡಿಸಲಿಲ್ಲ. ಆತನ ಬೋಧನೆ, ತತ್ವಗಳನ್ನು ನಾವು ತಿಳಿಯುವ ಮೊದಲೇ ದೇಶದಿಂದ ಹೊರದೂಡಿಬಿಟ್ಟೇವು. ಅದರಿಂದ ನಮಗೆ ತುಂಬಲಾರದ ನಷ್ಟ ಎಂದು ಹಿರಿಯ ಸಂಸ್ಕೃತಿ ಚಿಂತಕ ಪ್ರೊ| ಮೀರಾಸಾಬಿಹಳ್ಳಿ ಶಿವಣ್ಣ ಅಭಿಪ್ರಾಯಪಟ್ಟರು. 

ಪಾಲಿ ಇನ್ಸ್‌ಟ್ಯೂಟ್‌ ಮತ್ತು ಗುಲಬರ್ಗಾ ವಿವಿ ಪಾಲಿ ಮತ್ತು ಬೌದ್ಧ ಅಧ್ಯಯನ ಸಂಸ್ಥೆ ಸಹಯೋಗದಲ್ಲಿ ಮಹಾತ್ಮಗಾಂಧಿ ಸಭಾಂಗಣದಲ್ಲಿ ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಬುದ್ಧ ಮತ್ತು ಆತನ ಧರ್ಮ ಕೃತಿ ಕುರಿತು ಮಂಗಳವಾರ ಆಯೋಜಿಸಲಾಗಿದ್ದ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. 

ಬುದ್ಧನ ಕಾಲದಲ್ಲಿ ಈ ದೇಶದಲ್ಲಿ ಪಾಲಿಯೇ ಜನಪದ ಭಾಷೆಯಾಗಿತ್ತು. ಹಾಗಾಗಿ ಪಾಲಿ ಭಾಷೆ ಅಧ್ಯಯನ ಮಾಡುವುದು ನಮ್ಮ ಎಲ್ಲ ಅಗತ್ಯಗಳಲ್ಲಿ ಪ್ರಥಮವಾಗಬೇಕು. ಆಗಲೇ ಈ ನೆಲದ ಮೂಲ ತತ್ವ ಹಾಗೂ ಅವರ ಪರಿಭಾಷೆ ನಮಗೆ ಅರ್ಥವಾಗುತ್ತದೆ. ಆಗ ನಾವು ಮನುಷ್ಯ ಮೌಲ್ಯಗಳ ಕುರಿತು ಗೌರವ ಹಾಗೂ ಅನುಕರಣೆ ಸಾಧ್ಯವಿದೆ ಎಂದು ಹೇಳಿದರು. 

ಈ ಹಂತದಲ್ಲಿ ನಮಗೆ ವಿಶ್ವರತ್ನ ಡಾ| ಬಾಬಾಸಾಹೇಬ ತಮ್ಮ ಕೊನೆಗಾಲದಲ್ಲಿ ಬರೆದಿರುವ ಬುದ್ಧ ಮತ್ತು ಆತನ ಧಮ್ಮ ಎನ್ನುವ ಪುಸ್ತಕ ಬುದ್ಧನ ಕುರಿತು ನಮಗೆ ಬೆಳಕು ಚೆಲ್ಲುತ್ತದೆ. ಅದನ್ನು ಓದುವುದು ನಮ್ಮ ಅನಿವಾರ್ಯತೆಯಾಗಬೇಕು. ಆಗಲೇ ನಾವು ನಮ್ಮೊಳಗಿನ ಸಮತೆಯ ಹಣತೆ ಹಚ್ಚಬಲ್ಲೆವು ಎಂದು ಹೇಳಿದರು.

ಮಹಾತ್ಮಗಾಂಧೀಜಿ ಜತೆ ಹಲವು ವಿಷಯಗಳಲ್ಲಿ ವೈಚಾರಿಕ ಭಿನ್ನಾಭಿಪ್ರಾಯ ಹೊಂದಿದ್ದ ಅಂಬೇಡ್ಕರ್‌ ದಲಿತರ ಆತ್ಮಾಭಿಮಾನದ ಸಂಕೇತವಾಗಿದ್ದಾರೆ. ನಾನಕ್‌ಚಂದ್‌ ಎಂಬುವವರು ಅಂಬೇಡ್ಕರ್‌ರ ಆಲೋಚನೆಗಳನ್ನು ಬರೆದಿಡುವ ಮೂಲಕ ಮಹದುಪಕಾರ ಮಾಡಿದ್ದಾರೆ. ಈ ದೇಶದಲ್ಲಿ ಬುದ್ಧ ಮತ್ತು ಅಂಬೇಡ್ಕರ್‌ ಅವರ ಬಗ್ಗೆ ಬರೆಯದವರೇ ಇಲ್ಲ.

ಅಷ್ಟು ಪುಸ್ತಕಗಳು, ಅಷ್ಟು ವಿಚಾರಗಳು, ಸಂಘರ್ಷಗಳು, ವಾದಗಳು ಮತ್ತು ಸತ್ಯಗಳು ಹೊರಬಂದಿವೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಗುವಿವಿ ಕುಲಪತಿ ಪ್ರೊ| ಎಸ್‌.ಆರ್‌. ನಿರಂಜನ್‌ ಮಾತನಾಡಿ, ಬುದ್ಧ, ಬಸವ ಮತ್ತು ಅಂಬೇಡ್ಕರ್‌ ಅವರ ವಿಚಾರಗಳಿಂದ ಅವರು ಕಂಡುಕೊಂಡ ಸತ್ಯದ ಮಾರ್ಗವನ್ನು ಅನುಸರಿಸುವುದರಿಂದ ಒಂದು ಸ್ವತ್ಛ ಮತ್ತು ಆರೋಗ್ಯಕರವಾದ ಸಮಾಜವನ್ನು ನಾವು ಕಟ್ಟಬಹುದು.

ಆ ನಿಟ್ಟಿನಲ್ಲಿ ನಮ್ಮ ಆಲೋಚನೆಗಳು, ಸಂಶೋಧನೆಗಳು, ವಿಚಾರಗಳು, ತರ್ಕಗಳು ಹಾಗೂ ನಿಲುವುಗಳು ಇರಬೇಕು. ಆಗಲೇ ನಾವು ಮಾನವೀಯ ಮೌಲ್ಯಗಳನ್ನು ಗೌರವಿಸಲು ಹಾಗೂ ಅದನ್ನು ರೂಢಿಸಿಕೊಳ್ಳಲು ಸಾಧ್ಯ.   

ಟಾಪ್ ನ್ಯೂಸ್

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.