ನಿಜಾಮರ ವಿರುದ್ಧದ ಹೋರಾಟ ರೋಮಾಂಚನಕಾರಿ
Team Udayavani, Aug 13, 2018, 11:34 AM IST
ಕಲಬುರಗಿ: ನಿಜಾಮರ ನಾಡಿನಲ್ಲಿ ನಡೆದ ಸ್ವಾತಂತ್ರ್ಯಾ ಹೋರಾಟ ಹಾಗೂ ಏಕೀಕರಣ ಚಳವಳಿ ಇತಿಹಾಸ ಮೈನವಿರೇಳಿಸುವ ಒಂದು ರೋಚಕ ಕಥೆ. ಹೈಕ ಭಾಗವನ್ನು ನಿಜಾಮನ ಕಪಿಮುಷ್ಠಿಯಿಂದ ಸ್ವತಂತ್ರಗೊಳಿಸಲು ಅನೇಕರು ತ್ಯಾಗ-ಬಲಿದಾನ ಮಾಡಿದ್ದಾರೆ. ಅವರ ಸ್ಮರಣೆ ನಿರಂತರ ನಡೆಯಲಿ ಎಂದು ಕರ್ನಾಟಕ ಗೃಹ ರಕ್ಷಕ ದಳದ ಕಮಾಂಡೆಂಟ್ ಸಂತೋಷ ಪಾಟೀಲ ಸರಡಗಿ ಹೇಳಿದರು.
ಭಾರತೀಯ ವಿದ್ಯಾ ಕೇಂದ್ರದಲ್ಲಿ ಸ್ವಾತಂತ್ರ್ಯೊತ್ಸವ ಸವಿನೆನಪಿಗಾಗಿ ವಿಶ್ವಜ್ಯೋತಿ ಪ್ರತಿಷ್ಠಾನ, ಶಿರಪುರ ಪ್ರಕಾಶನ, ಕನ್ನಡನಾಡು ಲೇಖಕರ ಹಾಗೂ ಓದುಗರ ಸಹಕಾರ ಸಂಘದ ಸಹಯೋಗದೊಂದಿಗೆ ಕಳೆದ 10 ದಿನಗಳಿಂದ ನಡೆಸಲಾಗುತ್ತಿರುವ ಸ್ವಾತಂತ್ರ್ಯೊಕ್ಕಾಗಿ… ಸಾವಿರದ ಹೋರಾಟಗಾರರ ಸರಣಿ ಉಪನ್ಯಾಸ ಮಾಲಿಕೆ ಸಮಾರೋಪ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಅವರು ಮಾತನಾಡಿದರು.
ಹಿರಿಯ ಸಾಹಿತಿ ಡಾ| ಸ್ವಾಮಿರಾವ್ ಕುಲಕರ್ಣಿ ಮಾತನಾಡಿ, ಸ್ವಾತಂತ್ರ್ಯೊ ಹೋರಾಟಗಾರ ಜಗನ್ನಾಥರಾವ್ ಚಂಡ್ರಿಕಿ
ಹೈಕ ಜನರ ಮನ ಗೆದ್ದ ನಾಯಕರಾಗಿದ್ದರು. ಇವರು ಕೇವಲ ಒಬ್ಬ ವ್ಯಕ್ತಿಯಾಗಿರದೇ ಹೈಕ ಭಾಗದ ಶಕ್ತಿಯಾಗಿದ್ದರು.
ದೇಶಪ್ರೇಮಿ, ಗಾಂಧೀವಾದಿ ಹಾಗೂ ನೇರ-ನುಡಿಯನ್ನು ಅಳವಡಿಸಿಕೊಂಡಿದ್ದ ಇವರು ಇಂದಿನ ಪೀಳಿಗೆಗೆ ಆದರ್ಶರು
ಎಂದರು. ಭಾರತೀಯ ವಿದ್ಯಾ ಕೇಂದ್ರದ ಚನ್ನವೀರಪ್ಪ ಗುಡ್ಡಾ ಅಧ್ಯಕ್ಷತೆ ವಹಿಸಿದ್ದರು.
ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ ತೇಗಲತಿಪ್ಪಿ , ರವೀಂದ್ರಕುಮಾರ ಭಂಟನಳ್ಳಿ, ಶರಣರಾಜ ಛಪ್ಪರಬಂದಿ, ಜಗದೀಶ ಮರಪಳ್ಳಿ, ಪರಮೇಶ್ವರ ಶಟಕಾರ, ಶ್ರೀಕಾಂತ ಪಾಟೀಲ ತಿಳಗೂಳ, ಶಿವಾನಂದ ಮಠಪತಿ, ರಾಜಶೇಖರ ಯಾಳಗಿ, ಸವಿತಾ ಪಾಟೀಲ ಸೊಂತ, ಜ್ಯೋತಿ ಹಿರೇಮಠ, ಪ್ರಭುಲಿಂಗ ಯಳವಂತಗಿ ಹಾಜರಿದ್ದರು. ಕನ್ನಡ ಮತ್ತು
ಸಂಸ್ಕೃತಿ ಇಲಾಖೆ ಸಹಕಾರದಿಂದ ಸಂಗೀತ ಕಲಾವಿದ ಮಹೇಶಕುಮಾರ ಬಡಿಗೇರ ದೇಶಭಕ್ತಿ ಗೀತೆಗಳನ್ನು ಪ್ರಸ್ತುತ ಪಡಿಸಿದರು. ಪುಸ್ತಕ ಪದರ್ಶನ ಹಾಗೂ ಮಾರಾಟದ ವ್ಯವಸ್ಥೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.