ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮದಿಂದ ಆಚರಿಸಲು ನಿರ್ಧಾರ
Team Udayavani, Aug 8, 2017, 2:57 PM IST
ಕಲಬುರಗಿ: ಜಿಲ್ಲೆಯಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆ. 14ರಂದು ಸಂಭ್ರಮದಿಂದ ಆಚರಿಸಲು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯು ಸರ್ವಾನುಮತದಿಂದ ನಿರ್ಧರಿಸಿತು.
ದಿನಾಚರಣೆ ಅಂಗವಾಗಿ ಆ. 14ರಂದು ಬೆಳಗ್ಗೆ 9:30ರಿಂದ ಸರ್ದಾರ್ ವಲ್ಲಭಭಾಯಿ ವೃತ್ತದಿಂದ ಡಾ| ಎಸ್. ಎಂ. ಪಂಡಿತ ರಂಗಮಂದಿರದ ವರೆಗೆ ಶ್ರೀಕೃಷ್ಣನ ಭಾವಚಿತ್ರದ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ಇದರಲ್ಲಿ ಶ್ರೀಕೃಷ್ಣನ ಹಾಡುಗಳನ್ನು ಹಾಡುವ ಭಜನೆ ಮತ್ತು ಡೊಳ್ಳು ಕುಣಿತ ತಂಡಗಳ ವ್ಯವಸ್ಥೆ ಮಾಡಲು ತೀರ್ಮಾನಿಸಲಾಯಿತು. ಅಂದು ಬೆಳಗ್ಗೆ 11:00 ಗಂಟೆಗೆ ನಗರದ ಡಾ| ಎಸ್. ಎಂ.ಪಂಡಿತ ರಂಗಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ದಿನಾಚರಣೆ ಸಮಾರಂಭ ಆಯೋಜಿಸಲಾಗುವುದು. ದಿನಾಚರಣೆ ಅಂಗವಾಗಿ ನಗರದ ಎನ್.ವಿ. ಕಾಲೇಜಿನ ಮಧ್ವಚಾರ್ಯ ನವಲಿ ಅವರಿಂದ ಉಪನ್ಯಾಸ ಏರ್ಪಡಿಸಲು ಸಭೆ ನಿರ್ಣಯ ಕೈಗೊಂಡಿತು. ಅರ್ಚಕರಿಂದ ಶ್ರೀಕೃಷ್ಣನ ಭಾವಚಿತ್ರ ಹಾಗೂ ಪಾದುಕೆಗಳಿಗೆ ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮ ಪ್ರಾರಂಭಿಸಲು ಹಾಗೂ ದಾಸವಾಣಿ, ಭರತನಾಟ್ಯಗಳಂಥಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಣಯ ಕೈಗೊಂಡಿತು. ರಂಗಮಂದಿರದಲ್ಲಿ ಆಗಮಿಸುವ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಎಲ್ಲ ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಶ್ರೀಕೃಷ್ಣ ಭಾವಚಿತ್ರಕ್ಕೆ ಪೂಜೆ ಮಾಡಬೇಕು. ಸಮಾರಂಭದಲ್ಲಿ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸುತ್ತೋಲೆ ಹೊರಡಿಸಲು ಸಭೆ ತೀರ್ಮಾನಿಸಿತು. ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್, ಯಾದವ ಸಮಾಜದ ಜಿಲ್ಲಾಧ್ಯಕ್ಷ ರವೀಂದ್ರ ಉದನೂರ, ಕಾರ್ಯದರ್ಶಿ ಕಲ್ಲಪ್ಪ ಯಾದವ, ಸಹ ಕಾರ್ಯದರ್ಶಿ ಶ್ರೀಮಂತ ಯಾದವ, ಉಪಾಧ್ಯಕ್ಷ ಸುಭಾಶ ರಾಜಂ ಪಾಲ್ಗೊಂಡಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ದತ್ತಪ್ಪ ಸಾಗನೂರ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.