ಅಭಿವೃದ್ಧಿಗೆ ಒಳ್ಳೆ ಅಧಿಕಾರಿ ಶೋಧ
Team Udayavani, Apr 11, 2017, 4:06 PM IST
ಚಿಂಚೋಳಿ: ನಮ್ಮ ಹಿಂದುಳಿದ ತಾಲೂಕಿನ ಅಭಿವವೃದ್ಧಿಗೋಸ್ಕರ ಒಳ್ಳೆಯ ಅಧಿಕಾರಿಗಳನ್ನು ಹುಡುಕುತ್ತಿದ್ದೇನೆ. ದಕ್ಷ ಮತ್ತು ಪ್ರಮಾಣಿಕ ಅಧಿಕಾರಿಗಳು ಸಿಗುತ್ತಿಲ್ಲ. ಅಧಿಕಾರಿಗಳು ಸರಕಾರಿ ಕೆಲಸಗಳನ್ನು ಸರಿಯಾಗಿ ಮಾಡಿದರೆ ಯಾರಿಗೂ ತಲೆಬಾಗುವ ಅವಶ್ಯಕತೆ ಇರುವುದಿಲ್ಲ ಎಂದು ಸಂಸದೀಯ ಕಾರ್ಯದರ್ಶಿ ಡಾ| ಉಮೇಶ ಜಾಧವ ಹೇಳಿದರು.
ಪಟ್ಟಣದ ತಹಶೀಲ್ದಾರ ಕಚೇರಿ ಆವರಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಸೇಡಂ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿ ರಾಜ್ಯ ಪ್ರವಾಸೋದ್ಯಮ ಇಲಾಖೆ ವಿಶೇಷ ಅಧಿಕಾರಿಯಾಗಿ ಬಡ್ತಿ ಹೊಂದಿದ ಭೀಮಾಶಂಕರ ತೆಗ್ಗೆಳ್ಳಿ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಜಿಲ್ಲೆಯ ಸುಕ್ಷೇತ್ರ ರೇವಗ್ಗಿ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ಮತ್ತು ಘತ್ತರಗಿ ಭಾಗ್ಯವಂತಿ ದೇವಸ್ಥಾನ ಅಭಿವೃದ್ಧಿಪಡಿಸಿ ಭಕ್ತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಒಳ್ಳೆಯ ಅಧಿಕಾರಿಗಳಿದ್ದರೆ ತಾಲೂಕು ಅಭಿವೃದ್ಧಿ ಆಗತ್ತದೆ. ಹೀಗಾಗಿ ತಾಲೂಕಿನ ಅಭಿವೃದ್ಧಿಗಾಗಿ ಒಳ್ಳೆಯ ಅಧಿಕಾರಿಗಳನ್ನು ಹುಡುಕಬೇಕಾಗಿದೆ ಎಂದು ಹೇಳಿದರು. ತಾಲೂಕಿನ ಚಂದ್ರಂಪಳ್ಳಿ ಮತ್ತು ಗೊಟ್ಟಂಗೊಟ್ಟ, ಎತ್ತಪೋತ ಪ್ರವಾಸಿ ತಾಣಗಳು ಅಭಿವೃದ್ಧಿಯಾಗಬೇಕಾಗಿದೆ. ಸೇಡಂ ಸಹಾಯಕ ಆಯುಕ್ತ ಭೀಮಾಶಂಕರ ತೆಗ್ಗೆಳ್ಳಿ ಅವರು ಕಳೆದ 3 ವರ್ಷಗಳಲ್ಲಿ ಕಂದಾಯ ಇಲಾಖೆಯಲ್ಲಿ ದಕ್ಷ ಮತ್ತು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದಾರೆ.
ಇನ್ನು ಮುಂದೆ ಕಲಬುರಗಿ ಜಿಲ್ಲೆಯ ನೋಡಲ್ ಅಧಿಕಾರಿಯಾಗಿ ಸೇವೆ ಸಲ್ಲಿಸಲು ಸಂಬಂಧಿಸಿದ ಸಚಿವರಿಗೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸೇಡಂ ಸಹಾಯಕ ಆಯುಕ್ತ ಭೀಮಾಶಂಕರ ತೆಗ್ಗೆಳ್ಳಿ, ಸಿಬ್ಬಂದಿಗಳನ್ನು ಅಮಾನತುಗೊಳಿಸುವುದು ಸಮಂಜಸವಲ್ಲ. ಸಿಬ್ಬಂದಿಗಳಿಂದ ಕೆಲಸಗಳನ್ನು ಮಾಡಿಸಿಕೊಳ್ಳುವ ಕೌಶಲ್ಯ ಅಧಿಕಾರಿಗಳಲ್ಲಿಬೇಕು.
ಚಿಂಚೋಳಿ, ಸೇಡಂ, ಚಿತ್ತಾಪುರ ತಾಲೂಕಿನಲ್ಲಿ ಯಾವುದೇ ಕಾನೂನು ಬಾಹಿರವಾದ ಕೆಲಸ ನಡೆಯಲು ಅವಕಾಶ ನೀಡಿಲ್ಲ. ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸರಳವಾಗಿ ದಾಖಲೆ ಸಿಗಬೇಕು ಎಂಬ ಉದ್ದೇಶವಾಗಿತ್ತು. ಹೈ.ಕ. ಪ್ರದೇಶ ಅತಿ ಹಿಂದುಳಿದೆ. ಹೀಗಾಗಿ ನನ್ನ ಸೇವೆಯನ್ನು ಇಲ್ಲಿಯೇ ಮಾಡುವ ಇಷ್ಟ ಹೊಂದಿದ್ದೇನೆ ಎಂದು ಹೇಳಿದರು.
ಚಿತ್ತಾಪುರ ತಾಲೂಕಿನಲ್ಲಿ ಮರಳು ಮಾμಯಾದಿಂದ ವರ್ಗಾವಣೆ ಮಾಡಲಾಗಿದೆ ಎಂದು ಕೆಲ ಉಹಾಪೋಹ ಸುದ್ದಿಗಳು ಬಂದಿವೆ. ಇದು ಶುದ್ಧ ಸುಳ್ಳು. ನನ್ನ ಮೂರು ವರ್ಷ ಸೇವೆ ಅವಧಿ ಪೂರ್ಣಗೊಂಡಿದೆ. ಸರಕಾರ ಬಡ್ತಿ ನೀಡಿ ಅದೇಶ ಹೊರಡಿಸಿದ್ದರಿಂದ ವರ್ಗಾವಣೆ ಆಗಿದೆ ಎಂದು ಹೇಳಿದರು. ಚಿಂಚೋಳಿ ಡಿವೈಎಸ್‌ಪಿ ಯು. ಶರಣಪ್ಪ. ತಾಪಂ ಅಧಿಕಾರಿ ಅನೀಲಕುಮಾರ ರಾಠೊಡ ಮಾತನಾಡಿದರು.
ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ವೆಂಕಟೇಶ ದುಗ್ಗನ್, ಬಸವರಾಜ ಸಜ್ಜನಶೆಟ್ಟಿ, ಕೆ.ಎಂ. ಬಾರಿ, ಮಾಣಿಕಪ್ಪ ಭಗವಂತಿ ಇದ್ದರು. ತಹಶೀಲ್ದಾರ ಪ್ರಕಾಶ ಕುದುರೆ ಸ್ವಾಗತಿಸಿದರು. ರೇವಣಸಿದ್ದಯ್ಯ ಸ್ವಾಮಿ ನಿರೂಪಿಸಿದರು. ಆಹಾರ ನಿರೀಕ್ಷಕ ಮಂಜುನಾಥ ಕಲಬುರಗಿ ವಂದಿಸಿದರು. ಕಂದಾಯ ಇಲಾಖೆ ಸಿಬ್ಬಂದಿಗಳು ಸಹಾಯಕ ಆಯುಕ್ತ ಭೀಮಾಶಂಕರ ಅವರನ್ನು ಸನ್ಮಾನಿಸಿ ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
MUST WATCH
ಹೊಸ ಸೇರ್ಪಡೆ
Congress: ಇದೇ ಅವಧಿಯಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ
Chhattisgarh: ಮೂವರು ನಕ್ಸಲರ ಎನ್‌ಕೌಂಟರ್… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್
Ajekar: ಎಷ್ಟು ದಿನ ಟವರ್ ನೋಡ್ಕೊಂಡಿರ್ಲಿ, ನಮ್ಗೆ ಬೇಗನೆ ಕನೆಕ್ಷನ್ ಕೊಡಿ ಸ್ವಾಮಿ!
Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ
Kundapura: ಕೋಡಿ ಸಮುದ್ರ ತೀರದಲ್ಲಿ ಶೌಚಾಲಯ ಸಿದ್ಧವಾದರೂ ಪ್ರವಾಸಿಗರ ಬಳಕೆಗೆ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.