ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಅನನ್ಯ
Team Udayavani, Sep 8, 2022, 4:16 PM IST
ಜೇವರ್ಗಿ: ಶಿಕ್ಷಕರು ವಿದ್ಯಾರ್ಥಿಗಳಿಗೆ ಶ್ರೇಷ್ಠ ಜ್ಞಾನ, ಬುದ್ಧಿ, ಸಂಸ್ಕಾರ, ಮಾನವೀಯ ಮೌಲ್ಯಗಳು ಮತ್ತು ಸೂಕ್ತ ಮಾರ್ಗದರ್ಶನ ಮಾಡಿ, ಅವರನ್ನು ರಾಷ್ಟ್ರದ ಶ್ರೇಷ್ಠ ಸಂಪನ್ಮೂಲಗಳನ್ನಾಗಿಸುವ ಮೂಲಕ ಸದೃಢ ರಾಷ್ಟ್ರದ ನಿರ್ಮಾಣಕ್ಕೆ ಅನನ್ಯವಾದ ಕೊಡುಗೆ ನೀಡುತ್ತಿದ್ದಾರೆ ಎಂದು ಪಟ್ಟಣದ ಸರ್ಕಾರಿ ಸ್ವತಂತ್ರ ಪಪೂ ಕಾಲೇಜಿನ ಪ್ರಾಚಾರ್ಯ ಬಸವರಾಜ ಬಿರಾದಾರ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಜರುಗಿದ “ಶಿಕ್ಷಕರ ದಿನಾಚರಣೆ’ಯ ಕಾರ್ಯಕ್ರಮವನ್ನು ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ರ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ, ಕೇಕ್ ಕತ್ತರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ದೇಶಕ್ಕೆ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಕೊಡುಗೆ ಅಪಾರವಾಗಿದೆ. ನಮ್ಮ ಪ್ರದೇಶ ಹಿಂದುಳಿದಿಲ್ಲ. ಅನೇಕ ಪ್ರತಿಭೆಗಳು ಉನ್ನತವಾದ ಸಾಧನೆ ಮಾಡುತ್ತಿದ್ದಾರೆ ಎಂದರೆ, ಅದಕ್ಕೆ ಈ ಭಾಗದ ಶಿಕ್ಷಕರ ಪರಿಶ್ರಮವೇ ಕಾರಣವಾಗಿದೆ. ಶಿಕ್ಷಕರು ಪಠ್ಯದ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ಮಾನವೀಯ ಮೌಲ್ಯಗಳ ಗುಣಗಳನ್ನು ಬೆಳೆಸುವ ಕಾರ್ಯ ನಿರಂತರವಾಗಿ ಮಾಡಬೇಕಾಗಿದೆ ಎಂದರು.
ಕಾಲೇಜಿನ ಪ್ರಾಚಾರ್ಯ ಮಹಮ್ಮದ್ ಅಲ್ಲಾವುದ್ದೀನ್ ಸಾಗರ ಮಾತನಾಡಿದರು. ಎನ್.ಎಸ್. ಎಸ್ ಅ ಧಿಕಾರಿ, ಎಚ್.ಬಿ. ಪಾಟೀಲ, ಉಪನ್ಯಾಸಕರಾದ ಚಂದ್ರಪ್ರಭ ಕಮಲಾಪೂರಕರ್, ರವೀಂದ್ರಕುಮಾರ ಬಟಗೇರಿ, ಶಂಕ್ರೆಪ್ಪ ಹೊಸದೊಡ್ಡಿ, ರೇಣುಕಾ ಚಿಕ್ಕಮೇಟಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.