ಕಡ್ಡಾಯ ಕನ್ನಡ ನಾಮಫಲಕಗಳಿಗೆಆಗ್ರಹಿಸಿ ರಕ್ಷಣಾ ವೇದಿಕೆ ರ್ಯಾಲಿ
Team Udayavani, Nov 21, 2017, 10:19 AM IST
ಕಲಬುರಗಿ: ನಗರ ಹಾಗೂ ಜಿಲ್ಲೆಯ ಎಲ್ಲ ಮಳಿಗೆಗಳ ಮೇಲೆ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಹಾಕಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ಸೋಮವಾರ ದ್ವಿಚಕ್ರ ವಾಹನಗಳ ರ್ಯಾಲಿ ನಡೆಸಿದರು.
ನಗರದ ಕೇಂದ್ರ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಮಹಾನಗರ ಪಾಲಿಕೆ ವರೆಗೆ ನಡೆದ ದ್ವಿಚಕ್ರವಾಹನಗಳ ರ್ಯಾಲಿ ನೇತೃತ್ವವನ್ನು ಸಂಘಟನೆ ಉತ್ತರ ಕರ್ನಾಟಕದ ಅಧ್ಯಕ್ಷ ಶರಣು ಗದ್ದುಗೆ ವಹಿಸಿದ್ದರು.
ಜಿಲ್ಲಾಧಿಕಾರಿಗಳಿಗೆ ಹಾಗೂ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ನಗರದಲ್ಲಿ ಕನ್ನಡ ನಾಮಫಲಕಗಳು ಮಾಯವಾಗಿವೆ. ಇದಕ್ಕೆ ಬೇರೆ ಭಾಷಿಕರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೇ
ಕಾರಣವಾಗಿದೆ. ನಗರ, ಜಿಲ್ಲೆ, ತಾಲೂಕು, ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿ ಎಲ್ಲ ಮಳಿಗೆಗಳಲ್ಲಿ ಕೂಡಲೇ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.
30 ದಿನಗಳೊಳಗೆ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳದೇ ಹೋದಲ್ಲಿ ಸಂಘಟನೆ ಕಾರ್ಯಕರ್ತರು ಅನ್ಯ ಭಾಷೆಗಳ ನಾಮಫಲಕಗಳಿಗೆ ಕಪ್ಪು ಮಸಿ ಬಳೆಯುವಂತಹ ಪ್ರತಿಭಟನೆ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ರ್ಯಾಲಿಯಲ್ಲಿ ಹೈದ್ರಾಬಾದ್ ಕರ್ನಾಟಕದ ಅಧ್ಯಕ್ಷ ಗುರುರಾಜ ಶಕ್ತಿ ಮತ್ತಿಮೂಡ, ಜಿಲ್ಲಾಧ್ಯಕ್ಷ ಗೋಪಾಲ ನಾಟೀಕಾರ, ಮಾರುತಿ ಕಮ್ಮಾರ, ಸಂಪತ್ತ ಹಿರೇಮಠ, ಮಂಜು ಕುಸನೂರು, ಸಂತೋಷ ಚೌದ್ರಿ, ವಿಜಯ್ ಅಂಕಲಗಿ, ಮನೋಹರ ಚಿಗಾನೂರು, ಅಂಬರೀಷ ಬಾಬು, ಬಾಪುಗೌಡ ಹಾಗೂ ಬಸವರಾಜ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.