ಆಹಾರ ಖಾತ್ರಿ ನಾಗರಿಕ ಸಮಾಜದ ಕರ್ತವ್ಯ: ಹೂಗಾರ


Team Udayavani, Oct 19, 2021, 12:26 PM IST

12

ಆಳಂದ: ಆಹಾರ ಮಾನವರ ಮೂಲ ಅಗತ್ಯವಾಗಿದ್ದು, ಪ್ರತಿಯೊಬ್ಬರಿಗೂ ಆಹಾರ ದೊರೆಯುವುದನ್ನು ಖಾತ್ರಿ ಮಾಡಿಕೊಳ್ಳುವುದು ನಾಗರಿಕ ಸಮಾಜದ ಕರ್ತವ್ಯವಾಗಿದೆ ಎಂದು ಕೃಷಿ ವಿಜ್ಞಾನಿ ಡಾ| ಶ್ರೀನಿವಾಸ ವಿ. ಹೂಗಾರ ಹೇಳಿದರು.

ತಾಲೂಕಿನ ಸುಂಟನೂರ ಗ್ರಾಮದ ಸಮೀಪವಿರುವ ಪ್ರಗತಿಪರ ರೈತ ಗುಂಡಪ್ಪ ಧೂಳಗೊಂಡ ಪಟ್ಟಣ ಅವರ ತೋಟದಲ್ಲಿ “ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ವಿಶ್ವ ಆಹಾರ ದಿನಾಚರಣೆ ಪ್ರಯುಕ್ತ ಪ್ರಗತಿಪರ ರೈತ ಮತ್ತು ಕೃಷಿ ವಿಜ್ಞಾನಿಗೆ ಸತ್ಕಾರ, ರೈತರೊಂದಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಾವು ಸೇವಿಸುವ ಆಹಾರ ಶೇ.97ರಷ್ಟು ವಿಷಪೂರಿತವಾಗಿದೆ. ಇದರಿಂದ ಅನೇಕ ಕಾಯಿಲೆಗಳು ಉಂಟಾಗುತ್ತಿವೆ. ಶುಚಿಯಾದ, ಸತ್ವಯುತ, ಸಮತೋಲಿತವಾದ ಆಹಾರದ ಸೇವನೆಯಿಂದ ದೇಹ ಆರೋಗ್ಯ ಪೂರ್ಣವಾಗಿರಲು ಸಾಧ್ಯವಾಗುತ್ತದೆ ಎಂದರು.

ಒಂದು ಅಂದಾಜಿನ ಪ್ರಕಾರ ದೇಶದಲ್ಲಿ ಪ್ರತಿದಿನವೂ 224 ಕೋಟಿ ರೂ. ಮೌಲ್ಯದ ಆಹಾರ ವ್ಯರ್ಥವಾಗುತ್ತಿದೆ. ಒಟ್ಟು ಜನಸಂಖ್ಯೆಯ ಶೇ.14.8ರಷ್ಟು ಜನರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಆದ್ದರಿಂದ ಪ್ರತಿಯೊಬ್ಬರು ಅವಶ್ಯಕತೆಯಷ್ಟೆ ಆಹಾರ ಬಳಸಿ ಎಂದು ಹೇಳಿದರು.

ಪ್ರಗತಿಪರ ರೈತ ಗುಂಡಪ್ಪ ಧೂಳಗೊಂಡ ಮಾತನಾಡಿ, ನಿರಂತರವಾಗಿ ಹೊಲದ ಕೆಲಸದಲ್ಲಿ ತೊಡಗಬೇಕು. ಸಂಪೂರ್ಣ ಕೃಷಿ ಮೇಲೆಯೇ ಅವಲಂಬಿತವಾಗಿರದೇ, ರೇಷ್ಮೆ, ಕುರಿ, ಕೋಳಿ, ಜೇನು ಸಾಕಾಣಿಕೆ, ಪಶು ಸಂಗೋಪನೆ, ಎರೆಗುಳು ಗೊಬ್ಬರ ತಯಾರಿಕೆ, ಸಾವಯುವ ಬೇಸಾಯ ಸೇರಿದಂತೆ ಸಮಗ್ರ ಕೃಷಿ ಪದ್ಧತಿ ಅನುಸರಿಸಬೇಕು ಎಂದು ಸಲಹೆ ನೀಡಿದರು. ನನ್ನ 3.22 ಎಕರೆಯಲ್ಲಿ ಪ್ರತಿವರ್ಷ ಕನಿಷ್ಟ 7 ಲಕ್ಷ ರೂ. ನಿವ್ಹಳ ಲಾಭ ಪಡೆಯುತ್ತೇನೆ ಎಂದು ಹೇಳಿದರು.

ನಿವೃತ್ತ ಮುಖ್ಯ ಶಿಕ್ಷಕ ಬಸಯ್ಯಸ್ವಾಮಿ ಹೊದಲೂರ ರೈತ ಗೀತೆ ಪ್ರಸ್ತುತ ಪಡಿಸಿದರು. ಪ್ರಮುಖರಾದ ಎಚ್‌.ಬಿ.ಪಾಟೀಲ, ದೇವೇಂದ್ರಪ್ಪ ಗಣಮುಖೀ, ಪರಮೇಶ್ವರ ದೇಸಾಯಿ, ಬಸವರಾಜ ಎಸ್‌.ಪುರಾಣೆ, ಶರಣಬಸಪ್ಪ ಮಾಲಿಬಿರಾದಾರ ದೇಗಾಂವ, ಅಂಬಾರಾಯ ಕಡ್ಲಾ, ಚಂದ್ರಕಾಂತ ಯಲಗೊಂಡ, ಶರಣಬಸಪ್ಪ ಹಡಪದ, ದೇವೇಂದ್ರಪ್ಪ ಹಡಪದ, ಬಸವರಾಜ ನಾಟೀಕಾರ, ಅಶೋಕ ಮಂಗೊಂಡೆ, ನೀಲಕಂಠ ಪೊಲೀಸ್‌ ಪಾಟೀಲ, ಶಶಿಕಲಾ ಜಿ. ಧೂಳಗೊಂಡ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.