ಫರ್ಸಿ ನಾಡಲ್ಲಿ ಮಂಜು ಮುಸುಕಿದ ವಾತಾವರಣ
Team Udayavani, Dec 20, 2018, 11:25 AM IST
ಶಹಾಬಾದ: ವಿಶ್ವದ ಭೂಪಟದಲ್ಲಿಯೇ ಫರ್ಸಿ ನಾಡು, ಕಲ್ಲಿನ ಗಣಿ ಹಾಗೂ ಸಿಮೆಂಟ ಉದ್ಯಮಗಳ ಮೂಲಕ ತನ್ನ ಛಾಪು
ಮೂಡಿಸಿರುವ ನಗರದಲ್ಲಿ ಬುಧವಾರ ಬೆಳಗ್ಗೆ ಮಂಜು ದಟ್ಟವಾಗಿ ಆವರಿಸಿ ರಸ್ತೆ ಕಾಣದಂತೆ ಆಗಿದ್ದು ನೋಡುಗರಿಗೆ
ಆಶ್ಚರ್ಯ ಉಂಟಾದರೆ, ಪ್ರಕೃತಿ ಪ್ರಿಯರಿಗೆ ರಸದೌತಣ ನೀಡಿದಂತಾಗಿತ್ತು.
ನಗರದಲ್ಲಿ ಬೆಳಗ್ಗೆ 6 ರಿಂದ 8ರ ವರೆಗೆ ಯಾವುದೇ ದಿಕ್ಕಿಗೂ ಕಣ್ಣು ಹಾಯಿಸಿದರೂ ಮಂಜು ಮುಸುಕಿದ ವಾತಾವರಣದಿಂದ ಎಲ್ಲಿಲ್ಲದ ಅಚ್ಚರಿ ಉಂಟಾಯಿತು. ವಾಯು ವಿಹಾರಕ್ಕೆ ಹೊರಟ ಜನರಿಗೆ ಪಕ್ಕದ ಮನೆ, ರಸ್ತೆಯಲ್ಲಿ ಹೋಗುವ ಜನರು, ಎಲ್ಲವೂ ಅಸ್ಪಷ್ಟವಾಗಿ, ಅದೃಶ್ಯವಾಗಿ ಕಾಣುತ್ತಿದ್ದನ್ನು ಕಂಡು ರೋಮಾಂಚನವಾಯಿತು.
ವಾಯುವಿಹಾರಕ್ಕೆ ಹೊರಟ ಶಿಕ್ಷಕ ಹಾಗೂ ಯೋಗಪಟು ನಾಗರಾಜ ದಂಡಾವತಿ ತಕ್ಷಣ “ಉದಯವಾಣಿ’ಗೆ ತಿಳಿಸಿದರು. ತಮ್ಮ ಮೊಬೈಲ್ ಕ್ಯಾಮಾರದಿಂದ ಈ ಭಾಗದಲ್ಲಿ ಮೂಡುವ ಅಪರೂಪದ ಕ್ಷಣದ ದೃಶ್ಯಗಳನ್ನು ಸೆರೆಹಿಡಿದು “ಉದಯವಾಣಿ’ಗೆ ನೀಡಿದರು.
ಸುಣ್ಣದ ಅಂಶವನ್ನು ಹೊಂದಿರುವ ಇಲ್ಲಿನ ಭೂಮಿ ಬೇಸಿಗೆಯಲ್ಲಿ ಶಾಖದಿಂದ ಇನ್ನಷ್ಟು ಸೆಕೆಯನ್ನು ಉತ್ಪತ್ತಿ ಮಾಡಿದರೆ, ಮಳೆಗಾಲದಲ್ಲಿ ಸ್ವಲ್ಪ ಮಳೆಯಾದರೆ ಬಾಣೆಲೆ ಮೇಲೆ ನೀರು ಹಾಕಿದಂತಾಗುತ್ತದೆ. ಬಿಸಿಲ ನಾಡೆಂದೇ ಪ್ರಖ್ಯಾತಿ ಪಡೆದ ಈ ಭಾಗದಲ್ಲಿ ಇಂತಹ ರೋಚಕ ಕ್ಷಣಗಳು ಕಾಣುವುದೇ ಅಸಾಧ್ಯ ಎಂದು ತಿಳಿದುಕೊಂಡವರಿಗೆ ಪ್ರಕೃತಿ ಬದಲಾವಣೆಯ ಪಾಠ ಕಲಿಸಿದೆ ಎಂದು ಹೇಳುತ್ತಾರೆ ನಾಗರಾಜ.
ಮಡಿಕೇರಿ, ಶೈಂಗೇರಿ, ಆಗುಂಬೆ, ಚಾರ್ಮುಡಿ ಘಾಟ್‌ಗಳಲ್ಲಿ ಮಂಜು ಮುಸುಕಿದ ವಾತಾವರಣ ಸರ್ವೇ ಸಾಮಾನ್ಯವಾಗಿ ಕಂಡು ಬರುವ ದೃಶ್ಯಗಳು. ಇಂತಹ ಅಪರೂಪದ ಕ್ಷಣ ನಗರದಲ್ಲಿ ಸೃಷ್ಟಿಯಾಗಿ ಕೆಲ ಸಮಯದವರೆಗೆ ಕಣ್ಣನ್ನು
ಮಿಟುಕಿಸದೇ ಪ್ರಕೃತಿ ಸೊಬಗನ್ನು ಜನರು ಆಸ್ವಾದಿಸಿದರು. ಈ ಮಂಜು ಮುಸುಕಿದ ವಾತಾವರಣದಿಂದ ಸಣ್ಣೂರ ರಸ್ತೆಯಲ್ಲಿ ವಾಹನ ಚಾಲಕರಿಗೆ ತೊಂದರೆಯಾದರೆ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ದ್ವಿಚಕ್ರ ಸವಾರರು ಬಿದ್ದು ಸಣ್ಣ ಪುಟ್ಟ ಅಪಘಾತಗಳಾಗಿವೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.